ಗನ್ ಪಾಯಿಂಟ್‌ನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಸರ್ಕಾರಿ ಅಧಿಕಾರಿ ಅಮಾನತು

Date:

ಗನ್‌ ತೋರಿಸಿ, ಕೊಲ್ಲುವ ಬೆದರಿಕೆ ಹಾಕಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಹರಿಯಾಣದ ಸರ್ಕಾರಿ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿ ಹರಿಯಾಣ ಸರ್ಕಾರ ಆದೇಶಿಸಿದೆ.

ಹರಿಯಾಣದ ಹಿಸಾರ್‌ ಜಿಲ್ಲೆಯ ಹಂಸಿಯಲ್ಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಆಗಿದ್ದ ಅಧಿಕಾರಿಯನ್ನು ಇತ್ತೀಚೆಗೆ, ಚಂಡೀಗಢದಲ್ಲಿರುವ ಮುಖ್ಯ ಕಾರ್ಯದರ್ಶಿ ಕಚೇರಿಗೆ ನಿಯೋಜಿಸಲಾಗಿತ್ತು. ಅವರನ್ನು ಇದೀಗ ಅಮಾನತು ಮಾಡಲಾಗಿದೆ. ಅಮಾನತು ಆದೇಶದಲ್ಲಿ ಕಾರಣವನ್ನು ಉಲ್ಲೇಖಿಸಲಾಗಿಲ್ಲ. ಆದರೆ, ಮುಖ್ಯ ಕಾರ್ಯದರ್ಶಿಯ ಪೂರ್ವಾನುಮತಿ ಇಲ್ಲದೆ ಕಚೇರಿಯಿಂದ ಯಾವುದೇ ಅಧಿಕಾರಿ ಹೊರಬರುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮಸಾಜ್ ಮಾಡುವ ಸಮಯದಲ್ಲಿ ಅಧಿಕಾರಿಯು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. “ಅಧಿಕಾರಿಯು ತಮ್ಮ ಅಧಿಕೃತ ನಿವಾಸದಲ್ಲಿ ಮಸಾಜ್ ಮಾಡಲು ತಮ್ಮನ್ನು ಕರೆಸಿಕೊಳ್ಳುತ್ತಿದ್ದರು. ಅವರು ನನ್ನೊಂದಿಗೆ ಈ ಹಿಂದೆಯೇ ಅಸಭ್ಯವಾಗಿ ವರ್ತಿಸಿದ್ದಾರೆ. ನಾನು ಪ್ರತಿರೋಧ ವ್ಯಕ್ತಪಡಿಸಿದ್ದೆ. ಆದರೆ, ಇತ್ತೀಚೆಗೆ, ತನಗೆ ಬಂದೂಕು ತೋರಿಸಿ, ಬೆದರಿಕೆ ಹಾಕಿ ದೌರ್ಜನ್ಯ ಎಸಗಿದ್ದಾರೆ. ಜಾತಿ ನಿಂದನೆಯನ್ನೂ ಮಾಡಿದ್ದಾರೆ. ಸಾಕ್ಷ್ಯಕ್ಕಾಗಿ ಅವರು ದೌರ್ಜನ್ಯವನ್ನು ವಿಡಿಯೋ ಮಾಡಿಕೊಂಡಿದ್ದೇನೆ” ಎಂದು ಮಹಿಳೆ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತೆಯು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರಿನ ಪ್ರತಿ ಮತ್ತು ವಿಡಿಯೋವನ್ನು ಚಂಡೀಗಢ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಹರಿಯಾಣ ಮುಖ್ಯಮಂತ್ರಿಗೆ ಕಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...