ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಗುರುಕುಲ ಮುಖ್ಯಸ್ಥ ಮತ್ತು ಶಿಕ್ಷಕನ ಬಂಧನ

Date:

ಗುರುಕುಲ ವಸತಿ ಶಾಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಗುರುಕುಲದ ಮುಖ್ಯಸ್ಥ ಮತ್ತು ಓರ್ವ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ವಾರ್ಕರಿಯಲ್ಲಿರುವ ಗುರುಕುಲ ಶಾಲೆಯಲ್ಲಿ ದೌರ್ಜನ್ಯ ನಡೆದಿದೆ. ಗುರುಕುಲದ ಮುಖ್ಯಸ್ಥ ಭಗವಾನ್ ಕೊಕರೆ ಮಹಾರಾಜ್ ಮತ್ತು ಶಿಕ್ಷಕ ಪ್ರಿತೇಶ್ ಪ್ರಭಾಕರ್ ಕದಮ್ ಆರೋಪಿಗಳು ಎಂದು ವರದಿಯಾಗಿದೆ.

ಈ ಗುರುಕುಲ ಶಾಲೆಗೆ ಮಹಾರಾಷ್ಟ್ರದ ಹಲವಾರು ಭಾಗಗಳ ಬಾಲಕ ಮತ್ತು ಬಾಲಕಿಯರು ಆಧ್ಯತ್ಮಿಕ ಶಿಕ್ಷಣ ಪಡೆಯಲು ದಾಖಲಾಗುತ್ತಾರೆ. ಸಂತ್ರಸ್ತೆ ಕೂಡ ಅದೇ ರೀತಿ ದಾಖಲಾಗಿದ್ದರು. ಇದೇ ವರ್ಷದ ಜೂನ್‌ 12ರಂದು ಗುರುಕುಲ ಶಾಲೆಗೆ ಪ್ರವೇಶ ಪಡೆದಿದ್ದರು. ಆಕೆ ದಾಖಲಾದ ಒಂದೇ ವಾರದಲ್ಲಿ ಆಕೆಗೆ ಭಗವಾನ್ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದರೆಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಪಾಕ್-ಅಫ್ಘನ್ ಗಡಿ ಬಿಕ್ಕಟ್ಟು: 130 ವರ್ಷಗಳ ಗಡಿ ಇತಿಹಾಸ ಹೇಳುವುದೇನು?

“ನಾನು ವಸತಿ ಕೊಠಡಿಯಲ್ಲಿ ಒಬ್ಬಂಟಿಯಾಗಿದ್ದಾಗಲೆಲ್ಲ ಆತ ನಮ್ಮ ಕೋಣೆಗೆ ಬಂದು, ನನ್ನನ್ನು ಅಸಭ್ಯವಾಗಿ ಸ್ಪರ್ಶಿಸುತ್ತಿದ್ದರು. ಎನ್ನ ಎದೆ ಮುಟ್ಟುತ್ತಿದ್ದರು. ನಾನು ವಿರೋಧ ವ್ಯಕ್ತಪಡಿಸಿದಾಗ, ನನಗೆ ಶಿಕ್ಷಕ ಪ್ರಿತೇಶ್ ಪ್ರಭಾಕರ್ ಕದಮ್ ಬೆದರಿಕೆ ಹಾಕಿದ್ದರು. ಭಗವಾನ್‌ಗೆ ದೊಡ್ಡವರ ಸಂಪರ್ಕವಿದ್ದು, ನನ್ನ ತಂದೆಯನ್ನು ಯಾವುದಾದರೂ ಪ್ರಕರಣದಲ್ಲಿ ಸಿಲುಕಿಸಿ, ಕುಟುಂಬಕ್ಕೆ ತೊಂದರೆ ಕೊಡಬಹುದು ಮತ್ತು ನನ್ನ ಸಹೋದರನನ್ನು ಕೊಲ್ಲಬಹುದು’ ಎಂಬುದಾಗಿ ಬೆದರಿಕೆ ಹಾಕಿದ್ದರು” ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ.

ನಿರಂತರವಾಗಿ ಕಿರುಕುಳವನ್ನು ಅನುಭವಿಸಿದ್ದ ಸಂತ್ರಸ್ತೆ ಸೋಮವಾರ ತನ್ನ ತಂದೆಯ ಬಳಿ ತನಗಾಗುತ್ತಿರುವ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಬಳಿಕ, ಸಂತ್ರಸ್ತೆ ಮತ್ತು ಆಕೆಯ ತಂದೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಮತ್ತು 17ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...