ಸಿಕ್ಕಿಂ | ಹಠಾತ್ ಪ್ರವಾಹದಿಂದ 10 ಸಾವು; 80ಕ್ಕೂ ಹೆಚ್ಚು ಮಂದಿ ಕಣ್ಮರೆ

Date:

ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ, ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 22 ಸೇನಾ ಸಿಬ್ಬಂದಿ ಸೇರಿದಂತೆ 80 ಮಂದಿ  ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿಗೀಡಾದವರ ಮತ್ತು ಕಣ್ಮರೆಯಾದವರ ಸಂಖ್ಯೆ ಇನ್ನೂ ಹೆಚ್ಚಿದೆ ಎನ್ನಲಾಗುತ್ತಿದೆ.

ಸಿಕ್ಕಿಂನಲ್ಲಿ ನಸುಕಿನ 1.30 ರ ಸುಮಾರಿಗೆ ಪ್ರಾರಂಭವಾದ ಪ್ರವಾಹವು ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡುವುದರಿಂದ ಉಲ್ಬಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ವಿವಿಧ ಭಾಗಗಳಿಂದ ಸುಮಾರು 3,000 ಪ್ರವಾಸಿಗರು ಸಿಕ್ಕಿಂನ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಸಿಕ್ಕಿಂ ಮುಖ್ಯ ಕಾರ್ಯದರ್ಶಿ ವಿ ಬಿ ಪಾಠಕ್ ತಿಳಿಸಿದ್ದಾರೆ. ಚುಂಗ್‌ಥಾಂಗ್‌ನಲ್ಲಿ ತೀಸ್ತಾ ಮೂರನೇ ಹಂತದ ಅಣೆಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದ ಹಲವಾರು ಕಾರ್ಮಿಕರು ಕೂಡ ಅಣೆಕಟ್ಟಿನ ಸುರಂಗಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪಾಠಕ್ ಹೇಳಿದರು.

ಉತ್ತರ ಬಂಗಾಳದಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರು ಸತ್ತವರನ್ನೂ ಒಳಗೊಂಡಂತೆ ಸತ್ತವರೆಲ್ಲರೂ ನಾಗರಿಕರು ಎಂದು ಗುರುತಿಸಲಾಗಿದೆ. ಬೆಳಿಗ್ಗೆ ನಾಪತ್ತೆಯಾಗಿದ್ದ 23 ಸೈನಿಕರಲ್ಲಿ ಒಬ್ಬನನ್ನು ನಂತರ ರಕ್ಷಿಸಲಾಗಿದೆ ಎಂದು ಅವರು ಹೇಳಿದರು.

14 ಸೇತುವೆಗಳು ಕುಸಿದು ಬಿದ್ದಿದ್ದು, ಅವುಗಳಲ್ಲಿ ಒಂಬತ್ತು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಮತ್ತು ಐದು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಪ್ರವಾಹದಿಂದಾಗಿ ರಸ್ತೆಗಳಿಗೆ ವ್ಯಾಪಕ ಹಾನಿಯುಂಟಾಗಿದೆ ಎಂದು ಸಿಕ್ಕಿಂ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ಮಾತನಾಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು ಮತ್ತು ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಸಿಕ್ಕಿಂ ಮತ್ತು ಹಿಮಾಚಲ ಪ್ರದೇಶದ ದುರಂತಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...