ತನ್ನ ಮಹಿಳಾ ಉದ್ಯೋಗಿಗಳಿಗೆ ‘ಮುಟ್ಟಿನ ರಜೆ’ ಘೋಷಿಸಿದ ಸಿಕ್ಕಿಂ ಹೈಕೋರ್ಟ್

Date:

ಸಿಕ್ಕಿಂ ಹೈಕೋರ್ಟ್ ತನ್ನ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ ಪಾಲಿಸಿಯನ್ನು ಪರಿಚಯಿಸಿದ್ದು ಮುಟ್ಟಿನ ರಜೆ ಘೋಷಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೇ 27ರಂದು ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಸಿಕ್ಕಿಂ ಹೈಕೋರ್ಟ್ ರಿಜಿಸ್ಟ್ರಿ ಮಹಿಳಾ ಉದ್ಯೋಗಿಗಳು ಒಂದು ತಿಂಗಳಲ್ಲಿ ‘2-3 ದಿನಗಳ ಮುಟ್ಟಿನ ರಜೆ’ ಪಡೆಯಬಹುದು ಎಂದು ಹೇಳಿದೆ.

ಆದರೆ ಹೈಕೋರ್ಟ್‌ನ ವೈದ್ಯಕೀಯ ಅಧಿಕಾರಿಯ ಪೂರ್ವ ಶಿಫಾರಸಿನ ಮೇರೆಗೆ ಮಾತ್ರ ಈ ರಜೆಗಳನ್ನು ಪಡೆಯಲು ಅವಕಾಶವಿದೆ ಎಂದು ಹೇಳಿದೆ. ‘ಈ ರಜೆಯನ್ನು ಉದ್ಯೋಗಿಯ ಒಟ್ಟಾರೆ ರಜೆಯಲ್ಲಿ ಸೇರಿಸಿ ಲೆಕ್ಕಾಚಾರ ಮಾಡಲಾಗುವುದಿಲ್ಲ’ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಅತ್ಯಂತ ಚಿಕ್ಕ ಹೈಕೋರ್ಟ್ ಸಿಕ್ಕಿಂ ಹೈಕೋರ್ಟ್ ಆಗಿದ್ದು ಮೂರು ನ್ಯಾಯಾಧೀಶರನ್ನು ಈ ಹೈಕೋರ್ಟ್ ಹೊಂದಿದೆ. ಹೈಕೋರ್ಟ್ ವೆಬ್‌ಸೈಟ್ ಪ್ರಕಾರ, ಒಬ್ಬ ಮಹಿಳಾ ಅಧಿಕಾರಿ ಸೇರಿದಂತೆ ನೋಂದಾವಣೆಯಲ್ಲಿ ಕೇವಲ 9 ಅಧಿಕಾರಿಗಳು ಇದ್ದಾರೆ.

ಮುಟ್ಟಿನ ರಜೆ ಪಾಲಿಸಿಯನ್ನು ಪರಿಚಯಿಸಿದ ದೇಶದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಯನ್ನು ಸಿಕ್ಕಿಂ ಹೈಕೋರ್ಟ್ ಪಡೆದುಕೊಂಡಿದೆ. ಪ್ರಸ್ತುತ, ಮುಟ್ಟಿನ ರಜೆಗೆ ಯಾವುದೇ ರಾಷ್ಟ್ರೀಯ ನೀತಿ ಅಥವಾ ಕಾನೂನು ಇಲ್ಲ.

ದೇಶದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಘೋಷಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 2023ರಲ್ಲಿ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಅರ್ಜಿದಾರರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಈ ಅರ್ಜಿಯನ್ನು ಸಲ್ಲಿಸಲು ಶಿಫಾರಸು ಮಾಡಿದೆ.

ಇದನ್ನು ಓದಿದ್ದೀರಾ?  ಮುಟ್ಟಿನ ರಜೆ | ಮಹಿಳಾ ಸಮಸ್ಯೆಗಳ ಕುರಿತ ವಿ’ಸ್ಮೃತಿ’ಗೆ ಕೊನೆಯೆಲ್ಲಿ?

ಮುಟ್ಟಿನ ರಜೆ ವಿರೋಧಿಸಿದ್ದ ಸ್ಮೃತಿ ಇರಾನಿ

ಇನ್ನು ಡಿಸೆಂಬರ್ 2023 ರಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಈ ಮುಟ್ಟಿನ ರಜೆ ಪಾಲಿಸಿಯನ್ನು ವಿರೋಧಿಸಿದ್ದರು. “ಮುಟ್ಟು ಒಂದು ಅಂಗವೈಕಲ್ಯವಲ್ಲ ಎಂದು ನಾನು ನಂಬುತ್ತೇನೆ” ಎಂದು ಇರಾನಿ ಹೇಳಿದ್ದರು. ಈ ಮೂಲಕ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅದೇ ತಿಂಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ರೂಪಿಸಿದೆ. ಈ ಪಾಲಿಸಿ ಮಹಿಳೆಯರಿಗೆ ಯಾವುದೇ ತಾರತಮ್ಯವಾಗದಂತೆ ಮನೆಯಿಂದ ಕೆಲಸ ಅಥವಾ ಬೆಂಬಲ ರಜೆಗಳು ಲಭ್ಯವಿರಬೇಕು ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...