ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್

Date:

ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ. ಆದರೆ ಪರಿಶೀಲನೆಯ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ಕಳೆದ ವಾರ, ದೆಹಲಿ ಮತ್ತು ಬೆಂಗಳೂರಿನ ಹಲವಾರು ಶಾಲೆಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿವೆ. ಉತ್ತರ ಪ್ರದೇಶದ ಆಗ್ರಾದ ಎರಡು ಖಾಸಗಿ ಶಾಲೆಗಳಿಗೂ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಪರಿಶೀಲನೆ ವೇಳೆ ಹುಸಿ ಬೆದರಿಕೆ ಎಂದು ತಿಳಿದುಬಂದಿತ್ತು.

ಇದನ್ನು ಓದಿದ್ದೀರಾ? ತಿರುಪತಿ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಹಿಮಾಚಲ ಪ್ರದೇಶದಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬರುತ್ತಿದ್ದಂತೆ ಪೊಲೀಸರು ಮತ್ತು ಸಿಐಡಿ ತಂಡ, ಬಾಂಬ್ ನಿಷ್ಕ್ರಿಯ ದಳಗಳೊಂದಿಗೆ ತಕ್ಷಣವೇ ಸ್ಥಳಕ್ಕೆ ಆಗಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳಗಳು ಶಾಲೆಗಳ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಆದರೆ ಯಾವುದೇ ಸ್ಫೋಟಕಗಳು ಅಥವಾ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ತಿವಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ಶಾಂತವಾಗಿರಲು ಮತ್ತು ಭಯಭೀತರಾಗದಂತೆ ಅಥವಾ ವದಂತಿಗಳನ್ನು ಹರಡದಂತೆಯೂ ಡಿಜಿಪಿ ಅಶೋಕ್ ತಿವಾರಿ ಮನವಿ ಮಾಡಿದ್ದಾರೆ. ಅಂತಹ ಬೆದರಿಕೆಗಳನ್ನು ಎದುರಿಸಲು ರಾಜ್ಯ ಪೊಲೀಸರು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ ಮತ್ತು ಸಮರ್ಥರಾಗಿದ್ದಾರೆ ಹೇಳಿದ್ದಾರೆ.

ಈ ಹಿಂದೆ ಬೆಂಗಳೂರು, ದೆಹಲಿಯ ಶಾಲೆಗಳಿಗೂ ಇದೇ ರೀತಿ ಬಾಂಬ್ ಬೆದರಿಕೆಗಳು ಬಂದಿದೆ. ಹಾಗಾಗಿ ಕರ್ನಾಟಕ, ದೆಹಲಿ ಇತರ ರಾಜ್ಯಗಳಲ್ಲಿನ ಪೊಲೀಸರೊಂದಿಗೂ ಸಮನ್ವಯ ನಡೆಸುವುದಾಗಿ ಹಿಮಾಚಲ ಪೊಲೀಸರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...