ದೀಪಾವಳಿ ಬೋನಸ್ ಕೊಟ್ಟಿಲ್ಲವೆಂದು ಟೋಲ್‌ನ ಎಲ್ಲ ಗೇಟ್‌ಗಳನ್ನು ತೆರೆದ ಸಿಬ್ಬಂದಿ

Date:

ದೀಪಾವಳಿ ಬೋನಸ್ ಕೊಡಲು ನಿರಾಕರಿಸಿದ್ದನ್ನು ಖಂಡಿಸಿ ನೌಕರರು ಮುಷ್ಕರ ನಡೆಸಿದ್ದು, ಟೋಲ್‌ ಪ್ಲಾಜಾದ ಎಲ್ಲ ಗೇಟ್‌ಗಳನ್ನು ತೆರೆದು ವಾಹನಗಳಿಗೆ ಪಾವತಿ ಮುಕ್ತ ಸಂಚಾರ ಒದಗಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದಲ್ಲಿರುವ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸಾವಿರಾರು ವಾಹನಗಳು ಟೋಲ್ ಪಾವತಿಸದೆ ಸಂಚಾರ ನಡೆಸಿವೆ. ಪರಿಣಾಮ, ರಸ್ತೆ ಮತ್ತು ಟೋಲ್ ನಿರ್ವಹಣೆಯ ಗುತ್ತಿಗೆ ಪಡೆದಿರುವ ಕಂಪನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗಿದೆ.

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಅಲ್ಲದೆ, ಇದು ಯಮುನಾ ಎಕ್ಸ್‌ಪ್ರೆಸ್‌ವೇಯನ್ನು ಸಂಧಿಸುವ ಮೂಲಕ ದೆಹಲಿ ಮತ್ತು ವಿವಿಧ ಪ್ರದೇಶಗಳಿಗೆ ಸಂಪರ್ಕ ಒದಗಿಸುತ್ತದೆ. ಈ ಎಕ್ಸ್‌ಪ್ರೆಸ್‌ವೇನಲ್ಲಿ ವಾಹನಗಳು ಟೋಲ್‌ ಪಾವತಿ ಮಾಡದೆ ಟೋಲ್‌ಅನ್ನು ದಾಟಿ ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೋಲ್ ಸಂಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾನಿರತ ಟೋಲ್ ಉದ್ಯೋಗಿಯೊಬ್ಬರು, “ನಾನು ಕಳೆದ ಒಂದು ವರ್ಷದಿಂದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ತುಂಬಾ ಕಷ್ಟಪಟ್ಟು ದುಡಿಯುತ್ತಿದ್ದೇವೆ. ಆದರೆ, ಅವರು ನಮಗೆ ಯಾವುದೇ ಬೋನಸ್ ನೀಡಿಲ್ಲ. ಸಂಬಳವನ್ನೂ ಸಮಯಕ್ಕೆ ಸರಿಯಾಗಿ ನೀಡುವುದಿಲ್ಲ. ಯಾವುದೇ ಬೋನಸ್‌ ನೀಡುವುದಿಲ್ಲವೆಂದು ಹೇಳುತ್ತಿದ್ದಾರೆ. ಪ್ರಶ್ನಿಸಿದರೆ, ಸಿಬ್ಬಂದಿಯನ್ನು ಬದಲಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: RSS- ನೂರು ವರ್ಷಗಳು : ಬಿಟ್ಟರೂ ಬಿಡದ ತಾತ್ವಿಕ ಪ್ರಶ್ನೆಗಳು

ಕಳೆದ ವಾರ, ದೀಪಾವಳಿ ಸಮಯದಲ್ಲಿ ನಮ್ಮ ಬ್ಯಾಂಕ್‌ ಖಾತೆಗಳಿಗೆ ಬೋನಸ್‌ ಹಣವನ್ನು ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಯಾವುದೇ ಬೋನಸ್ ಕೊಡುವುದಿಲ್ಲ ಎನ್ನುತ್ತಿದ್ದಾರೆ ಎಂದು ಉದ್ಯೋಗಿಗಳು ಕಿಡಿಕಾರಿದ್ದಾರೆ.

ಸಂಸ್ಥೆಯ ಧೋರಣೆಯಿಂದ ಕೋಪಗೊಂಡು, ಟೋಲ್ ಬೂತ್‌ನ ‘ತಡೆಬೂಮ್‌’ ತೆರೆದಿದ್ದು, ವಾಹನಗಳು ಟೋಲ್ ಪಾವತಿ ಮಾಡದೆ ಸಂಚರಿಸಲು ಬಿಟ್ಟಿದ್ದಾರೆ. ಪ್ರತಿಭಟನೆಗೆ ಮಣಿದ ಟೋಲ್‌ ಸಂಸ್ಥೆಯು ಬೋನಸ್‌ ನೀಡುವುದಾಗಿ ಭರವಸೆ ನೀಡಿದ್ದು, ಪ್ರತಿಭಟನೆಯಲ್ಲಿ ಹಿಂಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...