ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ನಾಲ್ವರ ಬಂಧನ

Date:

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಾಲ್ಪಾರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ, ಇಬ್ಬರು ಹಂಗಾಮಿ ಪ್ರಾಧ್ಯಾಪಕರು ಮತ್ತು ಓರ್ವ ಪ್ರಯೋಗಾಲಯ ತಂತ್ರಜ್ಞರನ್ನು ಪೊಲೀಸರು ಬಂಧಿಸಿದ್ದಾರೆ. ಆ ನಾಲ್ವರನ್ನೂ ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕಳೆದ ತಿಂಗಳು (ಆಗಸ್ಟ್‌) 30ರಂದು ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ, ವಿದ್ಯಾರ್ಥಿನಿಯರು ತಮಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದರು. ಪ್ರಾಧ್ಯಾಪಕರು ಮತ್ತು ಲ್ಯಾಬ್ ತಂತ್ರಜ್ಞರ ವಿರುದ್ಧ ಏಳು ಮಂದಿ ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಅವರ ಆರೋಪದ ಆಧಾರದ ಮೇಲೆ ಆಯೋಗದ ಸಂಯೋಜಕಿ ಕೃಷ್ಣವೇಣಿ ಪೊಲ್ಲಾಚಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ಕಾಲೇಜಿನ ಪ್ರಾಧ್ಯಾಪಕ ರಾಜಪಾಂಡಿ, ಹಂಗಾಮಿ ಪ್ರಾಧ್ಯಾಪಕರಾದ ಮುರಳಿರಾಜ್ ಮತ್ತು ಸತೀಶ್‌ಕುಮಾರ್, ಪ್ರಯೋಗಾಲಯ ಸಹಾಯಕ ಅನ್ಬರಸು ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೊಯಮತ್ತೂರು ಜಿಲ್ಲಾಧಿಕಾರಿ ಕ್ರಾಂತಿಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ‘ಅಪರಾಧಿಯ ಆಸ್ತಿಯನ್ನು ಹೇಗೆ ಕೆಡವುತ್ತೀರಿ’; ಸರ್ಕಾರಗಳ ಬುಲ್ಡೋಜರ್ ನ್ಯಾಯದ ವಿರುದ್ಧ ಸುಪ್ರೀಂ ಕಿಡಿ

“ಪ್ರಾಧ್ಯಾಪಕರು ಮತ್ತು ಪ್ರಯೋಗಾಲಯ ತಂತ್ರಜ್ಷರು ವಾಟ್ಸಾಪ್‌ನಲ್ಲಿ ತಮಗೆ ಅಶ್ಲೀಲ ಸಂದೇಶ ಕಳಿಸುತ್ತಿದ್ದಾರೆ. ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ನಮಗೆ ಕಾಲೇಜಿನ ವ್ಯಾಸಂಗ ಮಾಡುವುದೇ ಕಷ್ಟವಾಗುತ್ತಿದೆ” ಎಂದು ವಿದ್ಯಾರ್ಥಿನಿಯರು ಆಯೋಗದ ಮುಖಂಡರ ಎದುರು ತಮ್ಮ ಅಳಲು ತೋಡಿಕೊಂಡಿದ್ದರು ಎಂದು ವರದಿಯಾಗಿದೆ.

“ತರಗತಿಗಳು ಮುಗಿದ ಬಳಿಕವೂ ತಮ್ಮನ್ನು ಲ್ಯಾಬ್‌ನಲ್ಲಿ ಇರುವಂತೆ ಆರೋಪಿಗಳು ಹೇಳುತ್ತಾರೆ. ಅನುಚಿತವಾಗಿ ವರ್ತಿಸುವ ಮೂಲಕ ದೈಹಿಕ ಹಿಂಸೆ ನೀಡುತ್ತಾರೆ. ತಮ್ಮನ್ನು ಅಸಭ್ಯವಾಗಿ ಸ್ಪರ್ಶಿಸುತ್ತಾರೆ” ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...