‘ನಾಚಿಕೆಗೇಡು’: ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆ ವಿಳಂಬಕ್ಕೆ ಸುಪ್ರೀಂ ಕಿಡಿ

Date:

ಆ್ಯಸಿಡ್ ದಾಳಿ ಪ್ರಕರಣಗಳ ತನಿಖೆ ಮತ್ತು ವಿಚಾರಣೆ ತೀವ್ರ ವಿಳಂಬವಾಗುತ್ತಿದ್ದು, ದೀರ್ಘಕಾಲದ ವಿಳಂಬ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದೇಶಾದ್ಯಂತ ಬಾಕಿ ಇರುವ ಆ್ಯಸಿಡ್ ದಾಳಿ ಪ್ರಕರಣ ಸಂಪೂರ್ಣ ವಿವರವನ್ನು ಸಲ್ಲಿಸುವಂತೆ ಎಲ್ಲ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ಗಳಿಗೆ ನಿರ್ದೇಶನ ನೀಡಿದೆ.

ಗುರುವಾರ, ಆ್ಯಸಿಡ್ ದಾಳಿ ಪ್ರಕರಣಗಳ ವಿಳಂಬದ ಕುರಿತು ಆ್ಯಸಿಡ್ ದಾಳಿ ಸಂತ್ರಸ್ತರು ಸಲ್ಲಿಸಿದ್ದ ಅರ್ಜಿಗಳನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ವಿಚಾರಣೆ ನಡೆಸಿದೆ. ವಿಚಾರಣೆಗಳ ವಿಳಂಬವು ವ್ಯವಸ್ಥೆಯ ವೈಫಲ್ಯ ಮತ್ತು ಚಾಚಿಕೆಗೇಡಿಗೆ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಹಾಜರಾಗಿದ್ದ, 2009ರಲ್ಲಿ ಆ್ಯಸಿಡ್ ದಾಳಿಗೆ ಗುರಿಯಾಗಿದ್ದ ದೆಹಲಿ ಸಂತ್ರಸ್ತೆ, “ನನ್ನ ಮೇಲೆ 2009ರಲ್ಲಿ ಆ್ಯಸಿಡ್ ದಾಳಿ ನಡೆದಿದೆ. ಆದರೆ, ಪ್ರಕರಣ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ನಡೆಯುತ್ತಲೇ ಇದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ದೇವನಹಳ್ಳಿ ರೈತರನ್ನು ವಂಚಿಸುವ, ಸೇಡು ತೀರಿಸಿಕೊಳ್ಳುವ ಕುತಂತ್ರಕ್ಕೆ ಸರ್ಕಾರ ಕೈಹಾಕಿದೆಯೇ?

ಪ್ರಕರಣವು 2013ರವರೆಗೆ ಯಾವುದೇ ಪ್ರಗತಿಯನ್ನೂ ಕಂಡಿರಲಿಲ್ಲ. ಪ್ರಕರಣವು ಪ್ರಸ್ತುತ ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಅಂತಿಮ ವಿಚಾರಣೆಯ ಹಂತದಲ್ಲಿದೆ. ಆದಾಗ್ಯೂ, ತೀರ್ಪು ಇನ್ನೂ ಪ್ರಕಟವಾಗಿಲ್ಲ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

“ರಾಷ್ಟ್ರದ ರಾಜಧಾನಿಯಲ್ಲಿಯೇ 16 ವರ್ಷಗಳ ಹಿಂದಿನ ಆ್ಯಸಿಡ್ ದಾಳಿ ಪ್ರಕರಣದ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ ಎಂದರೆ, ದೇಶದ ಇತರ ಭಾಗಗಳ ಸ್ಥಿತಿ ಹೇಗಿರಬಹುದು? ಇದು ಸಮಗ್ರ ವ್ಯವಸ್ಥೆಗೆ ನಾಚಿಕೆಗೇಡು” ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ ಸೂರ್ಯ ಕಾಂತ್, “ವಿಚಾರಣೆಯನ್ನು ದಿನನಿತ್ಯದ ಆಧಾರದ ಮೇಲೆ ನಡೆಸುವುದೇ ಸೂಕ್ತ” ಎಂದಿದ್ದಾರೆ. ದಿನನಿತ್ಯದ ವಿಚಾರಣೆ ಕೋರಿ ಅರ್ಜಿ ಸಲ್ಲಿಸುವಂತೆ ಸಂತ್ರಸ್ತೆಗೆ ಸಲಹೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...