ಪಾಕ್‌ ಮಹಿಳೆಯನ್ನು ಮದುವೆಯಾಗಿದ್ದ ಯೋಧ; ಸಿಆರ್​ಪಿಎಫ್‌ನಿಂದ ವಜಾ

Date:

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್‌ ಕಳಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವವರಲ್ಲಿ ಕೆಲವರು ಭಾರತೀಯರನ್ನು ವಿವಾಹವಾಗಿದ್ದು, ಅವರು ಪಾಕ್‌ಗೆ ಮರಳಲು ನಿರಾಕರಿಸಿದ್ದಾರೆ. ಈ ನಡುವೆ, ಪಾಕಿಸ್ತಾನ್ ಮೂಲದ ಮಹಿಳೆಯನ್ನು ವಿವಾಹವಾಗಿದ್ದ ಕಾರಣಕ್ಕೆ ಸಿಆರ್‌ಪಿಎಫ್‌ ಯೋಧನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಘರೋಟಾ ನಿವಾಸಿಯಾಗಿರುವ ಮುನೀರ್ ಅಹ್ಮದ್ ಅವರನ್ನು ಕೇಂದ್ರ ಮೀಸಲು ಪೊಲೀಸ್‌ ಪಡೆಯಿಂದ (ಸಿಆರ್‌ಪಿಎಫ್‌) ವಜಾಗೊಳಿಸಲಾಗಿದೆ. ಮುನೀರ್ ಅವರು 2017ರಿಂದ ಸಿಆರ್‌ಪಿಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಪಾಕಿಸ್ತಾನಿ ಮಹಿಳೆ ಮಿನಾಲ್ ಖಾನ್ ಅವರನ್ನು 2023ರ ಮೇ ತಿಂಗಳಿನಲ್ಲಿ ಆನ್‌ಲೈನ್‌ನಲ್ಲಿ ಮದುವೆಯಾಗಿದ್ದರು. ಬಳಿಕ, ಮಿನಾಲ್ ಅವರು ಭಾರತಕ್ಕೆ ಬಂದಿದ್ದರು. ಆದರೆ, ಪಹಲ್ಗಾಮ್‌ ದಾಳಿಯ ಬೆನ್ನಲ್ಲೇ ಅವರನ್ನು ಸೇವೆಯಿಂದ ತೆಗೆದುಹಾಕಲಾಗಿದೆ.

ಮುನೀರ್ ಅವರು ತಮ್ಮ ಮದುವೆಯನ್ನು ಮರೆಮಾಚಿದ್ದರು. ಅಲ್ಲದೆ, ಮಿನಾಲ್ ಅವರ ವೀಸಾ ಅವಧಿ ಮುಗಿದ ಬಳಿಕವೂ ಅವರು ಭಾರತದಲ್ಲಿಯೇ ಉಳಿದಿದ್ದರು. ಅವರನ್ನು ಮುನೀರ್ ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದರು ಎಂದು ಆರೋಪಿಸಲಾಗಿದೆ.ಇದು ಗಂಭೀರ ದುಷ್ಕೃತ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದಿರುವ ಸಿಆರ್‌ಪಿಎಫ್‌ ಸೇವೆಯಿಂದ ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಉಗ್ರರ ದಾಳಿಗೆ ಹತ್ತು ದಿನ: ‘ಹುಡುಕಿ ಹುಡುಕಿ ಬೇಟೆ’ಯಾಡುತ್ತಿರುವುದು ಯಾರನ್ನು?

“ವಿವಾಹಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಸಿಆರ್‌ಪಿಎಫ್‌ನಿಂದ ಅನುಮತಿ ಪಡೆದುಕೊಂಡೇ ವಿವಾಹವಾಗಿದ್ದೇನೆ. ನಮ್ಮ ಮದುವೆಗೆ 2023ರ ಏಪ್ರಿಲ್ 30ರಂದು ಸಿಆರ್‌ಪಿಎಫ್‌ ಅನುಮತಿ ನೀಡಿತ್ತು. ಆದರೆ, ಇದೀಗ ನನ್ನನ್ನು ವಜಾಗೊಳಿಸಲಾಗಿದೆ. ಇದು ನಮಗೆ ಆಘಾತ ಉಂಟುಮಾಡಿದೆ. ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತೇನೆ” ಎಂದು ಮುನೀರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...