ಆಭರಣಗಳಿಗಾಗಿ ತಾಯಿಯ ಚಿತೆ ಮೇಲೆ ಮಲಗಿ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಪುತ್ರ

Date:

ಮೃತ ತಾಯಿಯ ಕೈಯಲ್ಲಿದ್ದ ಬೆಳ್ಳಿ ಬಳೆ ಹಾಗೂ ಇತರ ಆಭರಣಗಳಿಗಾಗಿ ವ್ಯಕ್ತಿಯೊಬ್ಬ ದಾಂಧಲೆ ನಡೆಸಿ, ತಾಯಿಯ ಚಿತೆ ಮೇಲೆ ಮಲಗಿ, ಅಂತ್ಯಕ್ರಿಯೆಗೆ ಅಡ್ಡಿಪಡಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ಜೈಪುರ ಗ್ರಾಮೀಣ ಪ್ರದೇಶದ ವಿರಾಟ್ ನಗರ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿರಾಟ್‌ ನಗರದ ನಿವಾಸಿ ಚೀತರ್ ರೇಗರ್(80) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆಗಾಗಿ ಸ್ಥಳೀಯ ಸ್ಮಾಶಾನಕ್ಕೆ ಕೊಂಡೊಯ್ದಿದ್ದರು. ಅಂತ್ಯಕ್ರಿಯೆಗೆ ಎಲ್ಲ ಸಿದ್ದತೆಗಳು ನಡೆದಿದ್ದ ಸಮಯದಲ್ಲಿ, ಗ್ರಾಮದ ಹಿರಿಯರು ಮೃತ ಮಹಿಳೆಯ ಬೆಳ್ಳಿ ಬಳೆಗಳು ಮತ್ತು ಇತರ ಆಭರಣಗಳನ್ನು ಆಕೆಯನ್ನು ಸಲುಹಿದ್ದ ಹಿರಿಯ ಮಗ ಗಿರ್ಧಾರಿ ಲಾಲ್‌ಗೆ ನೀಡಿದ್ದಾರೆ. ಆದರೆ, ತನಗೂ ಆಭರಣಗಳನ್ನು ನೀಡಬೇಕೆಂದು ಹಠಕ್ಕೆ ಬಿದ್ದಿದ್ದು, ಚಿತೆ ಮೇಲೆಯೇ ಮಲಗಿ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಸ್ಥರು ಮನವೊಲಿಸಲು ಯತ್ನಿಸಿದರೂ, ಆತ ಆಭರಣಗಳನ್ನು ತನಗೂ ಹಂಚಿಕೆ ಮಾಡದಿದ್ದರೆ, ಚಿತೆಯ ಮೇಲೆ ಮಲಗಿ ಜೀವಂತವಾಗಿ ಸುಟ್ಟುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಗ್ರಾಮಸ್ಥರು ಆತನನ್ನು ಬಲವಂತವಾಗಿ ಕೆಳಗಿಳಿಸಿ, ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಆತ ಉರಿಯುತ್ತಿದ್ದ ಚಿತೆಯ ಪಕ್ಕದಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾನೆ. ಬಳಿಕ, ಆತನಿಗೂ ಕೆಲವು ಆಭರಣಗಳನ್ನು ಕೊಟ್ಟಿದ್ದು, ಆತ ಮೌನವಾಗಿ ತೆರಳಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...