ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ: ಒಂಬತ್ತು ಭಾರತೀಯ ಮೀನುಗಾರರ ಬಂಧನ

Date:

ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ ಮಂಗಳವಾರ ಮುಂಜಾನೆ ಡೆಲ್ಫ್ಟ್ ದ್ವೀಪದ ಬಳಿ ಒಂಬತ್ತು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಜೊತೆಗೆ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ವಶಕ್ಕೆ ಪಡೆದಿದೆ. ಬಂಧಿತರನ್ನು ಶ್ರೀಲಂಕಾಕ್ಕೆ ಕರೆದೊಯ್ಯಲಾಗಿದೆ.

ರಾಮೇಶ್ವರಂನಿಂದ 500ಕ್ಕೂ ಹೆಚ್ಚು ದೋಣಿಗಳು ಸೋಮವಾರ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದೆ. ಮೀನುಗಾರರು ಐಎಂಬಿಎಲ್ ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ, ಕೆಲವು ದೋಣಿಗಳು ಐಎಂಬಿಎಲ್‌ಗೆ ಪ್ರವೇಶಿಸಿವೆ ಎಂದು ಆರೋಪಿಸಲಾಗಿದೆ.

ಶ್ರೀಲಂಕಾ ನೌಕಾಪಡೆಯ ಗಸ್ತು ಘಟಕವು ದೋಣಿಗಳನ್ನು ಬೆನ್ನಟ್ಟಿದ್ದು, ಶ್ರೀಲಂಕಾ ಜಲ ಗಡಿಯನ್ನು ದಾಟುತ್ತಿದ್ದಂತೆ ಭಾರತೀಯ ದೋಣಿಯನ್ನು ವಶಕ್ಕೆ ಪಡೆದು ಭಾರತೀಯ ಮೀನುಗಾರರನ್ನು ಬಂಧಿಸಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಶ್ರೀಲಂಕಾದಿಂದ 21 ಮೀನುಗಾರರ ಬಂಧನ: ಬಿಡುಗಡೆಗೆ ಒತ್ತಾಯಿಸಿ ತಮಿಳುನಾಡು ಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ

ಬಂಧಿತ ಮೀನುಗಾರರು ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಮೂಲದವರು ಎಂದು ರಾಮನಾಥಪುರದ ಮೀನುಗಾರಿಕಾ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊದಲ ದೋಣಿಯಲ್ಲಿದ್ದ ಬಂಧಿತ ಐವರು ಮೀನುಗಾರರನ್ಜು ಸಹಾಯ ರಾಬರ್ಟ್ (49), ಯಾಕೋಬ್ (24), ಮುತ್ತುರಾಮಲಿಂಗಂ (65), ರಾಧಾ (44), ಮತ್ತು ಶೇಖರ್ (40) ಎಂದು ಗುರುತಿಸಲಾಗಿದೆ. ಎರಡನೇ ದೋಣಿಯಲ್ಲಿ ಹರಿಕೃಷ್ಣನ್ (50), ಪೊನ್ ರಾಮರಾಜ್ (26), ರಾಮ್‌ಕುಮಾರ್ (24), ಮತ್ತು ಲಿಬಿನ್ ಸಾಯಿ (25) ಎಂಬ ನಾಲ್ವರು ಮೀನುಗಾರರು ಇದ್ದರು. ಬಂಧಿತರನ್ನು ಕಾನೂನು ಕ್ರಮಗಳಿಗಾಗಿ ಶ್ರೀಲಂಕಾಕ್ಕೆ ಕರೆದೊಯ್ಯಲಾಗಿದೆ.

ಭಾರತೀಯ ಮೀನುಗಾರರ ಬಂಧನಕ್ಕೆ ರಾಮೇಶ್ವರಂನ ಮೀನುಗಾರರ ಸಂಘ ಖಂಡನೆ ವ್ಯಕ್ತಪಡಿಸಿದೆ. ಇನ್ನು ಶ್ರೀಲಂಕಾ ನೌಕಾಪಡೆಯಿಂದ ಮೀನುಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಕಳೆದ ವಾರ ಡಿಎಂಕೆ ಮತ್ತು ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಮೀನುಗಾರರು ಬೃಹತ್ ಪ್ರತಿಭಟನೆ ನಡೆಸಿದ್ದರು.

ಜುಲೈನಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾದ ಭಾರತೀಯ ಮೀನುಗಾರರನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ. ಭಾರತೀಯ ಮೀನುಗಾರರನ್ನು ಮತ್ತು ಶ್ರೀಲಂಕಾ ಸರ್ಕಾರವು ಜಪ್ತಿ ಮಾಡಿರುವ ಬೋಟ್‌ಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರ ಸಂಘ ಒತ್ತಾಯಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...