ಶನಿವಾರ ರಾತ್ರಿ ರಾಜಸ್ಥಾನದ ಜಲಾವರ್‌ನಲ್ಲಿ ವೇಗವಾಗಿ ಬಂದ ಟ್ರಕ್ ಮದುವೆಯ ಅತಿಥಿಗಳಿದ್ದ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದ ಖಿಲ್ಚಿಪುರದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ 10 ಮಂದಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.
#WATCH | Rajasthan: Nine people died in a road accident in Panchola near Aklera, of Jhalawar district. They were returning from a marriage procession in a van which collided with a truck: Jhalawar SP, Richa Tomar pic.twitter.com/tCxEG2ltqM
— ANI (@ANI) April 21, 2024
ಮೂವರು ಪುರುಷರು ಸ್ಥಳದಲ್ಲೇ ಮೃತಪಟ್ಟರೆ, ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಬಳಿಕ ಆತನನ್ನು ಬಂಧಿಸಲಾಗಿದೆ.
ಇದನ್ನು ಓದಿದ್ದೀರಾ? ಒಡಿಶಾ| ಮೇಲ್ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ
ಈ ಬಗ್ಗೆ ಮಾಹಿತಿ ನೀಡಿದ ಜಲಾವರ್ ಪೊಲೀಸ್ ವರಿಷ್ಠಾಧಿಕಾರಿ ರಿಚಾ ತೋಮರ್, “ಝಲಾವರ್ ಜಿಲ್ಲೆಯ ಅಕ್ಲೇರಾ ಬಳಿಯ ಪಂಚೋಲಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದರು.
Rajasthan | Nine people died in a road accident in Panchola near Aklera, of Jhalawar district. They were returning from a marriage procession in a van which collided with a truck. The accused has been arrested. Bodies have been sent for post-mortem: Jhalawar Superintendent of…
— ANI (@ANI) April 21, 2024
“ಮದುವೆ ಮೆರವಣಿಗೆ ಮುಗಿಸಿ ವಾಪಸಾಗುತ್ತಿದ್ದ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಹೇಳಿದರು.





