ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಜಿಂದಾಲ್ ಅಧಿಕಾರಿ ವಿರುದ್ಧ ಎಫ್‌ಐಆರ್

Date:

ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ಎಸಗಿರುವ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದಿದೆ. ಜಿಂದಾಲ್ ಕಂಪನಿಯ ಅಧಿಕಾರಿಯೊಬ್ಬರ ವಿರುದ್ಧ ಕೋಲ್ಕತ್ತಾದ ಏರ್‌ಪೋರ್ಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಂದಾಲ್ ಕಂಪನಿಯ ಅಧಿಕಾರಿ ತಮಗೆ ಕಿರುಕುಳ ನೀಡಿರುವ ಬಗ್ಗೆ ಸಂತ್ರಸ್ತ ಮಹಿಳೆ ‘ಎಕ್ಸ್‌’ನಲ್ಲಿ ಟ್ವೀಟ್‌ ಮಾಡಿ, ಪೋಸ್ಟ್‌ ಮಾಡಿದ್ದಾರೆ. ಕೋಲ್ಕತ್ತಾ-ಅಬುಧಾಬಿ ವಿಮಾನದಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಆಕೆಯ ಪೋಷಕರು ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿಯು ಜಿಂದಾಲ್ ಕಂಪನಿಯಲ್ಲಿ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 74, 75 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಪ್ಪಿತಸ್ಥ ಆರೋಪಿಯ ವಿರುದ್ಧ ಆಂತರಿಕ ತನಿಖೆ ನಡೆಸಿ, ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಂದಾಲ್‌ ಸ್ಟೀಲ್‌ ಆ್ಯಂಡ್‌ ಪವರ್ ಲಿಮಿಟೆಡ್‌ನ (ಜೆಎಸ್‌ಪಿಎಲ್) ಅಧ್ಯಕ್ಷ ನವೀನ್ ಜಿಂದಾಲ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...