ಸೆಕ್ಷನ್ 144 ಜಾರಿ| ಲೇಹ್ ಬಾರ್ಡರ್ ಮಾರ್ಚ್ ರದ್ದು, ಸರ್ಕಾರದಿಂದ ನಿಗ್ರಹದ ಪ್ರಯತ್ನ ಎಂದ ಸೋನಮ್ ವಾಂಗ್‌ಚುಕ್

Date:

ಲೇಹ್‌ನಲ್ಲಿ ಏಪ್ರಿಲ್ 7ರಂದು “ಬಾರ್ಡರ್ ಮಾರ್ಚ್” ಕರೆ ನೀಡಿದ್ದ ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಲಡಾಖ್ ಕೇಂದ್ರಾಡಳಿತ ಪ್ರದೇಶವು ಲೇಹ್ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಿ ಬಳಿಕ ಈ ಬಾರ್ಡರ್ ಮಾರ್ಚ್ ಅನ್ನು ರದ್ದುಗೊಳಿಸಿದ್ದಾರೆ. ಭಾನುವಾರ ಲೇಹ್‌ನಿಂದ ಗಡಿವರೆಗೆ ಪಶ್ಮಿನಾ ಮಾರ್ಚ್ ಕರೆಯನ್ನು ನೀಡಲಾಗಿತ್ತು.

ಕೇಂದ್ರಾಡಳಿತ ಪ್ರದೇಶದ ಆಡಳಿತವು ಈ ಪ್ರದೇಶದಲ್ಲಿ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ. ಈ ಕಾರಣದಿಂದಾಗಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ. ಆದ್ದರಿಂದ ಮಾರ್ಚ್ ಅನ್ನು ಹಿಂಪಡೆಯುವುದಾಗಿ ವಾಂಗ್‌ಚುಕ್ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಲಡಾಖ್‌ನ ಪರಿಸರ ಮತ್ತು ಸ್ಥಳೀಯ ಸಂಸ್ಕೃತಿಯ ರಕ್ಷಣೆಗಾಗಿ 21 ದಿನಗಳ ಉಪವಾಸ ಕುಳಿತಿದ್ದ ವಾಂಗ್‌ಚುಕ್, ಏಪ್ರಿಲ್ 7 ರಂದು ಚೀನಾ ಗಡಿಗೆ ಮೆರವಣಿಗೆಗೆ ಕರೆ ನೀಡಿದ್ದರು. ಸ್ಥಳೀಯ ಬುಡಕಟ್ಟು ಮುಖಂಡರ ನೇತೃತ್ವದಲ್ಲಿ ಮೆರವಣಿಗೆ ನಡೆಯಬೇಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಲೇಹ್ ಬಾರ್ಡರ್ ಮಾರ್ಚ್| ಸೆಕ್ಷನ್ 144 ಜಾರಿ, ಇಂಟರ್ನೆಟ್ ವೇಗ 2ಜಿಗೆ ಇಳಿಕೆ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಾಂಗ್‌ಚುಕ್, “ನಾವು ಕಳೆದ 35 ದಿನಗಳಿಂದ ಉಪವಾಸ ಮತ್ತು ಪ್ರಾರ್ಥನೆಯ ರೂಪದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ. ನಾವು ಏಪ್ರಿಲ್ 7 ರಂದು ಶಾಂತಿಯುತ ಮೆರವಣಿಗೆಯನ್ನು ಯೋಜಿಸಿದ್ದೇವೆ. ಉತ್ತರದಲ್ಲಿ ಚೀನಾದ ಆಕ್ರಮಣ ಮತ್ತು ನಮ್ಮದೇ ಕಾರ್ಪೊರೇಟ್‌ಗಳಿಂದ ಸಾವಿರಾರು ಚದರ ಕಿಲೋಮೀಟರ್ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಚಂಗ್ಪಾ ಅಲೆಮಾರಿ ಬುಡಕಟ್ಟು ಜನಾಂಗದವರ ದುಃಸ್ಥಿತಿಯನ್ನು ಎತ್ತಿ ತೋರಿಸುವುದು ಪಶ್ಮಿನಾ ಮಾರ್ಚ್‌ನ ಉದ್ದೇಶವಾಗಿತ್ತು” ಎಂದು ತಿಳಿಸಿದರು.

“ಮಾರ್ಚ್‌ನ ಉದ್ದೇಶವನ್ನು ಮಾರ್ಚ್‌ಗೆ ಮುಂಚಿತವಾಗಿಯೇ ಪೂರೈಸಲಾಗಿದೆ” ಎಂದು ಹೇಳಿದ ಅವರು, ಸರ್ಕಾರವು “ನಿಗ್ರಹ” ಮಾಡುವ ಪ್ರಯತ್ನ ಮಾಡುತ್ತಿದೆ, ಅತಿಯಾದ ಪ್ರತಿಕ್ರಿಯೆ ಮಾಡುತ್ತಿದೆ ಎಂದಿದ್ದಾರೆ. “ಈ ಪರಿಸ್ಥಿತಿಗಳಲ್ಲಿ ಹಿಂಸಾಚಾರದ ಸಾಧ್ಯತೆಗಳು ತುಂಬಾ ಹೆಚ್ಚು, ಅದು ಆಗಬಹುದು. ಇದರಿಂದಾಗಿ ಈ ಶಾಂತಿಯುತ ಆಂದೋಲನವನ್ನು ರಾಷ್ಟ್ರವಿರೋಧಿ ಎಂಬ ಹಣೆಪಟ್ಟಿ ಕಟ್ಟಬಹುದು. ಆದರೆ ನಡೆಯುತ್ತಿರುವ ಶಾಂತಿಯುತ ಉಪವಾಸ ಮುಂದುವರಿಯಲಿದೆ” ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ?   ಲಡಾಖ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ಪ್ರಕಾಶ್ ರಾಜ್; ವಾಂಗ್​ಚುಕ್ ಹೋರಾಟಕ್ಕೆ ಬೆಂಬಲ

ಲಡಾಖ್‌ಗೆ ರಾಜ್ಯತ್ವ ನೀಡಲು, ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಲು ಆಗ್ರಹಿಸಿ, ಇತರೆ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಕೇಂದ್ರದೊಂದಿಗಿನ ಹಲವಾರು ಸುತ್ತಿನ ಮಾತುಕತೆ ವಿಫಲವಾಗಿದ್ದು, ಈಗ ಪ್ರತಿಭಟನೆಯ ಕಾವು ಅಧಿಕವಾಗುತ್ತಿದೆ. 2019ರ ಲೋಕಸಭೆ ಚುನಾವಣೆ ಮತ್ತು 2020 ರ ಸ್ಥಳೀಯ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ, ಕೇಂದ್ರಾಡಳಿತ ಪ್ರದೇಶಕ್ಕೆ 6ನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆಯ ಬಗ್ಗೆ ಬಿಜೆಪಿ ಭರವಸೆ ನೀಡಿತು. 2019ರಲ್ಲಿ ಲಡಾಖ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತು. ಆದರೆ ಈವರೆಗೂ ಭರವಸೆಯನ್ನು ಈಡೇರಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...