ಮಹಿಳಾ ರೋಗಿಗಳ ಸಿಸಿಟಿವಿ ವಿಡಿಯೋಗಳ ಮಾರಾಟ; ಏಳು ಮಂದಿಯ ಬಂಧನ

Date:

ಆನ್‌ಲೈನ್‌ನಲ್ಲಿ ಮಹಿಳಾ ರೋಗಿಗಳ ಸಿಸಿಟಿವಿ ವೀಡಿಯೋಗಳನ್ನು ಮಾರಾಟ ಮಾಡಿದ ಆರೋಪದಲ್ಲಿ ಗುಜರಾತ್ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಬುಧವಾರ ತಿಳಸಿದ್ದಾರೆ. ಸಿಸಿಟಿವಿ ನೆಟ್‌ವರ್ಕ್ ಅನ್ನು ಹ್ಯಾಕ್ ಮಾಡಿ ವೀಡಿಯೋಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬುಧವಾರ ದೆಹಲಿ ನಿವಾಸಿ ರೋಹಿತ್ ಸಿಸೋಡಿಯಾ ಅವರ ಬಂಧನ ಮಾಡಲಾಗಿದ್ದು, ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಸಿಸೋಡಿಯಾ ಹ್ಯಾಕ್ ಮಾಡಿದ ಸಿಸಿಟಿವಿ ದೃಶ್ಯಾವಳಿಗಳನ್ನು ಕ್ಯೂಆರ್ ಕೋಡ್‌ಗಳಾಗಿ ಪರಿವರ್ತಿಸಿ, ಅವುಗಳನ್ನು ಯೂಟ್ಯೂಬ್ ಮತ್ತು ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ ಮಾರಾಟ ಮಾಡಿದ್ದಾರೆ ಎಂದು ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯ ಹೆರಿಗೆ ಕೋಣೆಯೊಳಗೆ ವೈದ್ಯರು ಮಹಿಳಾ ರೋಗಿಗಳನ್ನು ಪರೀಕ್ಷಿಸುತ್ತಿರುವ ವೀಡಿಯೋಗಳನ್ನು ಯೂಟ್ಯೂಬ್ ಮತ್ತು ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಿರುವುದು ಕಂಡುಬಂದ ನಂತರ ದೂರು ದಾಖಲಾಗಿದೆ.

ಸೂರತ್‌ನ ಪರಿತ್ ಧಮೇಲಿಯಾ ಎಂಬ ಹ್ಯಾಕರ್ ಮತ್ತು ಮಹಾರಾಷ್ಟ್ರದ ಲಾತೂರ್ ನಿವಾಸಿ ಯೂಟ್ಯೂಬ್ ಚಾನೆಲ್‌ನ ಮಾಲೀಕ ಪ್ರಜ್ವಲ್ ಟೈಲಿ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಲಿಪ್‌ಗಳನ್ನು ಕ್ಯೂಆರ್‌ ಕೋಡ್‌ಗಳಾಗಿ ಪರಿವರ್ತಿಸಿದ ನಂತರ, ಸಿಸೋಡಿಯಾ ಅವುಗಳನ್ನು ಟೈಲಿ ಮತ್ತು ಇತರ ಕೆಲವರಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಟೈಲಿ ಒಡೆತನದ ಮೂರು ಯೂಟ್ಯೂಬ್ ಚಾನೆಲ್‌ಗಳು ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದೆ. ಟೆಲಿಗ್ರಾಮ್ ಗುಂಪಿನ ಸದಸ್ಯರಿಗೆ ಪ್ರತಿ ವೀಡಿಯೋಗೆ ಎರಡು ಸಾವಿರ ರೂಪಾಯಿ ಶುಲ್ಕ ವಿಧಿಸಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...