ಕಾಸರಗೋಡು | ಶೂ‌ ಧರಿಸಿದ್ದಕ್ಕೆ‌ ಹಿರಿಯ ವಿದ್ಯಾರ್ಥಿಗಳಿಂದ ರ್‍ಯಾಗಿಂಗ್: ಪ್ಲಸ್1 ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

Date:

ಶೂ ಧರಿಸಿದ್ದಾನೆ ಎಂಬ ಕಾರಣಕ್ಕೆ ಪ್ಲಸ್1 (ಪ್ರಥಮ ಪಿಯುಸಿ) ವಿದ್ಯಾರ್ಥಿಯೋರ್ವನನ್ನು ಪ್ಲಸ್2 (ದ್ವಿತೀಯ ಪಿಯುಸಿ) ವಿದ್ಯಾರ್ಥಿಗಳು ಅತಿ ಕ್ರೂರವಾಗಿ ರ್‍ಯಾಗಿಂಗ್ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಚಿತ್ತಾರಿಯಲ್ಲಿ ನಡೆದಿದೆ.

ಚಿತ್ತಾರಿ ಜಮಾಅತ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಪಳ್ಳಿಕೆರೆಯ ಬಿಲಾಲ್ ನಗರದ ಹುಡುಗ ರ್‍ಯಾಗಿಂಗ್‌ಗೆ ಒಳಗಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಶೂ ಧರಿಸಿ ಕಾಲೇಜಿಗೆ ಬಂದ ವಿಚಾರವಾಗಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಯನ್ನು ರ್‍ಯಾಗಿಂಗ್ ಮಾಡಿದ್ದಾರೆ. ಬಳಿಕ ಕಾಲೇಜಿನ ಸಮೀಪದ ಬಸ್‌ಸ್ಟಾಂಡ್‌ಗೆ ಕರೆದುಕೊಂಡು ಹೋಗಿ ಅಲ್ಲಿ ಆತನ ಬಳಿ ಹಾಡು ಹಾಡಲು ಹೇಳಿದ್ದಾರೆ. ಇದಕ್ಕೆ ಅಸಮ್ಮತಿಸಿದಾಗ ಹಿರಿಯ ವಿದ್ಯಾರ್ಥಿಗಳು ಗುಂಪು ಕಟ್ಟಿ ಗಂಭೀರ ಹಲ್ಲೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಯಿಂದಾಗಿ ವಿದ್ಯಾರ್ಥಿಯ ಕಿವಿ ಮತ್ತು ಕಣ್ಣಿಗೆ ಹಾನಿಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ವೈರಲಾಗಿರುವ ವಿಡಿಯೋದಲ್ಲಿ ಹಿರಿಯ ವಿದ್ಯಾರ್ಥಿಗಳ ಗುಂಪು ಹುಡುಗನ ಮುಖದ ಮೇಲೆ ಹೊಡೆಯುವುದು, ಅವನ ಕೂದಲನ್ನು ಹಿಡಿದೆಳೆಯುವುದು, ಬೆನ್ನಿಗೆ ಗುದ್ದಿರುವುದು ದಾಖಲಾಗಿದೆ.

ವಿಡಿಯೋ ವೈರಲ್ ಆದ ನಂತರ ಹಲ್ಲೆಗೊಳಗಾದ ವಿದ್ಯಾರ್ಥಿಯ ಪೋಷಕರು ಹೊಸದುರ್ಗ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪೊಲೀಸರು ನೂತನ ಭಾರತೀಯ ನ್ಯಾಯ ಸಂಹಿತೆಯಡಿಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ಕಾನೂನುಬಾಹಿರ ಸಭೆ (ಸೆಕ್ಷನ್ 189 (2)], ಗಲಭೆ(ಸೆಕ್ಷನ್ 191 (2)), ತಪ್ಪಾದ ನಿರ್ಬಂಧ (ಸೆಕ್ಷನ್ 126 (2), ಗಾಯವಾಗುವಂತೆ ಹಲ್ಲೆ(ಸೆಕ್ಷನ್ 115 (2), ಸೆಕ್ಷನ್ 190 (ಸಾಮಾನ್ಯ ಉದ್ದೇಶದಿಂದ ಕಾನೂನುಬಾಹಿರ ಸಭೆ) ಎಫ್‌ಐಆರ್ ದಾಖಲಿಸಿಕೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ದಾಖಲಾಗಿರುವ ಎಫ್‌ಐಆರ್‌ನಲ್ಲಿ 12ನೇ ತರಗತಿಯ ಐವರನ್ನು ಪೊಲೀಸರು ಹೆಸರಿಸಲಾಗಿದೆ ಎಂದು ಹೊಸದುರ್ಗ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

12 ನೇ ತರಗತಿಯ ವಿದ್ಯಾರ್ಥಿಗಳು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ ಮತ್ತು ತಪ್ಪಿತಸ್ಥರು ಎಂದು ಸಾಬೀತಾದರೆ, ಅವರು ಎರಡು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...