ಲೈಂಗಿಕ ದೌರ್ಜನ್ಯ ಪ್ರಕರಣ | ತೆಲುಗು ಸಿನಿಮಾ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಬಂಧನ

Date:

‘ಬಾಹುಬಲಿ’ ಮತ್ತು ‘ಪುಷ್ಪ’ದಂತಹ ಭಾರೀ ಮೊತ್ತದ ಸಿನಿಮಾಗಳಿಗೆ ನೃತ್ಯ ಸಂಯೋಜನೆ (ಕೊರಿಯೋಗ್ರಫಿ) ಮಾಡಿದ್ದ ಜಾನಿ ಮಾಸ್ಟರ್‌ ಅವರನ್ನು ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ, 21 ವರ್ಷದ ಯುವತಿಯೊಬ್ಬರು ತಮ್ಮ ಮೇಲೆ ಜಾನಿ ಮಾಸ್ಟರ್‌ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ತಾವು ಅಪ್ರಾಪ್ತೆಯಾಗಿದ್ದಾಗಲೇ ತಮ್ಮ ಮೇಲೆ ಜಾನಿ ಮಾಸ್ಟರ್ ಮೊದಲ ಬಾರಿಗೆ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿದ್ದರು. ಪೊಲೀಸರಿಗೆ ದೂರು ನೀಡಿದ್ದರು.

ಆರೋಪಿ ಜಾನಿ ಮಾಸ್ಟರ್‌ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಅವರನ್ನು ಹೈದರಾಬಾದ್‌ಗೆ ಸ್ಥಳಾಂತರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಜಾನಿ ಮಾಸ್ಟರ್‌ಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದೆ. ಆಗ, ವಿವಿಧ ನಗರಗಳಲ್ಲಿ ತಮ್ಮ ಚಿತ್ರೀಕರಣಕ್ಕೆ ತೆರಳಿದ್ದಾಗ ಅನೇಕ ಬಾರಿ ತನ್ನ ಮೇಲೆ ಜಾನಿ ಮಾಸ್ಟರ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆ. ಮಾತ್ರವಲ್ಲದೆ, ಬೇರೆಲ್ಲಿಯೂ ಉದ್ಯೋಗಾವಕಾಶ ಸಿಗದಂತೆ ಮಾಡುತ್ತೇನೆಂದು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ” ಎಂದೂ ಯುವತಿ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

2017ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮಗೆ ಜಾನಿ ಮಾಸ್ಟರ್ ಪರಿಚಯವಾಗಿತ್ತು. ಅದಾದ, ಎರಡು ವರ್ಷಗಳ ನಂತರ ಅವರು ನನ್ನನ್ನು ಸಹಾಯಕ ಕೊರಿಯೋಗ್ರಾಫರ್‌ಆಗಿ ನೇಮಿಸಿಕೊಂಡಿದ್ದರು. ಬಳಿಕ, ನನ್ನ ಮೇಲೆ ಜಾನಿ ಮಾಸ್ಟರ್‌ ಲೈಂಗಿಕ ದೌರ್ಜನ್ಯ ಎಸಗಿದ್ದರು. ಘಟನೆ ಬಗ್ಗೆ, ದೂರು ನೀಡಿದರೆ ಬೇರೆಯದ್ದೇ ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದದರು. ಫೋಟೋಶೂಟ್ ಮತ್ತು ರಿಹರ್ಸಲ್ ಸಮಯದಲ್ಲಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ” ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ.

ಸಂತ್ರಸ್ತ ಯುವತಿ ತಲುವು ಚಲನಚಿತ್ರ ವಾಣಿಜ್ಯ ಮಂಡಳಿಗೂ ದೂರು ನೀಡಿದ್ದರು. ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ಬೆನ್ನಲ್ಲೇ ಜಾನಿ ಮಾಸ್ಟರ್‌ರನ್ನು ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಕಾರ್ಮಿಕರ ಸಂಘದಿಂದ ಅಮಾನತುಗೊಳಿಸಲಾಗಿತ್ತು.

ಜಾನಿ ಮಾಸ್ಟರ್ ಅವರು ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಪಕ್ಷದ ಸದಸ್ಯರಾಗಿದ್ದಾರೆ. ಜನಸೇನೆ, ಪ್ರಸ್ತುತ ಆಂಧ್ರಪ್ರದೇಶದಲ್ಲಿ ಸರ್ಕಾರ ರಚಿಸಿರುವ ಮೈತ್ರಿಕೂಟದ ಭಾಗವಾಗಿದೆ. ಪಕ್ಷದ ಕಾರ್ಯಕ್ರಮಗಳಿಂದ ದೂರ ಇರುವಂತೆ ಜಾನಿ ಮಾಸ್ಟರ್‌ಗೆ ತಿಳಿಸಲಾಗಿದೆ ಎಂದು ಜನಸೇನೆ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...