ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಆಸಿಫ್ ಶೇಖ್ ಮನೆ ಸ್ಫೋಟಿಸಿದ ಭದ್ರತಾ ಪಡೆ

Date:

ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ತಾಲೂಕಿನ ಗೋರಿ ಪ್ರದೇಶದಲ್ಲಿರುವ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಭದ್ರತಾ ಪಡೆ ಸ್ಫೋಟಿಸಿದೆ.

ಮತ್ತೊಬ್ಬ ಸ್ಥಳೀಯ ಭಯೋತ್ಪಾದಕ ಆದಿಲ್ ಥೋಕರ್ ಅಲಿಯಾಸ್ ಆದಿಲ್ ಗುರಿ ಎಂಬಾತ, ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯನ್ನು ಕಾರ್ಯಗತಗೊಳಿಸಲು ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡಿದ ಆರೋಪವಿದೆ. ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಎಂದು ಶಂಕಿಸಲಾದ ಉಗ್ರನ ಮನೆಯನ್ನು ಭದ್ರತಾ ಪಡೆಗಳು ಬುಲ್ಡೋಜರ್‌ ಮೂಲಕ ನೆಲಸಮ ಮಾಡಿವೆ ಎಂದು ವರದಿಯಾಗಿದೆ.

ಪಹಲ್ಗಾಮ್‌ನಲ್ಲಿ ನಾಲ್ವರು ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಿ 28 ಮಂದಿಯನ್ನು ಹತ್ಯೆ ಮಾಡಿದ್ದರು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದು, ಭಾರತದ ವಿವಿಧ ರಾಜ್ಯಗಳಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲು ಆಗಮಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಷಾ ವೈಷಮ್ಯ ಬಿತ್ತಿದ ಭಂಡರು, ಬಿತ್ತರಿಸಿದ ಬುದ್ಧಿಗೇಡಿಗಳು

ಸೇನಾ ಮೂಲಗಳ ಪ್ರಕಾರ, ಆದಿಲ್ 2018ರಲ್ಲಿ ಅಟ್ಟಾರಿ-ವಾಘಾ ಗಡಿಯ ಮೂಲಕ ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದನು. ಪಾಕಿಸ್ತಾನದಲ್ಲಿದ್ದಾಗ ಭಯೋತ್ಪಾದಕ ಶಿಬಿರದಲ್ಲಿ ತರಬೇತಿ ಪಡೆದು ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿದ್ದನು. ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ಭಯೋತ್ಪಾದಕರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಸೇರಿದವರು ಎಂದು ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...