ಹಿರಿಯ ಪತ್ರಕರ್ತ ಸಿದ್ಧಾರ್ಥ್ ವರದರಾಜನ್‌ ‘ಮೀಡಿಯಾ ಫಾರ್ ಯೂನಿಟಿ ಡಿಜಿಟಲ್’ ಪ್ರಶಸ್ತಿಗೆ ಭಾಜನ

Date:

ನಯಿ ದುನಿಯಾ ಫೌಂಡೇಶನ್ ನೀಡುವ ‘ಮೀಡಿಯಾ ಫಾರ್ ಯೂನಿಟಿ ಡಿಜಿಟಲ್’ ಪ್ರಶಸ್ತಿಯನ್ನು ನೀಡಿ ಪತ್ರಕರ್ತರು, ಚಲನಚಿತ್ರ ನಿರ್ಮಾಪಕರು ಮತ್ತು ಬರಹಗಾರರನ್ನು ಏಪ್ರಿಲ್ 19ರಂದು ಸನ್ಮಾನಿಸಲಾಯಿತು. ಹಿರಿಯ ಪತ್ರಕರ್ತ, ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್‌ ಅವರೂ ಈ ಪ್ರಶಸ್ತಿಗೆ ಭಾಜನರಾದರು.

ದೆಹಲಿಯ ಇಂಡಿಯಾ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ನ್ಯಾಯ, ಶಾಂತಿ ಮತ್ತು ಸಾಮಾಜಿಕ ಸಾಮರಸ್ಯದ ಮೌಲ್ಯಗಳನ್ನು ಎತ್ತಿಹಿಡಿಯುವ ಪತ್ರಕರ್ತರಿಗೆ ನೀಡಲಾಗುವ ಮೊದಲ ಮೀಡಿಯಾ ಫಾರ್ ಯೂನಿಟಿ ಪ್ರಶಸ್ತಿಯನ್ನು ನೀಡಲಾಗಿದೆ.

ಇದನ್ನು ಓದಿದ್ದೀರಾ? ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಲನಚಿತ್ರ ನಿರ್ಮಾಪಕ ಅನುಭವ್ ಸಿನ್ಹಾ, ಹಿರಿಯ ಪತ್ರಕರ್ತ ಮೃಣಾಲ್ ಪಾಂಡೆ, ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, ದಿ ಹಿಂದೂನ ಸುಹಾಸಿನಿ ಹೈದರ್ ಮತ್ತು ಬರಹಗಾರ-ಪತ್ರಕರ್ತ ಅರುಣ್ ಶೌರಿ ಸೇರಿದಂತೆ ಹಲವು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಮುದ್ರಣ, ಡಿಜಿಟಲ್, ದೂರದರ್ಶನ, ರಂಗಭೂಮಿ ಮತ್ತು ಸಾಹಿತ್ಯದ ಅತ್ಯುತ್ತಮ ಸಾಧನೆಗಳಿಗಾಗಿ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಮುಖ್ಯ ಚುನಾವಣಾ ಆಯುಕ್ತ ಡಾ. ಎಸ್.ವೈ. ಖುರೇಷಿ ನೇತೃತ್ವದ ಸಮಿತಿಯು ವಿವಿಧ ಮಾಧ್ಯಮ ವೇದಿಕೆಗಳಲ್ಲಿ ಕಲೆ, ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಆಯ್ಕೆ ಮಾಡಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ನ್ಯಾಯಮೂರ್ತಿ ಮದನ್ ಲೋಕೂರ್, “ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಹಲ್ಲೆಯ ವಿಧಾನವು ವಿಭಿನ್ನವಾಗಿರಬಹುದು, ಆದರೆ ಪರಿಣಾಮ ಒಂದೇ ಆಗಿರುತ್ತದೆ” ಎಂದು ಹೇಳಿದರು.

“ಪತ್ರಕರ್ತರನ್ನು ಜಾಮೀನು ಇಲ್ಲದೆ ವರ್ಷಗಳ ಕಾಲ ಜೈಲಿನಲ್ಲಿ ಇರಿಸಲಾಗುತ್ತಿದೆ. ಪತ್ರಕರ್ತರು ಮಾತ್ರವಲ್ಲ, ಉಮರ್ ಖಾಲಿದ್ ಮತ್ತು ಗುಲ್ಫಿಶಾ ಫಾತಿಮಾ ಅವರಂತಹ ಜನರು ಜಾಮೀನು ಇಲ್ಲದೆ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ಯಾಕೆ? ನ್ಯಾಯಾಂಗದಲ್ಲಿ ಏನಾದರೂ ನ್ಯೂನತೆ ಇದೆಯೇ? ಅಥವಾ ಯಾವುದೇ ಪುರಾವೆಗಳಿಲ್ಲದಿದ್ದರೂ ನ್ಯಾಯಾಂಗವು ಜಾಮೀನು ನೀಡಲು ಹೆದರುತ್ತಿದೆಯೇ? ಇವು ನಾವು ಕೇಳಬೇಕಾದ ಪ್ರಶ್ನೆಗಳು” ಎಂದು ಹೇಳಿದರು.

“ಫಾದರ್ ಸ್ಟಾನ್ ಸ್ವಾಮಿ ಅನಾರೋಗ್ಯವಿದ್ದರೂ ಜಾಮೀನು, ಸರಿಯಾದ ಚಿಕಿತ್ಸೆ ಲಭಿಸದೆ ಜೈಲಿನಲ್ಲಿ ನಿಧನರಾದರು. ಬಹುತೇಕ ಶೇಕಡ 100ರಷ್ಟು ಅಂಗವಿಕಲರಾಗಿರುವ ಪ್ರೊಫೆಸರ್ ಸಾಯಿ ಬಾಬಾ ಅವರಿಗೆ ಜಾಮೀನು ನೀಡುವ ಮೊದಲು ವರ್ಷಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು. ಅದು ಪತ್ರಿಕಾ ಅಥವಾ ನ್ಯಾಯಾಂಗವಾಗಲಿ, ಇವು ಇಂದು ನಾವು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳು” ಎಂದು ಅಭಿಪ್ರಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...