ಮಳೆಗೆ ನಲುಗಿದ ಉತ್ತರ ಭಾರತ; ದೆಹಲಿಯಲ್ಲಿ 40 ವರ್ಷದಲ್ಲೇ ದಾಖಲೆ ಮಳೆ

Date:

ಭಾರಿ ಮಳೆಯಿಂದಾಗಿ ಉತ್ತರ ಭಾರತ ನಲುಗಿದೆ. ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಮಳೆ ಸುರಿಯುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಇನ್ನಷ್ಟು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ದೆಹಲಿ ಯಲ್ಲಿ  40 ವರ್ಷದಲ್ಲೇ ದಾಖಲೆ ಮಳೆ ಸುರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 153 ಮೀ .ಮೀ . ದಾಖಲೆ ಮಳೆ ಸುರಿದ ಪರಿಣಾಮ ರಾಷ್ಟ್ರ ರಾಜಧಾನಿ ಅಕ್ಷರಶಃ ನಲುಗಿದೆ.

1982ರ ನಂತರ ದೆಹಲಿ ಕಂಡ ಅತ್ಯಂತ ದೊಡ್ಡ ಮಳೆ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 1982ರಲ್ಲಿ 16.9 ಸೆಂ .ಮೀ . ಮಳೆಯಾಗಿತ್ತು. 2003ರ ಜುಲೈ 10ರಂದು 13.34 ಸೆಂ .ಮೀ . ಮಳೆಯಾಗಿತ್ತು. 1958ರ ಜುಲೈ 21ರಂದು 26.6 ಸೆಂ .ಮೀ .ನಷ್ಟು ಮಳೆಯಾದ ಕುರಿತು ಐಎಂಡಿ ಮಾಹಿತಿ ನೀ ಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು(ಜುಲೈ 09) ಕೂಡ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಗುರುಗ್ರಾಮ್‌ನ ಹಲವಾರು ಭಾಗಗಳು ಜಲಾವೃತವಾಗಿ ಹಲವು ಕಡೆ ವಿದ್ಯುತ್ ಕಡಿತಗೊಳಿಸಲಾಗಿದೆ. ದೆಹಲಿ ಯಲ್ಲಿ 58 ವರ್ಷದ ಮಹಿಳೆಯೊಬ್ಬರು ಫ್ಲಾಟ್‌ನ ಮೇಲ್ಛಾವಣಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಈ ಸುದ್ದಿ ಓದಿದ್ದೀರಾ? ಥ್ರೆಡ್ಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕೋಟಿ ಮಂದಿ ಇನ್‌ಸ್ಟಾಲ್‌; ಆ್ಯಪ್‌ನಲ್ಲಿರುವ ವಿಶೇಷತೆಗಳೇನು?

ದೆಹಲಿ ಮಾತ್ರವಲ್ಲದೆ ರಾಜಸ್ಥಾನದಲ್ಲಿ 24 ಗಂಟೆಗಳ ಅವಧಿಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ರಾಜ್‌ಸಮಂದ್, ಜಲೋರ್, ಪಾಲಿ, ಅಜ್ಮೀರ್, ಅಲ್ವಾರ್, ಬನ್ಸ್ವಾರಾ, ಭರತ್‌ಪುರ್, ಭಿಲ್ವಾರಾ, ಬುಂದಿ, ಚಿತ್ತೋರ್‌ಗಢ, ದೌಸಾ, ಧೌಲ್‌ಪುರ್, ಜೈಪುರ ಮತ್ತು ಕೋಟಾ ಸೇರಿದಂತೆ ರಾಜಸ್ಥಾನದ ಒಂಬತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಅಮರನಾಥ ಯಾತ್ರೆ ಸ್ಥಗಿತ

ನಿರಂತರ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ವಾರ್ಷಿಕ ಅಮರನಾಥ ಯಾತ್ರೆಯನ್ನು ಸತತ ಮೂರನೇ ದಿನವಾದ ಇಂದು ಸ್ಥಗಿತಗೊಳಿಸಲಾಗಿದೆ. ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಸುಮಾರು 3,000 ವಾಹನಗಳು ಸಿಲುಕಿಕೊಂಡಿವೆ, ಅಲ್ಲಿ ನಿನ್ನೆ ರಸ್ತೆಯ ಒಂದು ಭಾಗ ಕುಸಿದಿದೆ.

ಹಿಮಾಚಲ ಪ್ರದೇಶದ ಶಿಮ್ಲಾ, ಸಿರ್ಮೌರ್, ಲಾಹೌಲ್ ಮತ್ತು ಸ್ಪಿತಿ, ಚಂಬಾ ಮತ್ತು ಸೋಲನ್‌ನಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳಿಂದ ಹಲವಾರು ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಹಿಮಾಚಲ ಪ್ರದೇಶದ ಏಳು ಜಿಲ್ಲೆಗಳಿಗೆ “ರೆಡ್ ಅಲರ್ಟ್” ಘೋಷಿಸಲಾಗಿದೆ.ಬಿಯಾಸ್ ನದಿಯು ಅಪಾಯದ ಗಡಿಯನ್ನು ದಾಡಿದ್ದು, ಕುಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕೊಚ್ಚಿಹೋಗಿದೆ.

ಹರ್ಯಾಣ ಮತ್ತು ಪಂಜಾಬ್‌ನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಎರಡು ರಾಜ್ಯಗಳ ಸಾಮಾನ್ಯ ರಾಜಧಾನಿಯಾದ ಚಂಡೀಗಢದಲ್ಲಿ ನಿನ್ನೆ ದಿನವಿಡೀ ಮಳೆ ಸುರಿಯಿತು.

ಕೇರಳ ಮತ್ತು ಕರ್ನಾಟಕದ ಹಲವು ಪ್ರದೇಶಗಳಲ್ಲಿ ನಿರಂತರ ಮಳೆ ಸುರಿದಿದೆ. ಕೇರಳದ ನಾಲ್ಕು ಜಿಲ್ಲೆಗಳಾದ ಕಲ್ಲಿಕೋಟೆ, ವಯನಾಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ಐಎಂಡಿ ಯಲ್ಲೋ ಅಲರ್ಟ್‌ ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...