ಎಚ್ಚರಿಕೆಯಿಂದ ಇರದಿದ್ದರೆ ನೀವೇ ಮುಂದಿನ ಗುರಿ; ಎಸ್‌ಪಿ ವಕ್ತಾರರಿಗೆ ‘ಬಿಷ್ಣೋಯ್ ಗ್ಯಾಂಗ್’ ಬೆದರಿಕೆ

Date:

ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ತಾರಿಕ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದಿದೆ. ಗ್ಯಾಂಗ್‌ಗೆ ಸೇರಿದ ವ್ಯಕ್ತಿ ಎಂದು ಹೇಳಿಕೊಂಡು ಓರ್ವ ಕರೆ ಮಾಡಿದ್ದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಎರಡು ದಿನಗಳ ಹಿಂದೆ ಈ ಕರೆ ಮಾಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶನಿವಾರ ಸಂಜೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ಈ ಬೆದರಿಕೆ ಕರೆಯ ಆಡಿಯೋ ಹರಿದಾಡುತ್ತಿದೆ. ಎಸ್‌ಪಿ ನಾಯಕ ಖಾನ್ ಅವರನ್ನು ನಿಂದಿಸಲಾಗಿದೆ.

ಇದನ್ನು ಓದಿದ್ದೀರಾ? ಬಿಷ್ಣೋಯ್ ಗ್ಯಾಂಗ್ ಜೀವ ಬೆದರಿಕೆ; ಝಡ್ ಭದ್ರತೆ ಕೋರಿದ ಬಿಹಾರ ಸಂಸದ ಪಪ್ಪು ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಖಾನ್, “ಕಳೆದ ಎರಡು ತಿಂಗಳಿನಿಂದ ನನಗೆ ನಿಂದನೀಯ ಮತ್ತು ಬೆದರಿಕೆ ಕರೆಗಳು ಬರುತ್ತಿವೆ. ಅದನ್ನು ನಾನು ನಿರ್ಲಕ್ಷಿಸಿದೆ. ಆದರೆ ಶುಕ್ರವಾರ ರಾತ್ರಿ ಕರೆ ಮಾಡಿದ ವ್ಯಕ್ತಿ ನಿಂದಿಸಿದ್ದು, ಬೆದರಿಕೆ ಹಾಕಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕಡೆಯಿಂದ ಮಾತನಾಡುವುದಾಗಿ ಕರೆ ಮಾಡಿದವರು ಹೇಳಿದ್ದಾರೆ” ಎಂದು ತಿಳಿಸಿದರು.

ಬೆದರಿಕೆಯ ಗಂಭೀರತೆಯನ್ನು ಪರಿಗಣಿಸಿ ನಾನು ತಕ್ಷಣ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಮಾಹಿತಿ ನೀಡಿದ್ದೇನೆ. ಈಗ, ಆ ಸಂಭಾಷಣೆಯ ಆಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

“ಇದು ವಂಚನೆಯಾಗಿರಬಹುದು ಎಂದು ನಾನು ಪೊಲೀಸರಿಗೆ ತಿಳಿಸಿದ್ದೇನೆ. ಆದರೆ ಕರೆ ಮಾಡಿದವರನ್ನು ಗುರುತಿಸಿ ಬಂಧಿಸುವುದು ಅತ್ಯಗತ್ಯ. ಎಲ್ಲಾ ಮಾಹಿತಿಯನ್ನು ನಾನು ಪೊಲೀಸರಿಗೆ ಒದಗಿಸಿದ್ದೇನೆ” ಎಂದು ಖಾನ್ ತಿಳಿಸಿದ್ದಾರೆ. ಕರೆಯಲ್ಲಿ “ಎಚ್ಚರಿಕೆಯಿಂದ ಇರದಿದ್ದರೆ ನೀವೇ ಮುಂದಿನ ಗುರಿ” ಎಂದು ಹೇಳಲಾಗಿದೆ.

ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಮಂಗಳವಾರ ಖಾನ್ ಅವರನ್ನು ಲಕ್ನೋಗೆ ಕರೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...