ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ, ಹೊರದಬ್ಬಿದ ವಿಕೃತ ಕಾಮುಕರು

Date:

ಚಲಿಸುತ್ತಿದ್ದ ರೈಲಿನಲ್ಲಿ ಕಾಮುಕರ ಗುಂಪು ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿದ್ದು, ರೈಲು ಚಲಿಸುತ್ತಿರುವಾಗಲೇ ರೈಲಿನಿಂದ ಹೊರದಬ್ಬಿರುವ ಆಘಾತಕಾರಿ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಕೆವಿ ಕುಪ್ಪಂ ಬಳಿ ಘಟನೆ ನಡೆದಿದೆ.

ತಿರುಪ್ಪೂರು ಜಿಲ್ಲೆಯ ಅವಿನಾಶಿಯ ಮಹಿಳೆ ಕೊಯಮತ್ತೂರು-ಚಿತ್ತೂರು ಇಂಟರ್‌ಸಿಟಿ ರೈಲಿನಲ್ಲಿ ತಿರುಪತಿಗೆ ತೆರಳುತ್ತಿದ್ದರು. ಅವರು, ಮಹಿಳಾ ಬೋಗಿಯಲ್ಲಿ ಗರ್ಭಿಣಿ ಪ್ರಯಾಣಿಸುತ್ತಿದ್ದರು. ಅಲ್ಲಿಗೆ ಬಂದು ವಿಕೃತ ಕಾಮುಕರ ಗುಂಪು ಆಕೆಗೆ ಲೈಂಗಿಕ ಕಿರುಕುಳ ನೀಡಿದೆ. ಅಲ್ಲದೆ, ಆಕೆಯನ್ನು ರೈಲು ಚಲಿಸುತ್ತಿರುವಾಗಲೇ, ಹೊರಗೆ ನೂಕಿದೆ.

ಮಹಿಳೆ ಕೊಯಮತ್ತೂರಿನಲ್ಲಿ ರೈಲು ಹತ್ತಿದ್ದಳು, ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗಾಗಿ ಗೊತ್ತುಪಡಿಸಿದ್ದ ಮಹಿಳಾ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದಳು. ಆದರೆ, ಜೋಲಾರ್ಪೇಟೆಯಲ್ಲಿ ಆ ವಿಭಾಗದಲ್ಲಿ ಹತ್ತಿದ ಪುರುಷರ ಗುಂಪೊಂದು ಗರ್ಭಿಣಿಗೆ ತೊಂದರೆ ಕೊಟ್ಟಿದೆ. ಆಕೆ ಅವರ ಬಳಿ ಹೊರ ಹೋಗುವಂತೆ ಕೇಳಿಕೊಂಡರೂ ಕೂಡ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲಿನಿಂದ ಕೆಳಗೆಬಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಆಕೆಯ ಕೈ ಮತ್ತು ಕಾಲುಗಳ ಮೂಳೆ ಮುರಿದಿವೆ. ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ವೆಲ್ಲೂರು ಆಸ್ಪತ್ರೆಯಲ್ಲಿ ಗರ್ಭಿಣಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವೆಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಮಹಿಳೆ ವಿವರಿಸಿದ ಗುರುತುಗಳ ಆಧಾರದ ಮೇಲೆ ಕೆ.ವಿ ಕುಪ್ಪಂ ಪ್ರದೇಶದ ಹೇಮರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...