ಸಿಎಂ ಶಿಂದೆ ಬಣ ಸೇರಿ ಘೋರ ತಪ್ಪು ಮಾಡಿದೆ ಎಂದ ಶಿವಸೇನೆ ಶಾಸಕ ಶ್ರೀನಿವಾಸ್ ವಂಗಾ ನಾಪತ್ತೆ!

Date:

ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡು, “ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಬೆಂಬಲಿಸಿ, ಅವರ ಬಣ ಸೇರಿ ಘೋರ ತಪ್ಪು ಮಾಡಿದೆ” ಎಂದು ಹೇಳಿಕೊಂಡಿದ್ದ ಮಹಾರಾಷ್ಟ್ರದ ಪಾಲ್ಘರ್‌ನ ಶಿವಸೇನೆಯ ಹಾಲಿ ಶಾಸಕ ಶ್ರೀನಿವಾಸ್ ವಂಗಾ ಸುಮಾರು 13 ಗಂಟೆಗಳಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ದಿವಂಗತ ಬಿಜೆಪಿ ಸಂಸದ ಚಿಂತಾಮನ್ ವಂಗಾ ಅವರ ಪುತ್ರ ಶ್ರೀನಿವಾಸ್ ಅವರು 2019ರ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಘರ್ (ಪರಿಶಿಷ್ಟ ಪಂಗಡಗಳು) ಕ್ಷೇತ್ರದಿಂದ ಶಿವಸೇನೆಯ ಅಭ್ಯರ್ಥಿಯಾಗಿ ಗೆದ್ದು ಶಾಸಕರಾದರು. ಅದಾದ ಬಳಿಕ ಶಿವಸೇನೆ ಎರಡು ಬಣಗಳಲ್ಲಿ ವಿಭಜನೆಯಾಗಿದ್ದು ಶ್ರೀನಿವಾಸ್ ವಂಗಾ ಅವರು ಶಿಂದೆ ಬಣವನ್ನು ಬೆಂಬಲಿಸಿದ್ದರು. ಈ ವಿಧಾನಸಭೆ ಚುನಾವಣೆಯಲ್ಲಿ ಶಿಂದೆ ನೇತೃತ್ವದ ಶಿವಸೇನೆಯ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದರು.

ಆದರೆ ಶಿಂದೆ ಶಿವಸೇನೆಯು ಜೂನ್ 2022ರಲ್ಲಿ ಉದ್ಧವ್ ಠಾಕ್ರೆ ಅವರ ನಾಯಕತ್ವದ ವಿರುದ್ಧ ಬಂಡಾಯವೆದ್ದು ಏಕನಾಥ್ ಶಿಂದೆ ಜೊತೆ ನಿಂತ ಮಾಜಿ ಸಂಸದ ರಾಜೇಂದ್ರ ಗವಿತ್‌ಗೆ ಟಿಕೆಟ್ ನೀಡಿದೆ. ಇದರಿಂದಾಗಿ ಅಸಮಾಧಾನಗೊಂಡಿರುವ ಶ್ರೀನಿವಾಸ್ ವಂಗಾ, ಶಿಂದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಚುನಾವಣಾ ಸಮಯದಲ್ಲಿ ಮಹಾಯುತಿ ಜನಪರ ನೀತಿ; ಹೆಣಗಾಡುತ್ತಿವೆ ವಿಪಕ್ಷಗಳು

ಭಾನುವಾರ ಶಿವಸೇನೆ (ಶಿಂದೆ ಬಣ) ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಪಾಲ್ಘರ್ ವಿಧಾನಸಭಾ ಕ್ಷೇತ್ರದಲ್ಲಿ ರಾಜೇಂದ್ರ ಗವಿತ್‌ ಅವರನ್ನು ಕಣಕ್ಕಿಳಿಸಿದೆ. ತನಗೆ ಟಿಕೆಟ್ ಸಿಕ್ಕಿಲ್ಲ ಎಂದು ಖಚಿತವಾದ ಬಳಿಕ ವಂಗಾ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ‘ದೇವರಂತಹ ಮನುಷ್ಯ’ ಎಂದು ಬಣ್ಣಿಸಿದರು.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರ ಕುಟುಂಬ ಸದಸ್ಯರು, “ಶ್ರೀನಿವಾಸ್ ವಂಗಾ ಆಹಾರ ಸೇವಿಸುವುದನ್ನು ನಿಲ್ಲಿಸಿದ್ದಾರೆ. ತೀವ್ರ ಮಾನಸಿಕವಾಗಿ ಕುಗ್ಗಿದ್ದು ಅಳುತ್ತಿದ್ದಾರೆ. ತಮ್ಮ ಪ್ರಾಣಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಶಿಂದೆ ಅವರು ವಂಗಾ ಪತ್ನಿಯನ್ನು ಸಂಪರ್ಕಿಸಿ, “ವಂಗಾ ಅವರನ್ನು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಪರಿಗಣಿಸಲಾಗುವುದು” ಎಂದು ಭರವಸೆ ನೀಡಿದರು. ಈ ನಡುವೆ ಶಿಂದೆ ಬಣದ ಶಾಸಕ ಶ್ರೀನಿವಾಸ್ ವಂಗಾ ಮನೆಯಲ್ಲಿ ಯಾರಿಗೂ ತಿಳಿಸಿದೆ ಹೊರಹೋಗಿದ್ದಾರೆ. ಸುಮಾರು 13 ಗಂಟೆಗಳ ಕಾಲ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಸದ್ಯ ವಂಗಾ ಅವರ ಭಾವನಾತ್ಮಕ ಪ್ರತಿಕ್ರಿಯೆ ವಿಡಿಯೋ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿ ವಾಹಿನಿಗಳಲ್ಲಿ ವೈರಲ್ ಆಗಿವೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...