ಆಘಾತಕಾರಿ ಘಟನೆ | ವಿದ್ಯಾರ್ಥಿಗೆ 30 ಬಾರಿ ಕಪಾಳಕ್ಕೆ ಹೊಡೆದು, ಉಗುಳು ನೆಕ್ಕಲು ಒತ್ತಾಯಿಸಿ ವಿಕೃತಿ

Date:

ಕಿರಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿ 30 ಬಾರಿ ಕಪಾಳಕ್ಕೆ ಹೊಡೆದು, ಉಗುಳನ್ನು ನೆಕ್ಕುವಂತೆ ಒತ್ತಾಯಿಸಿ, ಕೊಲೆ ಬೆದರಿಕೆ ಹಾಕಿ, ಶೌಚಾಲಯದಲ್ಲಿ ಕೂಡಿ ಹಾಕಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರದಲ್ಲಿ ನಡೆದಿದೆ.

2ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸಂತ್ರಸ್ತ ವಿದ್ಯಾರ್ಥಿ ಆಘಾತಕ್ಕೊಳಗಾಗಿದ್ದು, ಒಂದು ತಿಂಗಳಿನಿಂದ ಜ್ವರದಿಂದ ಬಳಲುತ್ತಿದ್ದಾನೆ. ಮಾತ್ರವಲ್ಲದೆ, ಶಾಲೆಗೆ ಹೋಗಲು ನಿರಾಕರಿಸಿದ್ದಾನೆ. ಆತನ ನಡವಳಿಕೆಯಿಂದ ಆತಂಕಗೊಂಡ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಬಳಿ ತಾವು ಅನುಭವಿಸಿದ ಭಯಾನಕ ಘಟನೆಯ ಬಗ್ಗೆ ವಿದ್ಯಾರ್ಥಿ ಬಾಲಕ ಹೇಳಿಕೊಂಡಿದ್ದಾನೆ.

“ನಮ್ಮ ಮಗ ಹಲವು ದಿನಗಳಿಂದ ಜ್ವರ, ಆತಂಕದಿಂದ ಬಳಲುತ್ತಿದ್ದನು. ಮಾರ್ಚ್ 4 ರಂದು ಶಾಲೆಗೆ ಹೋಗುವಂತೆ ಕೇಳಿದಾಗ, ಆತ ಶಾಲೆಗೆ ಹೋಗಲು ನಿರಾಕರಿಸಿದನು. ಆಗ್ರಾದಲ್ಲಿ 3-4 ವೈದ್ಯರ ಬಳಿ ಕರದೊಯ್ದರೂ, ಆತನ ಅನಾರೋಗ್ಯಕ್ಕೆ ಕಾರಣವೇನು ಎಂಬುದು ಗೊತ್ತಾಗಲಿಲ್ಲ. ಇತ್ತೀಚೆಗೆ, ಆತ ನಿದ್ರೆಯಲ್ಲಿದ್ದಾಗ, ‘ಅವನು ನನ್ನನ್ನು ಹೊಡೆಯುತ್ತಾನೆ’ ಎಂದು ಕನವರಿಸುತ್ತಿದ್ದ. ಬಳಿಕ, ಆತನನ್ನು ಕೌನ್ಸೆಲಿಂಗ್‌ಗೆ ಒಳಪಡಿಸಿದಾಗ, ತಾನು ಎದುರಿಸಿದ್ದ ಭೀಕರ ಘಟನೆಯ ಬಗ್ಗೆ ವೈದ್ಯರ ಬಳಿ ಹೇಳಿಕೊಂಡಿದ್ದಾನೆ” ಎಂದು ಬಾಲಕನ ತಾಯಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲಾ ಬಸ್‌ನಲ್ಲಿ ತೆರಳುವಾಗ ತನ್ನ ಹಿರಿಯ ವಿದ್ಯಾರ್ಥಿ ಶೂಗಳಿಗೆ ಉಗುಳಿ ಅದನ್ನು ನೆಕ್ಕಲು ಹೇಳಿದನು. ತನಗೆ 30 ಬಾಕಿ ಕಪಾಳಕ್ಕೆ ಹೊಡೆದನು. ಕತ್ತು ಹಿಸುಕಿ ಕೊಲ್ಲುವುದಾಗಿ ಬೆದರಿಕೆ ಹಾಕಿದನು. ಮಾತ್ರವಲ್ಲದೆ, ಶೌಚಾಲಯದಲ್ಲಿ ಕೂಡಿ ಹಾಕಿದ್ದನು” ಎಂದು ವೈದ್ಯರ ಬಳಿ ಬಾಲಕಿ ಹೇಳಿಕೊಂಡಿದ್ದಾನೆ.

ಬಳಿಕ ಪೋಷಕರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ” ಎಂದು ಆಗ್ರಾದ ಸಹಾಯಕ ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

ಈ ಪ್ರಕರಣವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವೈಯಕ್ತಿಕವಾಗಿ ನಿಭಾಯಿಸುವುದಾಗಿ ಹೇಳಿದ್ದಾರೆ. “ಸಂತ್ರಸ್ತ ಬಾಲಕನ ಪೋಷಕರು ಮಾರ್ಚ್‌ 4ರಂದು ನಮಗೆ ದೂರು ನೀಡಿದ್ದಾರೆ. ನಾವು ಒಂದು ಸಮಿತಿ ರಚಿಸಿದ್ದೇವೆ. ವಿದ್ಯಾರ್ಥಿಗಳ ಪ್ರಯಾಣಿಸುವ ಶಾಲಾ ಬಸ್‌ನ ಅಟೆಂಡರ್‌ಅನ್ನು ಅಮಾನತುಗೊಳಿಸಿದ್ದೇವೆ. ನಾವು ಬಸ್‌ನ ವಾಹನದ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿ ವಿದ್ಯಾರ್ಥಿಯನ್ನು ಶಾಲೆಗೆ ಬಾರದಂತೆ ತಿಳಿಸಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...