ಕಾಶ್ಮೀರ | ರಜೆ ಮೇಲೆ ಮನೆಗೆ ತೆರಳಿದ್ದ ಯೋಧ ನಾಪತ್ತೆ; ಅಪಹರಣ ಎಂದು ಕುಟುಂಬಸ್ಥರ ಆರೋಪ

Date:

ರಜೆಯ ಮೇಲೆ ಮನೆಗೆ ತೆರಳಿದ್ದ 25 ವರ್ಷದ ಯೋಧರೊಬ್ಬರು ಜಮ್ಮು ಮತ್ತು ಕಾಶ್ಮೀರ ಕುಲ್ಗಾಮ್ ಜಿಲ್ಲೆಯಿಂದ ನಾಪತ್ತೆಯಾಗಿದ್ದಾರೆ. ಆದರೆ ತಮ್ಮ ಪುತ್ರನನ್ನು ಅಪಹರಿಸಲಾಗಿದೆ ಎಂದು ಯೋಧನ ಕುಟುಂಬಸ್ಥರು ಆರೋಪಿಸಿದ್ದಾರೆ.

ಅಚಾತಲ್ ಪ್ರದೇಶದ ನಿವಾಸಿಯಾದ ಜಾವೇದ್ ಅಹ್ಮದ್ ವಾನಿ ಅವರು ಕುಲ್ಗಾಮ್ ಜಿಲ್ಲೆಯ ಲಡಾಖ್ ಪ್ರದೇಶದ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್‌ಫೆಂಟ್ರಿ ರೆಜಿಮೆಂಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈದ್‌ ಹಬ್ಬದ ಪ್ರಯುಕ್ತ ರಜೆಯ ಮೇಲೆ ಮನೆಗೆ ತೆರಳಿದ್ದರು. ಜುಲೈ 29ರ ರಾತ್ರಿ 8 ಗಂಟೆ ಸುಮಾರಿಗೆ ಪಾರನ್‌ಹಾಲ್‌ನಲ್ಲಿ ಜಾವೇದ್ ಅಹ್ಮದ್ ಅವರ ಕಾರು ಪತ್ತೆಯಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಜಾವೇದ್ ಅಹ್ಮದ್ ವಾನಿ ದಿನಸಿ ವಸ್ತುಗಳನ್ನು ಖರೀದಿಸಲು ಚೋವಲ್ಗಾಮ್‌ ಪ್ರದೇಶಕ್ಕೆ ಹೋಗಿದ್ದರು. ಎಷ್ಟು ಹೊತ್ತಾದರೂ ಅವರು ಮನೆಗೆ ವಾಪಸ್‌ ಆಗಿರಲಿಲ್ಲ. ಅವರ ಕುಟುಂಬವು ಜಾವೇದ್‌ ಅವರನ್ನು ಹತ್ತಿರದ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಹುಡುಕಲು ಪ್ರಾರಂಭಿಸಿತ್ತು. ಹುಡುಕಾಟದ ವೇಳೆ ಪರಾನ್ಹಾಲ್ ಗ್ರಾಮದಲ್ಲಿ ಅವರ ಕಾರಿನಲ್ಲಿ ಚಪ್ಪಲಿ ಮತ್ತು ರಕ್ತದ ಕಲೆಗಳು ಪತ್ತೆಯಾಗಿವೆ. ನಾಪತ್ತೆಯಾಗಿರುವ ಯೋಧನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್‌ನಲ್ಲಿ ನಿಮ್ಮ ಪುತ್ರ ಎಷ್ಟು ರನ್ ಸ್ಕೋರ್‌ ಮಾಡಿದ್ದಾರೆ? ಅಮಿತ್ ಶಾಗೆ ಸ್ಟಾಲಿನ್‌ ಪುತ್ರ ತಿರುಗೇಟು

“ನನ್ನ ಮಗನನ್ನು ಲಡಾಖ್‌ನಲ್ಲಿ ನಿಯೋಜಿಸಲಾಗಿತ್ತು. ಈದ್ ಪ್ರಯುಕ್ತ ಮನೆಗೆ ಬಂದಿದ್ದ ಆತ ನಾಳೆ ಕರ್ತವ್ಯಕ್ಕೆ ಸೇರಬೇಕಿತ್ತು.  ನಿನ್ನೆ ಸಂಜೆ ಮಾರುಕಟ್ಟೆಯಿಂದ ಕೆಲವು ವಸ್ತುಗಳನ್ನು ಖರೀದಿಸಲು ಹೊರಟಿದ್ದ. ಆತನನ್ನು ಕೆಲವರು ತಡೆದು ಅಪಹರಿಸಿದ್ದಾರೆ. ನಾನು ಅವರಿಗೆ ಮನವಿ ಮಾಡುತ್ತೇನೆ, ದಯವಿಟ್ಟು ನನ್ನ ಮಗನನ್ನು ಬಿಡುಗಡೆ ಮಾಡಿ” ಎಂದು ಯೋಧನ ತಾಯಿ ವಿಡಿಯೋ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಹಿಂದೆಯೂ ಈ ಪ್ರದೇಶದಲ್ಲಿ ರಜೆಯ ಮೇಲೆ ಆಗಮಿಸಿದ್ದ ಹಲವಾರು ಸೈನಿಕರನ್ನು ಉಗ್ರರು ಅಪಹರಿಸಿ ಹತ್ಯೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...