ಕಾರ್ಡ್‌ಬೋರ್ಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಏಳು ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಅಲ್ವಾರ್‌ನ ತಪುಕಾರದ ಖುಷ್ಖೇರಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವು ವ್ಯಕ್ತಿಗಳು ಕಾರ್ಖಾನೆಯೊಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಇನ್ನು ಕಾರ್ಖಾನೆ ಆವರಣದಲ್ಲಿ ಸುಟ್ಟು ಹೋದ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನು ಓದಿದ್ದೀರಾ? ಭಕ್ತವತ್ಸಲ ಆಯೋಗ ಶಿಫಾರಸ್ಸು ಕೈಬಿಡಲು ಸಚಿವ ಸಂಪುಟ ಸಭೆ ನಿರ್ಧಾರ
ಬೆಳಿಗ್ಗೆ 9:22ರ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಯಿಂದ ಅಗ್ನಿಶಾಮಕ ದಳಕ್ಕೆ ಮಾಹಿತಿ ಸಿಕ್ಕಿದೆ. ಬೆಂಕಿಯ ತೀವ್ರತೆ ಕೆಲವೇ ನಿಮಿಷಗಳಲ್ಲಿ ಹರಡಿದೆ. ಈವರೆಗೆ ಮೃತಪಟ್ಟ ಎಲ್ಲಾ ಕಾರ್ಮಿಕರು ಸ್ಥಳದಲ್ಲೇ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸ್ ಅಧಿಕಾರಿಗಳು, ಆಡಳಿತ ಅಧಿಕಾರಿಗಳು, ಅಗ್ನಿಶಾಮಕ ದಳದ ತಂಡಗಳು, ರಕ್ಷಣಾ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಸದ್ಯ ಈ ಅಗ್ನಿ ಅವಘಡ ಸಂಭವಿಸಲು ಕಾರಣವೇನು ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ. ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.





