ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ವ್ಯಾನ್ ಚಾಲಕನ ಬಂಧನ

Date:

ಆರು ವರ್ಷದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ವ್ಯಾನ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ನಗರದಲ್ಲಿ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪುಣೆಯ ವಾನ್ವಾಡಿ ಪ್ರದೇಶದಲ್ಲಿ ಸೆಪ್ಟೆಂಬರ್ 30ರಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಂದು, ಶಾಲೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರು, ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ವ್ಯಾನ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚಾಲಕ ಲೈಂಗಿಕ ಕಿರುಕುಳ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

“ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಯು ಸಂತ್ರಸ್ತ ಬಾಲಕಿಯರ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆಂದು ಹೇಳಲಾಗಿದೆ. ಘಟನೆ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ತಾಯಿಗೆ ತಿಳಿಸಿದ್ದು, ಅವರು ಶಾಲೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ” ಎಂದು ವಾನ್ವಾಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಶಾಲಾ ವ್ಯಾನ್ ಚಾಲಕ ಸಂಜಯ್ ರೆಡ್ಡಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 64 ಮತ್ತು 65(2) ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀರು ತಿಳಿಸಿದ್ದಾರೆ.

ಆಗಸ್ಟ್‌ನಲ್ಲಿ, ಥಾಣೆ ಜಿಲ್ಲೆಯ ಬದ್ಲಾಪುರ್‌ನಲ್ಲಿರುವ ಶಾಲೆಯೊಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ, ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು. ಪ್ರಕರಣದಲ್ಲಿ ಆರೋಪಿ ಅಕ್ಷಯ್ ಶಿಂಧೆ ಎಂಬಾತನನ್ನು ಬಂಧಿಸಲಾಗಿತ್ತು. ಸೆಪ್ಟೆಂಬರ್ 23ರಂದು ಆತನನ್ನು ಎನ್‌ಕೌಂಟರ್‌ನಲ್ಲಿ ಪೊಲೀಸರು ಹತ್ಯೆಗೈದಿದ್ದಾರೆ. ಪೊಲೀಸರು ಉದ್ದೇಶಪೂರ್ವಕವಾಗಿಯೇ ಹತ್ಯೆ ಮಾಡಿದ್ದಾರೆ ಎಂದು ಆರೋಪಿ ಅಕ್ಷಯ್‌ನ ಕುಟುಂಬ ಆರೋಪಿಸಿದೆ. ಎನ್‌ಕೌಂಟರ್‌ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...