ರಾಮ ಪ್ರಾಣ ಪ್ರತಿಷ್ಠಾಪನೆ | ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆ ಬಂದ್ ಮಾಡಿದ್ದ ಝೊಮ್ಯಾಟೊ

Date:

ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನಡೆದ ದಿನ, ಝೊಮ್ಯಾಟೊ ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆಯನ್ನು ಸ್ಥಗಿತಗೊಳಿಸಿತ್ತು.

ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಕೆಲವು ರಾಜ್ಯಗಳಲ್ಲಿ ಮಾಂಸದ ಅಂಗಡಿ ಹಾಗೂ ಮದ್ಯ ಮಾರಾಟ ಬಂದ್ ಮಾಡಲಾಗಿತ್ತು. ಸರ್ಕಾರದ ಆದೇಶದ ಮೇರೆಗೆ ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಮಾಂಸಾಹಾರ ವಿತರಣೆಯನ್ನು ಝೊಮ್ಯಾಟೊ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಝೊಮ್ಯಾಟೊನಿಂದ ಏಕಾಏಕಿ ಮಾಂಸಾಹಾರ ವಸ್ತುಗಳ ಆಯ್ಕೆಗಳ ಪಟ್ಟಿ ಕಾಣೆಯಾಗಿದೆ ಎಂದು ಹಲವರು ಟ್ವೀಟ್ ಮಾಡಿದ್ದಾರೆ. ಝೊಮ್ಯಾಟೊದಲ್ಲಿ ಮಾಂಸಾಹಾರ ಆಯ್ಕೆ ಪಟ್ಟಿ ಇಲ್ಲದ ಬಗ್ಗೆ ನಾನಾ ರೀತಿಯಲ್ಲಿ ಚರ್ಚೆಗಳು ನಡೆದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್ ಮಾಡಿರುವ ಝೊಮ್ಯಾಟೊ, “ಸರ್ಕಾರದ ಸೂಚನೆಯಂತೆ ಉತ್ತರ ಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಾಂಸಾಹಾರ ಆಹಾರ ವಿತರಣೆಯನ್ನು ಸ್ಥಗಿತಗೊಳಿಸಿದ್ದೇವೆ. ಈ ಸ್ಪಷ್ಟೀಕರಣವು ಝೊಮ್ಯಾಟೊ ಬಳಕೆದಾರರಿಗೆ ಸಹಾಯ ಮಾಡುತ್ತದೆ ಎಂದು ಭಾವಿಸುತ್ತೇವೆ” ಎಂದು ಹೇಳಿದೆ.

ಉತ್ತರ ಪ್ರದೇಶದ ನ್ಯಾಷನಲ್ ರೆಸ್ಟೊರೆಂಟ್ ಅಸೋಸಿಯೇಶನ್ ಆಫ್ ಇಂಡಿಯಾದ ಮುಖ್ಯಸ್ಥ ವರುಣ್ ಖೇರಾ ಅವರು, “ಜನವರಿ 22 ರಂದು ರಾಜ್ಯದಾದ್ಯಂತ ರೆಸ್ಟೋರೆಂಟ್‌ಗಳು ಒಟ್ಟಾಗಿ ಸಸ್ಯಾಹಾರ ಆಹಾರವನ್ನು ಮಾತ್ರ ನೀಡಲು ನಿರ್ಧರಿಸಿದ್ದವು. ಸರ್ಕಾರದ ಆದೇಶವನ್ನು ಗೌರವಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

“ಭಾನುವಾರದಂದು ಅಂಗಡಿಗಳನ್ನು ಮುಚ್ಚಲು ಸರ್ಕಾರ ಹೇಳಿಲ್ಲ. ಸರ್ಕಾರದ ಆದೇಶವು ಸೋಮವಾರ ಮಾತ್ರ ಅಂಗಡಿ ಮುಚ್ಚಲು ತಿಳಿಸಿತ್ತು. ಅನೇಕ ಜನರು ಈಗಾಗಲೇ ಈ ಸಂದರ್ಭವನ್ನು ಆಚರಿಸುತ್ತಿರುವುದರಿಂದ, ಎಲ್ಲ ಸಂಭ್ರಮದ ನಡುವೆ ಮಾಂಸ ಮಾರಾಟ ಮಾಡುವುದು ಅನುಚಿತವೆಂದು ಭಾವಿಸಿ, ಸ್ವಯಂಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿದ್ದೆವು” ಎಂದು ಗಾಜಿಯಾಬಾದ್‌ನ ಮಾಂಸದ ಅಂಗಡಿಯ ಮಾಲೀಕ ಮೊಹಮ್ಮದ್ ಎಹ್ಸಾನುಲ್ಲಾ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದೀರ್ಘಕಾಲದ ಪ್ರಕರಣ: ರಾಜ್ಯದಲ್ಲಿ 200 ಮಂದಿ ಆರೋಪಿಗಳ ಬಂಧನ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೆ ಅನುಗುಣವಾಗಿ ಜನವರಿ 22 ರಂದು ಸಂಜೆ 4 ಗಂಟೆಯವರೆಗೆ ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳನ್ನು ಮುಚ್ಚುವುದಾಗಿ ಘೋಷಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...