ಭಾರತ-ಪಾಕ್ ಸಂಘರ್ಷ | ಕಾಶ್ಮೀರ, ದೆಹಲಿಯಲ್ಲಿ ಶಾಲೆಗಳು ಬಂದ್, ಆನ್‌ಲೈನ್ ತರಗತಿ

Date:

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಹೆಚ್ಚಾಗುತ್ತಿರುವ ನಡುವೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದೆಹಲಿ, ಕಾಶ್ಮೀರ ಹಲವು ಖಾಸಗಿ ಶಾಲೆಗಳು ಬಂದ್ ಆಗಿವೆ. ಶುಕ್ರವಾರದಿಂದ ಆನ್‌ಲೈನ್ ತರಗತಿ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ವಸಂತ್ ಕುಂಜ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್), ಪಶ್ಚಿಮ ವಿಹಾರ್‌ನ ಇಂದ್ರಪ್ರಸ್ಥ ವರ್ಲ್ಡ್ ಸ್ಕೂಲ್ ಮತ್ತು ಮಾಡೆಲ್ ಟೌನ್‌ನ ಕ್ವೀನ್ ಮೇರಿ ಸ್ಕೂಲ್‌ನಂತಹ ಶಾಲೆಗಳು ವರ್ಚುವಲ್ ತರಗತಿಗಳನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ಸೋಮವಾರದಿಂದ ಬೇಸಿಗೆ ರಜೆ ಪ್ರಾರಂಭವಾಗುತ್ತಿದೆ. ಆದರೆ ನಾವು ಒಂದು ದಿನವೂ ಮಕ್ಕಳ ಭದ್ರತೆಗೆ ತೊಂದರೆ ಆಗುವ ಸಾಧ್ಯತೆಯನ್ನು ಎದುರಿಸಲು ಬಯಸಲ್ಲ ಎಂದು ಇಂದ್ರಪ್ರಸ್ಥ ವರ್ಲ್ಡ್ ಸ್ಕೂಲ್ ಪ್ರಾಂಶುಪಾಲರಾದ ಶಿಖಾ ಅರೋರಾ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

ವಸಂತ್ ಕುಂಜ್‌ನ ಡಿಪಿಎಸ್ ಪ್ರಾಂಶುಪಾಲರಾದ ದೀಪ್ತಿ ವೋಹ್ರಾ ಅವರು ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸಲಾಗಿದೆ ಎಂದು ಹೇಳಿದರು. ಈ ನಡುವೆ ಕ್ವೀನ್ ಮೇರಿ ಶಾಲೆಯ ಪ್ರಾಂಶುಪಾಲರಾದ ಅನುಪ್ಮಾ ಸಿಂಗ್ ಶಾಲೆಗೆ ಅಧಿಕ ವಿದ್ಯಾರ್ಥಿಗಳು ಹಾಜರಾಗಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಶಾಲೆಗಳಲ್ಲಿ ತರಗತಿಗಳನ್ನು ಮುಂದುವರಿಸಿದ ಕೆಲವು ಶಾಲೆಗಳು ಕ್ಯಾಂಪಸ್‌ನಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿವೆ. ಮಕ್ಕಳಿಗೆ ಸುರಕ್ಷತಾ ಕ್ರಮಗಳ ಕುರಿತು ವಿವರಿಸಲಾಗಿದೆ ಎಂದು ವರದಿಯಾಗಿದೆ.

ಆದರೆ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಯೊಬ್ಬರು, “ಇಂದು ಶಾಲೆಗಳನ್ನು ಮುಚ್ಚಲು ಅವರಿಗೆ ಯಾವುದೇ ಅಧಿಕೃತ ಆದೇಶ ಬಂದಿಲ್ಲ” ಎಂದು ಹೇಳಿದರು.

26 ಭಾರತೀಯರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಇತ್ತೀಚೆಗೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದಾದ ಬಳಿಕ ಪಾಕಿಸ್ತಾನ ಭಾರತದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...