ಹಿಂಡನ್‌ಬರ್ಗ್ | ಪತಿಯ ಬಾಲ್ಯದ ಸ್ನೇಹಿತನ ಫಂಡ್‌ನಲ್ಲಿ ಹೂಡಿಕೆ ಮಾಡಲಾಗಿದೆ, ಅದಾನಿಗಲ್ಲ: ಸೆಬಿ ಅಧ್ಯಕ್ಷೆ

Date:

ಅದಾನಿ ಗ್ರೂಪ್‌ನ ಹಗರಣಗಳಲ್ಲಿ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಪತಿ ಧವಲ್ ಬುಚ್ ಭಾಗಿಯಾಗಿರುವ ಹಿಂಡನ್‌ಬರ್ಗ್ ವರದಿಯ ಬಗ್ಗೆ ಮಾಧವಿ ಬುಚ್ ಮತ್ತು ಧವಲ್ ಬುಚ್ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ನನ್ನ ಪತಿಗೆ ಅನಿಲ್ ಅಹುಜಾ ಜೊತೆಗಿನ ಬಾಲ್ಯದ ಸ್ನೇಹದಿಂದಾಗಿ ಐಪಿಇ-ಪ್ಲಸ್ ಫಂಡ್‌ನಲ್ಲಿ ಹೂಡಿಕೆ ಮಾಡಲಾಗಿದೆಯೇ ಹೊರತು ಹಣ ಅದಾನಿಗೆ ಹೋಗಿಲ್ಲ” ಎಂದೂ ಹೇಳಿಕೊಂಡಿದ್ದಾರೆ.

“ಭಾರತದಲ್ಲಿನ ವಿವಿಧ ನಿಯಮಗಳ ಉಲ್ಲಂಘನೆಗಳಿಗಾಗಿ ಹಿಂಡನ್‌ಬರ್ಗ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಶೋಕಾಸ್ ನೋಟಿಸ್‌ಗೆ ಪ್ರತ್ಯುತ್ತರ ನೀಡುವ ಬದಲು, ಅವರು ಸೆಬಿಯ ವಿಶ್ವಾಸಾರ್ಹತೆಯ ಮೇಲೆ ದಾಳಿ ಮಾಡಲು ಮತ್ತು ಸೆಬಿ ಅಧ್ಯಕ್ಷರ ಚಾರಿತ್ರ್ಯಹರಣ ಮಾಡಲು ಯತ್ನಿಸಿರುವುದು ದುರದೃಷ್ಟಕರ” ಎಂದು ಸೆಬಿ ಅಧ್ಯಕ್ಷೆ ಮತ್ತು ಅವರ ಪತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಿಂಡನ್‌ಬರ್ಗ್ ಸ್ಪೋಟಕ ವರದಿ; ಅದಾನಿ ಗ್ರೂಪ್‌ನಿಂದ ಹೇಳಿಕೆ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಧವಿ ಐಐಎಂ ಅಹಮದಾಬಾದ್‌ನ ಹಳೆಯ ವಿದ್ಯಾರ್ಥಿಯಾಗಿದ್ದು, ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳಲ್ಲಿ ಹೆಚ್ಚಾಗಿ ಐಸಿಐಸಿಐ ಗ್ರೂಪ್‌ನಲ್ಲಿ ಎರಡು ದಶಕಗಳ ಕಾರ್ಪೊರೇಟ್ ವೃತ್ತಿಜೀವನವನ್ನು ಹೊಂದಿದ್ದಾರೆ. ಧವಲ್ ಬುಚ್ ಐಐಟಿ ದೆಹಲಿಯ ಹಳೆಯ ವಿದ್ಯಾರ್ಥಿ ಮತ್ತು ಭಾರತದಲ್ಲಿ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್‌ನಲ್ಲಿ 35 ವರ್ಷಗಳ ಕಾರ್ಪೊರೇಟ್ ವೃತ್ತಿಜೀವನವನ್ನು ಹೊಂದಿದ್ದಾರೆ. ನಂತರ ಜಾಗತಿಕವಾಗಿ ಯುನಿಲಿವರ್‌ನಲ್ಲಿ ಅದರ ಹಿರಿಯ ನಿರ್ವಹಣಾ ತಂಡದ ಭಾಗವಾಗಿದ್ದಾರೆ” ಎಂದು ತಿಳಿಸಿರುವ ದಂಪತಿ ತಮ್ಮ ಹೂಡಿಕೆಯ ಬಗ್ಗೆ ಉಲ್ಲೇಖಿಸಿದ್ದಾರೆ.

“ಈ ಸುದೀರ್ಘ ಅವಧಿಯಲ್ಲಿ, ಮಾಧವಿ ಮತ್ತು ಧವಲ್ ತಮ್ಮ ಸಂಬಳ, ಬೋನಸ್ ಮತ್ತು ಸ್ಟಾಕ್ ಆಯ್ಕೆಗಳ ಮೂಲಕ ತಮ್ಮ ಉಳಿತಾಯವನ್ನು ಸಂಗ್ರಹಿಸಿದ್ದಾರೆ. ಹಾಗಿರುವಾಗ ಅವರ ನಿವ್ವಳ ಮೌಲ್ಯ ಮತ್ತು ಮಾಧವಿಯ ಪ್ರಸ್ತುತ ಸರ್ಕಾರಿ ವೇತನವನ್ನು ಹೂಡಿಕೆಯೊಂದಿಗೆ ಹೊಂದಿಸುವ ಪ್ರಚೋದನೆಗಳು ದುರುದ್ದೇಶಪೂರಿತ ಮತ್ತು ಪ್ರೇರಿತವಾಗಿದೆ” ಎಂದು ಆರೋಪಿಸಿದ್ದಾರೆ.

“ಹಿಂಡನ್‌ಬರ್ಗ್ ವರದಿಯಲ್ಲಿ ಉಲ್ಲೇಖಿಸಲಾದ ಹೂಡಿಕೆಯನ್ನು 2015ರಲ್ಲಿ ಸಿಂಗಾಪುರದಲ್ಲಿ ವಾಸಿಸುತ್ತಿದ್ದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಮಾಧವಿ ಸೆಬಿಗೆ ಸೇರುವ ಸುಮಾರು 2 ವರ್ಷಗಳ ಮೊದಲು ಮಾಡಲಾಗಿದೆ” ಎಂದು ಹೇಳಿದ್ದಾರೆ. ಆದರೆ ಹೂಡಿಕೆಯನ್ನು ಅಲ್ಲಗಳೆದಿಲ್ಲ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...