6 ರಾಜ್ಯಗಳಲ್ಲಿ SIR ಪೂರ್ಣ: ಗುಜರಾತ್‌ನಲ್ಲಿ 68 ಲಕ್ಷ ಮತದಾರರನ್ನು ಹೊರಹಾಕಿದ ಆಯೋಗ; ದೇಶದಲ್ಲೇ ಅಧಿಕ

Date:

ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ ಭಾರೀ ಸಂಖ್ಯೆಯ ಮತದಾರರನ್ನು ಚುನಾವಣಾ ಆಯೋಗವು ಹಾರದಬ್ಬಿದೆ. ಆಯೋಗದ ಅಧಿಕೃತ ಬಿಡುಗಡೆಯ ಪ್ರಕಾರ, ಗುಜರಾತ್‌ನಲ್ಲಿ ಅತೀ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಎಸ್‌ಐಆರ್ ನಡೆದ ಆರು ರಾಜ್ಯಗಳ ಪೈಕಿ, ಗುಜರಾತ್ ಅತಿ ಹೆಚ್ಚು 68,12,711 ಮತದಾರರನ್ನು ಆಯೋಗವು ಹೊರಹಾಕಿದೆ. ಎಸ್‌ಐಆರ್‌ಗಿಂತ ಮೊದಲು ಗುಜರಾತ್‌ನಲ್ಲಿ 5,08,43,436 ಮತದಾರರಿದ್ದರು. ಇದೀಗ, 4,40,30,725ಕ್ಕೆ (-13.40%) ಇಳಿಸಲಾಗಿದೆ.

ಇನ್ನು, ಮಧ್ಯಪ್ರದೇಶದಲ್ಲಿ 34,25,078 ಮತದಾರರ ಹೆಸರನ್ನು ಅಳಿಸಲಾಗಿದ್ದು, ಮತದಾರರ ಸಂಖ್ಯೆಯು 5,74,06,143 ರಿಂದ 5,39,81,065 (-5.97%) ಕ್ಕೆ ಇಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಸ್ಥಾನದಲ್ಲಿ ಮತದಾರರ ಸಂಖ್ಯೆ 5,46,56,215 ರಿಂದ 5,15,19,929ಕ್ಕೆ (-31,36,286) ಇಳಿದಿದೆ.
ಛತ್ತೀಸ್‌ಗಢದಲ್ಲಿ 2,12,30,737 ರಿಂದ 1,87,30,914ಕ್ಕೆ (-24,99,823) ಇಳಿಕೆಯಾಗಿದೆ.
ಕೇರಳದಲ್ಲಿ 2,78,50,855 ರಿಂದ 2,69,53,644ಕ್ಕೆ (-8,97,211) ಇಳಿಸಲಾಗಿದೆ.
ಗೋವಾದಲ್ಲಿ 11,85,034 ರಿಂದ 10,57,566ಕ್ಕೆ (1,27,468) ಕಡಿತಗೊಂಡಿದೆ.
ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತದಾರರ ಸಂಖ್ಯೆ 3,10,404 ರಿಂದ 2,58,040ಕ್ಕೆ (-52,364) ಇಳಿದಿದ್ದರೆ, ಪುದುಚೇರಿಯಲ್ಲಿ 10,21,578 ರಿಂದ 9,44,211ಕ್ಕೆ (-77,367) ಇಳಿದಿದೆ. ಇನ್ನು, ಲಕ್ಷದ್ವೀಪದಲ್ಲಿ 57,813 ರಿಂದ 57,607ಕ್ಕೆ (-206) ಇಳಿಸಲಾಗಿದೆ.

ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಎಸ್‌ಐಆರ್‌ ನಡೆಯುತ್ತಿದ್ದು, ಈ ತಿಂಗಳ ಕೊನೆಯಲ್ಲಿ ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಆಯೋಗ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...