ಪಶ್ಚಿಮ ಬಂಗಾಳ | ಎರಡು ಗೂಡ್ಸ್ ರೈಲುಗಳ ನಡುವೆ ಡಿಕ್ಕಿ; ಹಳಿ ತಪ್ಪಿದ ಬೋಗಿಗಳು

Date:

  • ಪಶ್ಚಿಮ ಬಂಗಾಳದ ಖರಗ್‌ಪುರ-ಬಂಕುರಾ-ಆದ್ರ ರೈಲು ಮಾರ್ಗದ ಓಂಡಾ ನಿಲ್ದಾಣದ ಬಳಿ ಘಟನೆ
  • ಜೂನ್ 2 ರಂದು ಒಡಿಶಾದ ಬಾಲಾಸೋರ್ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಸಾವು

ಪಶ್ಚಿಮ ಬಂಗಾಳ ರಾಜ್ಯದ ಬಂಕುರಾ ಬಳಿ ಎರಡು ಗೂಡ್ಸ್ ರೈಲುಗಳ ನಡುವೆ ಭಾನುವಾರ (ಜೂನ್ 25) ಡಿಕ್ಕಿ ಸಂಭವಿಸಿದೆ. ಆದರೆ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ.

ಬಂಕುರಾ ಬಳಿಯ ಖರಗ್‌ಪುರ-ಬಂಕುರಾ-ಆದ್ರ ರೈಲು ಮಾರ್ಗದ ಓಂಡಾ ನಿಲ್ದಾಣದ ಬಳಿ ನಸುಕಿನ ಜಾವ 4 ಗಂಟೆಗೆ ಈ ಘಟನೆ ಸಂಭವಿಸಿದೆ. ಗೂಡ್ಸ್ ರೈಲುಗಳ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರೈಲ್ವೆ ನಿಲ್ದಾಣದ ಬಳಿ ಒಂದು ಗೂಡ್ಸ್‌ ರೈಲು ನಿಂತಿತ್ತು. ಇನ್ನೊಂದು ಗೂಡ್ಸ್‌ ರೈಲು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಗೂಡ್ಸ್‌ ರೈಲುಗಳ ಸುಮಾರು 11 ಬೋಗಿಗಳು ಹಳಿ ತಪ್ಪಿದ್ದು ಘಟನೆಯಲ್ಲಿ ಪಶ್ಚಿಮ ಬಂಗಾಳ ಗೂಡ್ಸ್‌ ರೈಲುಗಳ ಇಬ್ಬರು ಲೊಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೂಡ್ಸ್ ರೈಲುಗಳ ಡಿಕ್ಕಿ ಹಿನ್ನೆಲೆಯಲ್ಲಿ ಖರಗ್ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಸಚಿವ ಸುಸಿಂದ್ರೋ ಗೋದಾಮಿಗೆ ಉದ್ರಿಕ್ತರಿಂದ ಬೆಂಕಿ

“ಗೂಡ್ಸ್ ರೈಲು ಮುಖ್ಯ ಹಳಿಯಲ್ಲಿ ತೆರಳದೆ ಲೂಪ್ ಲೈನ್‌ನಲ್ಲಿ ಹೋಗಿ ನಿಂತಿದ್ದ ಮತ್ತೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ತನಿಖೆ ನಂತರ ಹೆಚ್ಚಿನ ಮಾಹಿತಿ ತಿಳಿಸಲಾಗುವುದು” ಎಂದು ಓಂಡಾ ರೈಲ್ವೆ ನಿಲ್ದಾಣದ ಸುರಕ್ಷತಾ ಅಧಿಕಾರಿ ದಿಬಾಕರ್‌ ಮಾಝಿ ಹೇಳಿದ್ದಾರೆ.

ಒಡಿಶಾದ ಬಾಲಾಸೋರ್‌ನಲ್ಲಿ ಜೂನ್ 2 ರಂದು ಬೆಂಗಳೂರು-ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್‌ ಮತ್ತು ಗೂಡ್ಸ್ ರೈಲುಗಳ ನಡುವೆ ಅಪಘಾತ ಸಂಭವಿಸಿ ಕನಿಷ್ಠ 275 ಮೃತಪಟ್ಟಿದ್ದರು.

ಕೋಲ್ಕತ್ತದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ 170 ಕಿಮೀ ಉತ್ತರಕ್ಕೆ ಬಹನಾಗಾ ಬಜಾರ್ ನಿಲ್ದಾಣದ ಬಳಿ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿತ್ತು.

ಚೆನ್ನೈ ಕಡೆಗೆ ಹೋಗುತ್ತಿದ್ದ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್, ಪಕ್ಕದ ಹಳಿಯಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಹಳಿತಪ್ಪಿ, ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಿಂಬದಿಯ ಗಾಡಿ ಮೂರನೇ ಹಳಿಗೆ ತಿರುಗಿದಾಗ ಈ ಅಪಘಾತ ಸಂಭವಿಸಿದೆ.

ಮೂರನೇ ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು.

ಈ ಘಟನೆ ಮಾಸುವ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಈ ದುರಂತ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...