ಸಿಜೆಐ ಬಿ ಆರ್ ಗವಾಯಿ ಮೇಲೆ ಶೂ ಎಸೆತ ಪ್ರಕರಣ; ಘಟನೆ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ ಎಂದ ಆರೋಪಿ ವಕೀಲ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರತ್ತ ಶೂ ಎಸೆದ ಆರೋಪಿ ವಕೀಲ ರಾಕೇಶ್ ಕಿಶೋರ್, ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ನಾನು ಸರಿಯಾದುದ್ದನ್ನೇ ಮಾಡಿದ್ದೇನೆ. ಘಟನೆ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾನೆ.

“ಇದಕ್ಕೆ ದೇವರು ಪ್ರೇರಣೆ ನೀಡಿದ್ದು” ಎಂದು ಹೇಳಿಕೊಂಡಿರುವ ಅವರು, ಈ ದಾಳಿಗೆ ಮುನ್ನ ಎಲ್ಲ ಪರಿಣಾಮಗಳ ಬಗ್ಗೆ ಚಿಂತನೆ ನಡೆಸಿದ್ದಾಗಿ ತಿಳಿಸಿದ್ದಾನೆ.

“ನಾನು ಜೈಲುಪಾಲಾಗುತ್ತೇನೆ, ಅಲ್ಲಿ ನರಕ ಯಾತನೆ ಅನುಭವಿಸಬೇಕಾಗುತ್ತದೆ.. ಹೀಗೆ ಎಲ್ಲಾ ಪರಿಣಾಮಗಳನ್ನು ನಾನು ಪರಿಗಣಿಸಿದ್ದೆ… ಆದರೆ ದೇವರ ಹೆಸರಿನಲ್ಲಿ ಹಾಗೆ ಮಾಡಿದ್ದೆ.. ಏಕೆಂದರೆ ಇದನ್ನು ಮಾಡುವಂತೆ ಪ್ರೇರಣೆ ನೀಡಿದ್ದು ದೇವರು” ಎಂದು ಮಾಧ್ಯಮದ ಜತೆ ಮಾತನಾಡಿದ ವಕೀಲ ವಿವರಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ

ಕೋರ್ಟ್ ನಂ. 1ನಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಆರೋಪಿ ವಕೀಲ ಸಿಜೆಐ ಅವರತ್ತ ಶೂ ಎಸೆದಿದ್ದು, ಘಟನೆಯ ಬೆನ್ನಲ್ಲೇ ಅಖಿಲ ಭಾರತ ವಕೀಲರ ಮಂಡಳಿ ಆತನ ಸದಸ್ಯತ್ವವನ್ನು ರದ್ದುಪಡಿಸಿದೆ. ಕಿಶೋರ್‌ನ ನಡತೆ ನ್ಯಾಯಾಲಯದ ಘನತೆಗೆ ತಕ್ಕುದಾದುದ್ದಲ್ಲ ಎಂದು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅಭಿಪ್ರಾಯಪಟ್ಟಿದ್ದು, ಇದು ವಕೀಲರ ಕಾಯ್ದೆ-1961 ಹಾಗೂ ವೃತ್ತಿಪರ ನಡತೆ ಬಗೆಗಿನ ಕಾನೂನಿನ ಉಲ್ಲಂಘನೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ ಇದುವರೆಗೆ ಆರೋಪಿ ವಕೀಲನ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ವಕೀಲನನ್ನು ಕೋರ್ಟ್ ನಿಂದ ಹೊರ ಹಾಕುತ್ತಿರುವ ವೇಳೆ, “ಸನಾತನ ಧರ್ಮಕ್ಕೆ ಅವಮಾನವಾಗುವುದನ್ನು ನಾವು ಸಹಿಸುವುದಿಲ್ಲ” ಎಂಬ ಘೋಷಣೆ ಕೂಗಿದ್ದು ಕೇಳಿಬಂದಿತ್ತು. ಇದರಿಂದ ವಿಚಲಿತರಾಗದ ಸಿಜೆಐ, ತಾವು ನಡೆಸುತ್ತಿದ್ದ ಪ್ರಕರಣದಲ್ಲಿ ವಾದ ಮಂಡನೆ ಮುಂದುವರಿಸುವಂತೆ ವಕೀಲರಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...