ರಾಮೇಶ್ವರ ಕೆಫೆ ಸ್ಪೋಟದ ಬಗ್ಗೆ ಹೇಳಿಕೆ: ತಮಿಳುನಾಡು ಜನರಲ್ಲಿ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ

Date:

ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಕೆಲವೇ ಗಂಟೆಗಳ ನಂತರ ತನ್ನ ಹೇಳಿಕೆಗೆ ಕ್ಷಮೆಯಾಚಿಸಿದರು.

“ತಮಿಳುನಾಡಿನ ಜನರು ಅಲ್ಲಿ ತರಬೇತಿ ಪಡೆದು ಇಲ್ಲಿ ಬಂದು ಬಾಂಬ್‌ ಹಾಕುತ್ತಾರೆ. ಕೆಫೆಯಲ್ಲಿ ಬಾಂಬ್ ಇಟ್ಟಿದ್ದೂ ಕೂಡ ಅಲ್ಲಿಂದ ಬಂದವರು” ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು ಇದು ವಿವಾದಕ್ಕೆ ಕಾರಣವಾಗಿತ್ತು. ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರು ಶೋಭಾ ಕರಂದ್ಲಾಜೆ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ತಮಿಳು ಸಹೋದರರು ಮತ್ತು ಸಹೋದರಿಯರೇ, ನಾನು ಈ ಪ್ರಕರಣದ ಬೆಳಕು ಚೆಲ್ಲುವ ಉದ್ದೇಶದಿಂದ ಹೇಳಿಕೆ ನೀಡಿರುವುದೇ ಹೊರತು ಯಾರ ಮೇಲೆಯೂ ಆರೋಪ ಹೊರಿಸುವ ಉದ್ದೇಶ ಹೊಂದಿರಲಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಆದರೂ ನನ್ನ ಹೇಳಿಕೆ ಕೆಲವರಿಗೆ ನೋವು ತಂದಿದೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಶೋಭಾ ಕರಂದ್ಲಾಜೆ ಎಕ್ಸ್ (ಟ್ವೀಟ್) ಮಾಡಿದ್ದಾರೆ.

ಇದನ್ನು ಓದಿದ್ದೀರಾ? ‘ತಮಿಳುನಾಡಿನಿಂದ ಟ್ರೈನಿಂಗ್ ತಗೊಂಡು ಬಂದವರು ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾರೆ’ ಎಂದ ಶೋಭಾ ಕರಂದ್ಲಾಜೆ!

“ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಸಂಬಂಧಿಸಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿರುವ ಬಗ್ಗೆ ನನ್ನ ಹೇಳಿಕೆಯಾಗಿತ್ತು. ಇದು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದ ಹೇಳಿಕೆ. ತಮಿಳುನಾಡಿನ ಎಲ್ಲರಿಗೂ ನನ್ನ ಹೃದಯದ ಆಳದಿಂದ, ನಾನು ಕ್ಷಮೆ ಕೇಳುತ್ತೇನೆ. ಇದಲ್ಲದೆ, ನನ್ನ ಹಿಂದಿನ ಹೇಳಿಕೆಯನ್ನು ನಾನು ಹಿಂಪಡೆಯುತ್ತೇನೆ” ಎಂದು ಹೇಳಿದರು.

ಮಾರ್ಚ್ 1 ರಂದು ಮಧ್ಯಾಹ್ನ 1 ಗಂಟೆಗೆ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರದ ಆರಂಭದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕದ ಬಳ್ಳಾರಿಯ ಶಬ್ಬೀರ್‌ನನ್ನು ಬಂಧಿಸಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...