ಮನೆಯಲ್ಲಿ ಮಲಗಿದ್ದ ಹೆಣ್ಣು ಮಗುವನ್ನು ಅಪಹರಿಸಿ, ಅತ್ಯಾಚಾರ ಎಸಗಿದ ದುರುಳರು; ಪೊಲೀಸ್ ವಶಕ್ಕೆ

Date:

ಮನೆಯಲ್ಲಿ ಮಲಗಿದ್ದ ಆರು ವರ್ಷದ ಹೆಣ್ಣು ಮಗುವನ್ನು ದುರುಳರು ಅಪಹರಿಸಿ ಅತ್ಯಾಚಾರ ಎಸಗಿ ಮಗುವನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿಟ್ಟು ಪರಾರಿಯಾದ ಘಟನೆ ಛತ್ತೀಸ್‌ಗಢದ ಹಳ್ಳಿಯೊಂದರಲ್ಲಿ ನಡೆದಿದೆ.

ಮಾರ್ಚ್‌ 6ರ ರಾತ್ರಿ ಕಂಕೇರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಗು ಮನೆಯಲ್ಲಿ ತನ್ನ ಹೆತ್ತವರ ಪಕ್ಕದಲ್ಲಿ ಮಲಗಿದ್ದಾಗ ಇಬ್ಬರು ಯುವಕರು ಕುಡಿದ ಮತ್ತಿನಲ್ಲಿ ಮನೆಗೆ ಪ್ರವೇಶಿಸಿ ಮಗುವನ್ನು ಅಪಹರಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ರಾಯಚೂರು | 6 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳನ್ನು ಅಮಿತ್ ಜೈನ್ (20) ಮತ್ತು ರೋಹನ್ ಜೈನ್ (19) ಎಂದು ಗುರುತಿಸಲಾಗಿದೆ.

ದುರುಳರು ಮಗುವನ್ನು ಅಪಹರಿಸಿ ಅದೇ ಹಳ್ಳಿಯಲ್ಲಿರುವ ಒಂದು ಕೊಳದ ಕಡೆಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಮಾಡಿ ನಂತರ ಬಿಟ್ಟು ಪರಾರಿಯಾಗಿದ್ದಾರೆ. ಪೋಷಕರು ರಾತ್ರಿ 12.30ರ ಸುಮಾರಿಗೆ ಎಚ್ಚರವಾದಾಗ ಮಗು ಇಲ್ಲದ್ದನ್ನು ನೋಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಡಿದ್ದಾರೆ. ಮಗು ಸಿಗದಿದ್ದಾಗ ಗ್ರಾಮದ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾರೆ. ಮುಖ್ಯಸ್ಥರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಪೊಲೀಸ್ ತಂಡಗಳು ಮತ್ತು ಗ್ರಾಮಸ್ಥರು ಮಗುವನ್ನು ಹುಡುಕಾಡಿದ್ದಾರೆ. ಈ ವೇಳೆ ಮಗು ಕೊಳದ ಬಳಿಯ ಹತ್ತಿರದ ಹೊಲದಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿರುವುದು ಕಂಡುಬಂದಿದೆ. ಆಕೆಯನ್ನು ಕಂಕೇರ್‌ನಲ್ಲಿರುವ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿತ್ತು.

ಪೊಲೀಸರು ಆರಂಭದಲ್ಲಿ ನಾಲ್ವರನ್ನು ಬಂಧಿಸಿದ್ದು, ವಿಚಾರಣೆಯ ಸಮಯದಲ್ಲಿ, ಅವರಲ್ಲಿ ಇಬ್ಬರು, ಅಮಿತ್ ಜೈನ್ ಮತ್ತು ರೋಹನ್ ಜೈನ್ ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಸಾಹು ಹೇಳಿದರು.

ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...