ಸದನದಲ್ಲಿ ರಮ್ಮಿ ಆಡಿದ ಸಚಿವನಿಗೆ ಕ್ರೀಡಾ ಖಾತೆ

Date:

ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದಲ್ಲಿ ಗಂಭೀರ ಚರ್ಚೆಗಳು ನಡೆಯುವ ವೇಳೆ, ಸದನದಲ್ಲಿ ಕುರಿತು ಆನ್‌ಲೈನ್‌ ರಮ್ಮಿ ಆಡಿದ್ದ ಸಚಿವ ಮಾಣಿಕ್‌ರಾವ್ ಕೊಕಾಟೆ ಅವರಿಗೆ ಕ್ರೀಡಾ ಮತ್ತು ಯುವ ಕಲ್ಯಾಣ ಖಾತೆ ನೀಡಲಾಗಿದೆ. ಈ ಹಿಂದೆ, ಅವರು ಕೃಷಿ ಖಾತೆಯನ್ನು ನಿರ್ವಹಿಸುತ್ತಿದ್ದರು. ಅವರ ಖಾತೆಯನ್ನು ಬದಲಿಸಲಾಗಿದ್ದು, ಈಗ ಕ್ರೀಡಾ ಖಾತೆ ನೀಡಲಾಗಿದೆ.

ಅಧಿವೇಶನದಲ್ಲಿ ಮಾಣಿಕ್‌ರಾವ್ ಅವರು ರಮ್ಮಿ ಆಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿಪಕ್ಷಗಳು ಮಾಣಿಕ್‌ರಾವ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು.

ಇದೆಲ್ಲದರ ನಡುವೆ ಮಹಾರಾಷ್ಟ್ರ ಸಚಿವ ಸಂಪುಟದ ಪುನರ್‌ರಚನೆಯಾಗಿದೆ. ಆದರೆ, ಉಪಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಶಿವಸೇನಾ (ಶಿಂಧೆ ಬಣ)ಕ್ಕೆ ಸೇರಿದವರಾದ ಮಾಣಿಕ್‌ರಾವ್ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯುವ ಬದಲು, ಅವರ ಖಾತೆಯನ್ನು ಬದಲಿಸಲಾಗಿದೆ. ಕ್ರೀಡಾ ಖಾತೆಯನ್ನು ಮಾಣಿಕ್‌ರಾವ್ ಅವರಿಗೆ ನೀಡಲಾಗಿದ್ದು, ಕೃಷಿ ಖಾತೆಗೆ ದತ್ತಾತ್ರೇಯ ಭರಾಣೆ ಅವರನ್ನು ನೇಮಿಸಲಾಗಿದೆ. ಆದಾಗ್ಯೂ, ತಮ್ಮ ಪಕ್ಷದ ಸಚಿವರಿಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸುವಂತೆ ಏಕನಾತ್‌ ಶಿಂಧೆ ಅವರಿಗೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದನದಲ್ಲಿ ಮಾಣಿಕ್‌ರಾವ್ ರಮ್ಮಿ ಆಡುತ್ತಿದ್ದ ವಿಡಿಯೋ ಹಂಚಿಕೊಂಡಿದ್ದ ಎನ್‌ಸಿಪಿ (ಶರದ್‌ ಬಣ) ಶಾಸಕ ರೋಹಿತ್ ಪವಾತ್, “ಮಹಾರಾಷ್ಟ್ರದಲ್ಲಿನ ಕೃಷಿ ಬಿಕ್ಕಟ್ಟು ತೀವ್ರಗೊಂಡಿದೆ. ಇಂತಹ ಸಂದರ್ಭದಲ್ಲಿ ಕೃಷಿ ಸಮಸ್ಯೆಗಳ ಪರಿಹಾರಕ್ಕೆ ಯೋಜನೆ, ಚಿಂತನೆ ನಡೆಸಬೇಕಾದ ಸಚಿವರು ರಮ್ಮಿ ಆಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಕೃಷಿ ಸಚಿವರ ವರ್ತನೆ ಮತ್ತು ಬೇಜವಾಬ್ದಾರಿಯನ್ನು ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಮಾಣಿಕ್‌ರಾವ್ ವಿರುದ್ಧ ಶಾಸಕಾಂಗ ತನಿಖೆ ನಡೆದಿದ್ದು, ಅವರು ಸುಮಾರು 18 ರಿಂದ 22 ನಿಮಿಷಗಳ ಕಾಲ ಮೊಬೈಲ್‌ನಲ್ಲಿ ರಮ್ಮಿ ಆಡಿದ್ದಾರೆ ಎಂಬುದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...