ಭಾರತ ಮಾತೆಗೆ ಮೋದಿ ದ್ರೋಹ ಬಗೆದಿದ್ದಾರೆಂದು ಘೋಷಿಸೋಣವೇ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

Date:

ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಚೀನಾವು ಭಾರತವನ್ನು ಆಕ್ರಮಿಸಿಕೊಂಡಿರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಚೀನಾ ಭಾರತದ ಗಡಿ ಆಕ್ರಮಿಸಿಕೊಂಡರೂ ಪ್ರಧಾನಿ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ “ಭಾರತ ಮಾತೆಗೆ ಮೋದಿ ದ್ರೋಹ ಬಗೆದಿದ್ದಾರೆಂದು ಘೋಷಿಸೋಣವೇ” ಎಂದು ಪ್ರಶ್ನಿಸಿದ್ದಾರೆ.

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಅರುಣಾಚಲ ಪ್ರದೇಶದಲ್ಲಿ ಕನಿಷ್ಠ 60 ಕಿಲೋಮೀಟರ್ ಭಾರತದ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ ಚೀನಾದೊಂದಿಗೆ ರಾಯಭಾರಿ ಮಟ್ಟದ ಸಂಬಂಧವನ್ನು ಕಡಿದುಕೊಳ್ಳಲು ಆಗ್ರಹಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ನಾಯಕ, “ಚೀನಾವು ಪೀಪಲ್ಸ್ ಲಿಬರೇಶನ್ ಆರ್ಮಿಯು (ಪಿಎಲ್‌ಎ) ಭಾರತೀಯ ಭೂಪ್ರದೇಶದೊಳಗೆ 60 ಕಿ.ಮೀ.ನಷ್ಟು ಆಕ್ರಮಿಸಿಕೊಂಡು ಬೀಡುಬಿಟ್ಟಿದೆ ಎಂದು ವರದಿಯಾಗಿದೆ. ಈಗ ನಾವು ಭಾರತ ಮಾತೆಯ ಗೌರವಕ್ಕೆ ಮೋದಿ ದ್ರೋಹ ಬಗೆದಿದ್ದಾರೆ ಎಂದು ಘೋಷಿಸೋಣವೇ? ಚೀನಾದೊಂದಿಗೆ ರಾಯಭಾರಿ ಮಟ್ಟದ ಸಂಬಂಧವನ್ನು ಕಡಿದುಕೊಳ್ಳಲು ನಾನು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೋದಿ 75 ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ, ಕಿತ್ತು ಹಾಕಲಾಗುತ್ತದೆ: ಸುಬ್ರಮಣಿಯನ್ ಸ್ವಾಮಿ

“ಮಾಲ್ಡೀವ್ಸ್ ಸಿಂಡ್ರೋಮ್ ಬಾಂಗ್ಲಾದೇಶದಲ್ಲಿ ಮೌನವಾಗಿ ಹರಡುತ್ತಿದೆ ಮತ್ತು ಮೋದಿ ಅವರ ಪರಂಪರೆಯು ಭಾರತದ ವಿಘಟನೆಗಾಗಿ ಕೆಲಸ ಮಾಡುವ ನೆರೆಹೊರೆಯವರನ್ನು ಸೃಷ್ಟಿಸುತ್ತಿದೆ. ಮುಂಬರುವ 25 ವರ್ಷಗಳ ‘ಅದ್ಭುತ’ ಮೋದಿ ಪರಂಪರೆ: ಭಾರತವನ್ನು ಸುತ್ತುವರೆದಿರುವ ನೆರೆಹೊರೆಯವರು ನಮ್ಮ ವಿಘಟನೆಗಾಗಿ ಕೆಲಸ ಮಾಡುತ್ತಾರೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಬಿಜೆಪಿಯ ಹಿರಿಯ ನಾಯಕ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವಾರು ಬಾರಿ ಸರ್ಕಾರದ ಕೆಲವು ನಿಲುವುಗಳನ್ನು ವಿರೋಧಿಸಿದ್ದಾರೆ. ಪ್ರಧಾನಿ ವಿರುದ್ಧ, ವಿದೇಶಾಂಗ ನೀತಿಯ ವಿರುದ್ಧ ಕಿಡಿಕಾರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...