ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಚಾಕುರ್ಕರ್ ನಿಧನ

Date:

ಮಾಜಿ ಕೇಂದ್ರ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಚಾಕುರ್ಕರ್ ಅವರು ತಮ್ಮ 90ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಶಿವರಾಜ್ ಅವರು ವಯೋಸಹಜ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಹಲವಾರು ವರ್ಷಗಳಿಂದ ಸಕ್ರಿಯ ರಾಜಕೀಯದಿಂದ ದೂರವಿದ್ದರು. ಕಠಿಣ ಶ್ರಮಜೀವಿ, ಸರಳತೆ ಹಾಗೂ ಸ್ವಚ್ಛ ಮನಸ್ಸಿನ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದರು.

ಶಿವರಾಜ್ ಪಾಟೀಲ್ ಅವರು 1935ರ ಅಕ್ಟೋಬರ್ 12ರಂದು ಲಾತೂರ್ ಜಿಲ್ಲೆಯ ಚಾಕುರ್‌ನಲ್ಲಿ ಜನಿಸಿದರು. ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ವಿಜ್ಞಾನ ಅಧ್ಯಯನ ಮಾಡಿ ಮುಂಬೈ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದರು. 1967ರಲ್ಲಿ ಲಾತೂರ್ ಪುರಸಭೆಗೆ ಚುನಾಯಿತರಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರು 1980ರಲ್ಲಿ ಲಾತೂರ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ತರುವಾಯ, 1999 ರವರೆಗೆ ಸತತ ಏಳು ಬಾರಿ ಲೋಕಸಭೆಗೆ ಆಯ್ಕೆಯಾದರು. ಕಾಂಗ್ರೆಸ್ ಪಕ್ಷದ ಪ್ರಭಾವಿ ಸಂಸದೀಯ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡರು. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸಚಿವ ಸಂಪುಟಗಳಲ್ಲಿ ರಕ್ಷಣೆ, ವಾಣಿಜ್ಯ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಮಾಣು ಶಕ್ತಿ, ಎಲೆಕ್ಟ್ರಾನಿಕ್ಸ್ ಹಾಗೂ ಬಾಹ್ಯಾಕಾಶ ಸೇರಿದಂತೆ ಹಲವಾರು ಪ್ರಮುಖ ಇಲಾಖೆಗಳ ರಾಜ್ಯ ಸಚಿವ ಖಾತೆಗಳನ್ನು ನಿಭಾಯಿಸಿದ್ದರು.

ಈ ಲೇಖನ ಓದಿದ್ದೀರಾ?: ಪಶ್ಚಿಮ ಬಂಗಾಳ | ಮುಸ್ಲಿಮರ ಓಲೈಕೆಗೆ ಬಿಜೆಪಿ ತಂತ್ರ-ಕುತಂತ್ರ

1991 ರಿಂದ 1996 ರವರೆಗೆ ಅವರು 10ನೇ ಲೋಕಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ, ಸಂಸದೀಯ ಕಲಾಪಗಳ ಆಧುನೀಕರಣ, ಗಣಕೀಕರಣ, ನೇರ ಪ್ರಸಾರ ಹಾಗೂ ಹೊಸ ಗ್ರಂಥಾಲಯ ಕಟ್ಟಡ ಸೇರಿದಂತೆ ಹಲವಾರು ಪ್ರಮುಖ ಕ್ರಮಗಳನ್ನು ತೆಗೆದುಕೊಂಡರು.

2004ರಲ್ಲಿ ಅಧಿಕಾರಕ್ಕೆ ಬಂದ ಯುಪಿಎ-1ರ ಅಧಿಕಾರಾವಧಿಯಲ್ಲಿ ಅವರು ಕೇಂದ್ರ ಗೃಹ ಸಚಿವರರಾಗಿದ್ದರು. ಅವರ ಅಧಿಕಾರಾವಧಿಯಲ್ಲಿ, 26/11 ಮುಂಬೈ ಭಯೋತ್ಪಾದಕ ದಾಳಿ ನಡೆದಿದ್ದರಿಂದ, ಭದ್ರತಾ ಲೋಪಗಳಿಗೆ ನೈತಿಕ ಹೊಣೆ ಹೊತ್ತು 2008ರ ನವೆಂಬರ್ 30 ರಂದು ರಾಜೀನಾಮೆ ನೀಡಿದರು. 2010 ರಿಂದ 2015 ರವರೆಗೆ ಪಂಜಾಬ್ ರಾಜ್ಯಪಾಲರಾಗಿ, ಚಂಡೀಗಢದ ಆಡಳಿತಗಾರರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಸಂಘಟನೆಯಲ್ಲಿಯೂ ಸಕ್ರಿಯರಾಗಿದ್ದ ಅವರು, ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಪಕ್ಷದ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...