ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ: ಶಶಿ ತರೂರ್

Date:

ಹಿಂದುತ್ವವಾದಿ ವಿ ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್ 10) ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳ ಹಿನ್ನೆಲೆ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮ ವರದಿಗಳಿಂದ ನನಗೆ ‘ವೀರ ಸಾವರ್ಕರ್ ಪ್ರಶಸ್ತಿ’ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದನ್ನು ಇಂದು ದೆಹಲಿಯಲ್ಲಿ ಪ್ರಧಾನ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಈ ಪ್ರಶಸ್ತಿ ಘೋಷಣೆಯ ಬಗ್ಗೆ ನನಗೆ ನಿನ್ನೆ ಕೇರಳದಲ್ಲಿರುವಾಗ ಗೊತ್ತಾಯಿತು. ಅಲ್ಲಿ ನಾನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಿದ್ದೆ. ತಿರುವನಂತಪುರಂನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, ನನಗೆ ಅಂತಹ ಪ್ರಶಸ್ತಿಯ ಬಗ್ಗೆ ತಿಳಿದಿಲ್ಲ. ನಾನು ಅದನ್ನು ಸ್ವೀಕರಿಸಲು ಒಪ್ಪದೆ ನನ್ನ ಹೆಸರನ್ನು ಘೋಷಿಸುವುದು ಆಯೋಜಕರ ಬೇಜವಾಬ್ದಾರಿಯಾಗಿದೆ ಎಂದಿದ್ದೆ”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅದರ ಹೊರತಾಗಿಯೂ, ಇಂದು ದೆಹಲಿಯಲ್ಲಿ, ಕೆಲವು ಮಾಧ್ಯಮಗಳು ಅದೇ ಪ್ರಶ್ನೆಯನ್ನು ಕೇಳುತ್ತಲೇ ಇವೆ. ಆದ್ದರಿಂದ, ಈ ವಿಷಯವನ್ನು ಸ್ಪಷ್ಟವಾಗಿ ಸ್ಪಷ್ಟಪಡಿಸಲು ನಾನು ಈ ಹೇಳಿಕೆಯನ್ನು ನೀಡುತ್ತಿದ್ದೇನೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಗಳು ಬದಲಾದರೂ ಉತ್ತರ ಕರ್ನಾಟಕದ ಜನರ ಬದುಕು ಬದಲಾಗಲಿಲ್ಲವೇಕೆ?

“ಪ್ರಶಸ್ತಿಯ ಸ್ವರೂಪ, ಅದನ್ನು ನೀಡುವ ಸಂಸ್ಥೆ ಅಥವಾ ಯಾವುದೇ ಇತರ ಸಂದರ್ಭೋಚಿತ ವಿವರಗಳ ಬಗ್ಗೆ ಗೊತ್ತಿಲ್ಲದಿರುವಾಗ, ನಾನು ಇಂದು ಕಾರ್ಯಕ್ರಮಕ್ಕೆ ಹಾಜರಾಗುವ ಅಥವಾ ಪ್ರಶಸ್ತಿಯನ್ನು ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈರೇಂಜ್ ರೂರಲ್ ಡೆವಲಪ್‌ಮೆಂಟ್ ಸೊಸೈಟಿ (ಹೆಚ್‌ಆರ್‌ಡಿಎಸ್‌) ಎಂಬ ಸರ್ಕಾರೇತರ ಸಂಸ್ಥೆ ಶಶಿ ತರೂರ್ ಅವರಿಗೆ ‘ವೀರ್ ಸಾವರ್ಕರ್ ಇಂಟರ್ ನ್ಯಾಷನಲ್ ಇಂಪ್ಯಾಕ್ಟ್ ಅವಾರ್ಡ್ 2025’ ನೀಡಲು ಮುಂದಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿದೆ.

ಬುಧವಾರ ನವದೆಹಲಿಯ ಎನ್‌ಡಿಎಂಸಿ ಕನ್ವೆನ್ಷನ್ ಹಾಲ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಮಾನವೀಯ ಸಂಪರ್ಕದಲ್ಲಿ ಬದಲಾವಣೆಗಾಗಿ ಶ್ರಮಿಸಿದ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಗುತ್ತದೆ ಎಂದು ವರದಿ ಹೇಳಿದೆ.

ತರೂರ್‌ಗೆ ಮಾಹಿತಿ ನೀಡಿದ್ದೆವು

ಹೆಚ್‌ಆರ್‌ಡಿಎಸ್‌ ಸಂಸ್ಥೆಯ ಸ್ಥಾಪಕ ಮತ್ತು ಕಾರ್ಯದರ್ಶಿ ಅಜಿ ಕೃಷ್ಣನ್, ‘ರಾಷ್ಟ್ರ ನಿರ್ಮಾಣಕ್ಕಾಗಿ ಮಾಡಿದ ಕೆಲಸ’ ಪರಿಗಣಿಸಿ ತರೂರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

ತರೂರ್ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಒಂದು ತಿಂಗಳ ಹಿಂದೆಯೇ ತಿಳಿಸಲಾಗಿತ್ತು. ನಾವು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಪ್ರಶಸ್ತಿಯ ಬಗ್ಗೆ ತಿಳಿಸಿದ್ದೆವು ಮತ್ತು ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದೆವು. ಇದಲ್ಲದೆ ಎರಡು ವಾರಗಳ ಹಿಂದೆ ನಮ್ಮ ತೀರ್ಪುಗಾರರ ಉಸ್ತುವಾರಿ ರವಿಕಾಂತ್ ಅವರು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿದ್ದರು. ಯಾವುದೇ ಸಮಸ್ಯೆ ಇಲ್ಲದೆ ತರೂರ್ ಕಾರ್ಯಕ್ರಮಕ್ಕೆ ಹಾಜರಾಗಲು ಮತ್ತು ಪ್ರಶಸ್ತಿ ಸ್ವೀಕರಿಸಲು ಒಪ್ಪಿಕೊಂಡಿದ್ದರು. ಈಗ ಕಾಂಗ್ರೆಸ್‌ನ ಒತ್ತಡದಿಂದ ಅವರು ಅಲ್ಲಗಳೆಯುತ್ತಿರಬಹುದು ಎಂದು ಅಜಿ ಕೃಷ್ಣನ್ ಹೇಳಿರುವುದಾಗಿ ಮಾಧ್ಯಮಗಳು ತಿಳಿಸಿವೆ.

ತರೂರ್ ಮತ್ತು ಕಾಂಗ್ರೆಸ್‌

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್, ತರೂರ್ ಸೇರಿದಂತೆ ಪಕ್ಷದ ಯಾವುದೇ ಸದಸ್ಯರು ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಏಕೆಂದರೆ ಆತ ಬ್ರಿಟಿಷರ ಮುಂದೆ ತಲೆಬಾಗಿದವರು ಎಂದು ಹೇಳಿದ್ದರು.

ತರೂರ್ ಆ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ, ಆ ಪ್ರಶಸ್ತಿ ಸ್ವೀಕರಿಸುವುದು ಕಾಂಗ್ರೆಸ್‌ಗೆ ಅವಮಾನ ಮತ್ತು ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತದೆ ಎಂದು ಮುರಳೀಧರನ್ ತಿಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...