ಆಘಾತಕಾರಿ ಘಟನೆ | CNG ತುಂಬಿಸಲು ಕಾರಿನಿಂದ ಹೊರ ಬನ್ನಿ ಎಂದಿದ್ದಕ್ಕೆ ಎದೆಗೆ ಗನ್‌ ಇಟ್ಟ ಮಹಿಳೆ; ವಿಡಿಯೋ ವೈರಲ್

Date:

ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಸಿಎನ್‌ಜಿ ತುಂಬಿಸುವಾಗ ಕಾರಿನೊಳಗೆ ಕೂರಬಾರದು, ಹೊರಗೆ ಬನ್ನಿ ಎಂದಿದ್ದಕ್ಕೆ ಉದ್ರಿಕ್ತಗೊಂಡ ಮಹಿಳೆಯೊಬ್ಬರು ಪೆಂಟ್ರೋಲ್ ಪಂಪ್‌ ಉದ್ಯೋಗಿಯ ಎದೆಗೆ ಗನ್‌ ಇಟ್ಟು ದಾಂಧಲೆ ನಡೆಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ ನಡೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಉತ್ತರ ಪ್ರದೇಶದ ಹಾರ್ದೋಯ್ ಜಿಲ್ಲೆಯಲ ಬಿಲ್ಗ್ರಾಮ್ ಪಟ್ಟಣದ ಬಳಿಯ ‘ಎಚ್‌ಪಿ’ ಪೆಟ್ರೋಲ್‌ ಬಂಕ್‌ನಲ್ಲಿ ಘಟನೆ ನಡೆದಿದೆ. ವರದಿ ಪ್ರಕಾರ, ಕಾರಿನಲ್ಲಿ ತಂದೆ, ತಾಯಿ ಮತ್ತು ಮಗಳು ತಮ್ಮ ಕಾರಿಗೆ ಸಿಎನ್‌ಜಿ ತುಂಬಿಸಲು ಪೆಟ್ರೋಲ್‌ ಬಂಕ್‌ಗೆ ಬಂದಿದ್ದರು. ಸಿಎನ್‌ಜಿ ತುಂಬಿಸುವಾಗ ಕಾರಿನಿಂದ ಹೊರಬರುವಂತೆ ಪೆಟ್ರೋಲ್ ಪಂಪ್‌ ಉದ್ಯೋಗಿ ಹೇಳಿದ್ದಾರೆ. ಆ ಕಾರಣಕ್ಕೆ, ಉದ್ಯೋಗಿಯೊಂದಿಗೆ ಮಹಿಳೆಯ ತಂದೆ ಜಗಳಕ್ಕಿಳಿದಿದ್ದಾರೆ. ಈ ವೇಳೆ, ರಿವಲ್ವಾರ್ ಹಿಡಿದು ಕಾರಿನಿಂದ ಇಳಿದುಬಂದ ಮಹಿಳೆ ಏಕಾಏಕಿ ಪೆಟ್ರೋಲ್ ಪಂಪ್ ಉದ್ಯೋಗಿಯ ಎದೆಗೆ ಗುರಿಯಿಟ್ಟಿದ್ದಾರೆ.

ವಿಡಿಯೋದಲ್ಲಿ; ಮಹಿಳೆಯು ಕಾರಿನಿಂದ ರಿವಲ್ವಾರ್ ತಂದು ಉದ್ಯೋಗಿಯ ಎದೆಗೆ ಗುರಿಯಿಡುತ್ತಾರೆ. ಒಂದು ಕ್ಷಣ ಪೆಟ್ರೋಲ್ ಪಂಪ್ ಉದ್ಯೋಗಿಗಳು ಭಯಗೊಳ್ಳುತ್ತಾರೆ. ಬಳಿಕ, ಮತ್ತೊಬ್ಬ ಉದ್ಯೋಗಿ ಮಹಿಳೆಯನ್ನು ತಡೆಯುತ್ತಾರೆ. ಅದೃಷ್ಟಕ್ಕೆ, ಮಹಿಳೆ ಗುಂಡನ್ನು ಹಾರಿಸುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ಉತ್ತರ ಪ್ರದೇಶದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಕಳವಳ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಪೆಟ್ರೋಲ್‌ ಪಂಪ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮೊಬೈಲ್ ವೀಡಿಯೊ ರೆಕಾರ್ಡಿಂಗ್‌ಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...