ಶೇ.65 ಮೀಸಲಾತಿ: ಬಿಹಾರ ಸರ್ಕಾರದ ಆದೇಶ ರದ್ದುಗೊಳಿಸಿದ ಪಾಟ್ನಾ ಹೈಕೋರ್ಟ್

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯದವರಿಗೆ ಉದ್ಯೋಗಗಳು ಹಾಗೂ ಶಿಕ್ಷಣದಲ್ಲಿ ಶೇ.50 ರಿಂದ ಶೇ.65ರವರೆಗೆ ಹೆಚ್ಚಿಸಲಾಗಿದ್ದ ಬಿಹಾರ ಸರ್ಕಾರದ ಮೀಸಲಾತಿ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಕೆ ವಿನೋದ್ ಚಂದ್ರ ಹಾಗೂ ನ್ಯಾಯಮೂರ್ತಿ ಹರೀಶ್ ಕುಮಾರ್ ಅವರಿದ್ದ ಪೀಠ ನಾಗರಿಕರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಸಮಾನ ಅವಕಾಶ ನೀಡುವ ವಿಚಾರದಲ್ಲಿ ಈ ಆದೇಶವು ಉಲ್ಲಂಘನೆಯಾಗುತ್ತದೆ ಎಂದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಬ್ಯಾಚ್‌ನ ಅರ್ಜಿಗಳನ್ನು ವಿಚಾರಣೆಗೊಳಿಸಿ ಆದೇಶ ನೀಡಿದರು.

ಬಿಹಾರ ಸರ್ಕಾರ ಅಧಿಸೂಚನೆಗೊಳಿಸಿರುವ ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿ ಕಾಯ್ದೆ 2023ರ ಅಧಿಸೂಚನೆಯು ಸಂವಿಧಾನದ 14, 15 ಹಾಗೂ 16ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ಪೀಠ ಆದೇಶದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 2023ರಲ್ಲಿ ಬಿಹಾರ ಸರ್ಕಾರವು ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿದ್ದ ಶೇ. 50 ರಷ್ಟಿದ್ದ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ಬಿಹಾರ ಸರ್ಕಾರದ ಮಸೂದೆಯನ್ವಯ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಶೇ.20, ಒಬಿಸಿ ಮತ್ತು ಅತೀ ಹಿಂದುಳಿದ ಸಮುದಾಯ ಶೇ.43 ಮೀಸಲಾತಿ, ಎಸ್ಟಿ ಸಮುದಾಯ ಶೇ.2 ಮೀಸಲಾತಿಗೆ ಅರ್ಹರಾಗಿದ್ದರು. ನೂತನ ಕಾಯ್ದೆಯಿಂದ ಒಬಿಸಿ ಮತ್ತು ಅತೀ ಹಿಂದುಳಿದ ಅಭ್ಯರ್ಥಿಗಳು(ಇಬಿಸಿ) ಶೇ.30 ಮೀಸಲಾತಿ ಹೆಚ್ಚಿಗೆಗೆ ಅರ್ಹರಾಗಿದ್ದರು. ಬಿಹಾರ ರಾಜ್ಯಾದ್ಯಂತ ನಡೆಸಿದ ಜಾತಿ ಸಮೀಕ್ಷೆಯ ಸಂಪೂರ್ಣ ವರದಿಯನ್ನು ಸರ್ಕಾರ ಮಂಡಿಸಿದ ಕೆಲವೇ ಗಂಟೆಗಳ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಸೂದೆಯನ್ನು ಪ್ರಸ್ತಾಪಿಸಿ ಅಂಗೀಕರಿಸಿದ್ದರು.

ಬಿಹಾರದ 13.1 ಕೋಟಿ ಜನರಲ್ಲಿ ಶೇ. 36 ಜನರು ಇಬಿಸಿ ಮತ್ತು ಶೇ. 27.1 ಮಂದಿ ಒಬಿಸಿ ಸಮುದಾಯಕ್ಕೆ ಸೇರಿದ್ದಾರೆ. ಉಳಿದವರಲ್ಲಿ ಶೇ.19.7ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ.1.7 ರಷ್ಟಿದೆ. ಸಾಮಾನ್ಯ ವರ್ಗದ ಜನಸಂಖ್ಯೆ 15.5 ಪ್ರತಿಶತವನ್ನು ಹೊಂದಿದೆ ಎಂದು ವರದಿ ಹೇಳಿದೆ.

ಇದರರ್ಥ ಬಿಹಾರದ ಶೇಕಡಾ 60 ಕ್ಕಿಂತ ಹೆಚ್ಚು ಜನರು ಒಬಿಸಿ ಅಥವಾ ಇಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸರ್ಕಾರದ ವರದಿಯಲ್ಲಿ ಶೇ.42 ಎಸ್ಸಿ ಮತ್ತು ಎಸ್ಟಿ ಸಮುದಾಯ ಬಡತನ ರೇಖೆಗಿಂತ ಕೆಳಗಿದ್ದಾರೆ. ಈ ಸಮುದಾಯದ ಶೇ.34 ಮಂದಿಯ ಮಾಸಿಕ ಆದಾಯ 6 ಸಾವಿರ ರೂ.ಕ್ಕಿಂತ ಕಡಿಮೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...