ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ದೌರ್ಜನ್ಯ; ಐಎಎಸ್‌ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

Date:

ಹಲವಾರು ಮಹಿಳಾ ಸಿಬ್ಬಂದಿಗಳ ಮೇಲೆ ಐಎಎಸ್‌ ಅಧಿಕಾರಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣ ನ್ಯಾಗಾಲ್ಯಾಂಡ್‌ನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ.

ನಾಗಾಲ್ಯಾಂಡ್ ಹೂಡಿಕೆ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಐಡಿಎಎನ್) ಕಾರ್ಯನಿರ್ವಹಿಸುತ್ತಿರುವ ಹಲವಾರು ಮಹಿಳಾ ಉದ್ಯೋಗಿಗಳ ಮೇಲೆ ಐಎಎಸ್ ಅಧಿಕಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಐಡಿಎಎನ್‌ನ ಅಧ್ಯಕ್ಷ ಅನು ಮೇಥಾ ಅವರು ಫೆಬ್ರವರಿ 2ರಂದು ಆರೋಪಿ ಅಧಿಕಾರಿ ವಿರುದ್ಧ ಮಹಿಳಾ ಆಯೋಗಕ್ಕೆ ಮೌಖಿಕವಾಗಿ ಮಾಹಿತಿ ನೀಡಿದ್ದರು. ಬಳಿಕ, ಮಾರ್ಚ್‌17ರಂದು ಮಹಿಳಾ ಆಯೋಗದ ಅಧ್ಯಕ್ಷೆ ನ್ಗಿನ್ಯೆಹ್ ಕೊನ್ಯಾಕ್ ಅವರು ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಇದೀಗ, ಎಫ್‌ಐಆರ್‌ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ಮಹಿಳಾ ಆಯೋಗವು ತನ್ನ ದೂರಿನಲ್ಲಿ ಐಡಿಎಎನ್‌ನಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆಯರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ. ವೇತನ ಹೆಚ್ಚಳ ಮತ್ತು ಇತರ ಸೌಲಭ್ಯಗಳನ್ನು ಪಡೆಯಬೇಕೆಂದರೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಬೇಕೆಂದು ಆರೋಪಿ ಪದೇ ಪದೇ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಐಎಎಸ್ ಅಧಿಕಾರಿ ಕೊಹಿಮಾದಲ್ಲಿ ಐಡಿಎಎನ್‌ನ ಜಂಟಿ ಕಾರ್ಯದರ್ಶಿಯಾಗಿದ್ದಾರೆ. ಅವರು ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದಾರೆ.

ಮಹಿಳಾ ಆಯೋಗದ ದೂರಿನ ಆಧಾರದ ಮೇಲೆ ಆರೋಪಿ ಅಧಿಕಾರಿಯ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಗೆ ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ಆರೋಪಿ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಈ ವರದಿ ಓದಿದ್ದೀರಾ?: ವಕ್ಫ್ ತಿದ್ದುಪಡಿ ಮಸೂದೆ 2025 | ಬೇರೆ ಧಾರ್ಮಿಕ ಸಂಸ್ಥೆಗಳು ಸ್ವಚ್ಛವಾಗಿವೆಯೇ?

ತನಿಖಾ ತಂಡದ ಪ್ರಾಥಮಿಕ ವರದಿಯು, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 75 ಮತ್ತು 79ರ ಅಡಿಯಲ್ಲಿ ಗುರುತಿಸಬಹುದಾದ ಲೈಂಗಿಕ ಕಿರುಕುಳದ ಕೃತ್ಯಗಳನ್ನು ಆರೋಪಿ ಅಧಿಕಾರಿ ಎಸಗಿದ್ದಾರೆ ಎಂಬುದನ್ನು ವಿವರಿಸಿದೆ. ತನಿಖೆ ಮುಂದುವರೆದಿದೆ.

ಇದೇ ಆರೋಪಿ ಅಧಿಕಾರಿಯ ವಿರುದ್ಧ ಈ ಹಿಂದೆಯೂ ಇಂತಹದ್ದೇ ಹಲವಾರು ಆರೋಪಗಳು ಕೇಳಿಬಂದಿವೆ. 2021ರಲ್ಲಿ ಆರೋಪಿ ಅಧಿಕಾರಿಯು ನೋಕ್ಲಾಕ್ ಜಿಲ್ಲೆಯ ಉಪ ಆಯುಕ್ತರಾಗಿ ನಿಯೋಜನೆಯಾಗಿದ್ದರು. ಆಗ, ತಮ್ಮ ಅಧಿಕೃತ ನಿವಾಸದಲ್ಲಿ ಮನೆ ಕೆಲಸ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

2021ರ ಡಿಸೆಂಬರ್‌ 2ರಂದು ಆರೋಪಿ ಅಧಿಕಾರಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯಗೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. ಆರೋಪಪಟ್ಟಿಯನ್ನು ಪರಿಶೀಲಿಸಿದ್ದ ವಿಶೇಷ ಪೋಕ್ಸೋ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಆರಂಭಿಸಿದ್ದರು. ಇಂದಿಗೂ ಆ ಪ್ರಕರಣವು ಟ್ಯೂನ್ಸಾಂಗ್‌ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...