ನಿಂದಿಸುವುದನ್ನು ಆತ್ಮಹತ್ಯೆಗೆ ಪ್ರಚೋದನೆಯೆಂದು ಪರಿಗಣಿಸಲಾಗದು: ಸುಪ್ರೀಂ ಕೋರ್ಟ್‌

Date:

ನಿಂದಿಸುವುದನ್ನು, ಗದರಿಸುವುದು ಆತ್ಮಹತ್ಯೆ ಪ್ರಚೋದನೆಯೆಂದು ಪರಿಗಣಿಸಲಾಗದು ಎಂದು ಹೇಳಿದ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯನ್ನು ಗದರಿಸಿ ಆತ್ಮಹತ್ಯೆಗೆ ಪ್ರಚೋದಿಸಿದ ಪ್ರಕರಣವನ್ನು ಖುಲಾಸೆಗೊಳಿಸಿದೆ.

ತಮಿಳುನಾಡಿನ ಶಾಲೆಯೊಂದರಲ್ಲಿ ಶಾಲೆ ಮತ್ತು ಹಾಸ್ಟೆಲ್‌ನ ಉಸ್ತುವಾರಿ ವಹಿಸಿದ್ದ ಆರೋಪಿ, ಮತ್ತೊಬ್ಬ ವಿದ್ಯಾರ್ಥಿಯ ದೂರಿನ ಮೇರೆಗೆ ವಿದ್ಯಾರ್ಥಿಯೊಬ್ಬನನ್ನು ಗದರಿಸಿದ್ದರು. ಇದಾದ ಬೆನ್ನಲ್ಲೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ.

ಇದನ್ನು ಓದಿದ್ದೀರಾ? ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಗದರಿಸುವುದರಿಂದ ಇಂತಹ ದುರಂತ ಉಂಟಾಗುತ್ತದೆ ಎಂದು ಯಾವುದೇ ಸಾಮಾನ್ಯ ವ್ಯಕ್ತಿ ಊಹಿಸಲೂ ಸಾಧ್ಯವಿಲ್ಲ ಎಂದಿದೆ.

ಈ ಮೂಲಕ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಿಂದ ಶಿಕ್ಷಕನನ್ನು ಮುಕ್ತಗೊಳಿಸಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

“ವಿಷಯವನ್ನು ಸಂಪೂರ್ಣವಾಗಿ ಪರಿಗಣಿಸಿದ ನಂತರ ನಾವು ಹಸ್ತಕ್ಷೇಪ ಮಾಡಲು ಸೂಕ್ತವಾದ ಪ್ರಕರಣವೆಂದು ತಿಳಿದುಬಂದಿದೆ. ಇನ್ನೋರ್ವ ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ವಿದ್ಯಾರ್ಥಿಗೆ ಗದರಿಸಲಾಗಿದ್ದು ಇದರಿಂದ ಅಂತಹ ದುರಂತ ಸಂಭವಿಸುತ್ತದೆ ಎಂದು ಯಾವುದೇ ಸಾಮಾನ್ಯ ವ್ಯಕ್ತಿ ಊಹಿಸಲು ಸಾಧ್ಯವಿಲ್ಲ” ಎಂದು ಪೀಠ ಹೇಳಿದೆ.

“ಮೃತ ವಿದ್ಯಾರ್ಥಿ ಮಾಡಿದ ತಪ್ಪನ್ನು ಮತ್ತೆ ಮಾಡದಂತೆ ಶಿಕ್ಷಕ ತಿಳಿಸಿದ್ದಾರೆ. ಹಾಸ್ಟೆಲ್‌ನಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಅವರದ್ದಾಗಿದರುವ ಕಾರಣ ಗದರಿಸಿದ್ದಾರೆ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...