ಕಾಂಗ್ರೆಸ್‌ ಸಮಾವೇಶದಲ್ಲಿ ಮೋದಿಯವರಿಗೆ ಸಮಾಧಿ ಅಗೆಯುವ ಹೇಳಿಕೆ; ಉಭಯ ಸದನದಲ್ಲಿ ಗದ್ದಲ

Date:

ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ವೋಟ್‌ ಚೋರಿ ಮಹಾ ರ್ಯಾಲಿಯಲ್ಲಿ “ಮೋದಿಯವರಿಗೆ ಸಮಾಧಿಗೆ ಗುಂಡಿ ಅಗೆಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಹೇಳಿಕೆ ನೀಡಲಾಗಿದೆ ಎಂಬ ಆಡಳಿತ ಪಕ್ಷದ ಆರೋಪ ಗದ್ದಲಕ್ಕೆ ಕಾರಣವಾಗಿ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಮುಂದೂಡಿದ ಘಟನೆ ಸೋಮವಾರ ನಡೆದಿದೆ.

ಸೋಮವಾರ ಕಲಾಪ ಶುರವಾದ ಕೆಲವೇ ನಿಮಿಷಗಳ ನಂತರ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ನಾವು ಪರಸ್ಪರ ವಿರೋಧಿಗಳು, ಶತ್ರುಗಳಲ್ಲ. 2014 ರಲ್ಲಿ, ಬಿಜೆಪಿ ಸಂಸದರು ಎದುರಾಳಿಯ ವಿರುದ್ಧ ಅನುಚಿತ ಪದಗಳನ್ನು ಬಳಸಿದರು. ಪ್ರಧಾನಿ ಮೋದಿ ತಕ್ಷಣವೇ ತಮ್ಮ ಸಂಸದರನ್ನು ಕ್ಷಮೆಯಾಚಿಸಲು ಕೇಳಿಕೊಂಡರು. ನಿನ್ನೆ, ಕಾಂಗ್ರೆಸ್ ರ್ಯಾಲಿಯಲ್ಲಿ, ಪ್ರಧಾನಿ ಮೋದಿಯವರಿಗೆ ಸಮಾಧಿಗೆ ಗುಂಡಿ ತೋಡುವ ಹೇಳಿಕೆ ನೀಡಲಾಗಿದೆ. ಇದು ದೇಶಕ್ಕೇ ತುಂಬಾ ದುಃಖಕರ ಕ್ಷಣ. ಕಾಂಗ್ರೆಸ್ ಪಕ್ಷವು ಇಂತಹ ಪದಗಳನ್ನು ಬಳಸುತ್ತದೆ. ಆ ರ್ಯಾಲಿಯಲ್ಲಿ ಇಡೀ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಹಾಜರಿದ್ದಾಗಲೇ, ಪ್ರಧಾನಿಯವರಿಗೆ ಸಮಾಧಿ ಕಟ್ಟುವ ಘೋಷಣೆಗಳನ್ನು ಕೂಗಿದರು. ಈ ದೇಶಕ್ಕೆ ಇದಕ್ಕಿಂತ ದುರದೃಷ್ಟಕರ ಘಟನೆ ಇನ್ನೊಂದಿಲ್ಲ” ಎಂದು ಹೇಳಿದರು.

“ಕಾಂಗ್ರೆಸ್ ದೇಶಕ್ಕೆ ಕ್ಷಮೆಯಾಚಿಸಬೇಕು” ಎಂದು ರಿಜಿಜು ಹೇಳಿದರು. ಉಳಿದ ಸದಸ್ಯರು ಧ್ವನಿಗೂಡಿಸಿದರು. ಘೋಷಣೆಗಳ ನಡುವೆ ಗದ್ದಲ ಹೆಚ್ಚಾದಾಗ ಸ್ಪೀಕರ್ ಓಂ ಬಿರ್ಲಾ ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ‘ವೋಟ್ ಚೋರಿ’ ವಿರುದ್ಧದ ಪ್ರತಿಭಟನಾ ರ್ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಜಮಾಯಿಸಿದ್ದರು. ಕೇಂದ್ರ ಮತ್ತು ಭಾರತೀಯ ಚುನಾವಣಾ ಆಯೋಗವು ಚುನಾವಣೆಗಳಲ್ಲಿ ತಿರುಚಲು ಕೈಜೋಡಿಸುತ್ತಿದೆ. ಮೋದಿಯವರು ಮತಗಳ್ಳತನದಿಂದ ಗೆದ್ದು ಬರುತ್ತಿದ್ದಾರೆ ಎಂದು ಘೋಷಣೆಗಳನ್ನು ಕೂಗಲಾಗಿದೆ.

ಕೆಲವು ಕಾರ್ಯಕರ್ತರು “ಮೋದಿ ತೇರಿ ಕಬ್ರಾ ಖುದೇಗಿ, ಆಜ್ ನಹಿ ತೋ ಕಲ್ ಖುದೇಗಿ (ಮೋದಿ, ನಿಮ್ಮ ಸಮಾಧಿಯನ್ನು ಇಂದಲ್ಲದಿದ್ದರೆ ನಾಳೆ ಅಗೆಯಲಾಗುತ್ತದೆ) ವೋಟ್ ಚೋರ್, ಗಡ್ಡಿ ಛೋಡ್‌” ಎಂದು ಪ್ರಧಾನಿಯನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಕೂಗಿದ್ದರು.

ಈ ಬಗ್ಗೆ ಲೋಕಸಭೆಯ ಹೊರಗೆ ಪ್ರತಿಕ್ರಿಯಿಸಿದ ಸಂಸದೆ ಪ್ರಿಯಾಂಕಾ ಗಾಂಧಿ, “ರಸ್ತೆಯಲ್ಲಿ ಯಾರೋ ಕೂಗಿದರೆ ಅದಕ್ಕೆ ನಾವು ಹೊಣೆಯಾಗಲ್ಲ. ಇದು ಬಿಜೆಪಿಯವರ ವಿಷಯಾಂತರದ ನಾಟಕ” ಎಂದು ಹೇಳಿದ್ದಾರೆ.

ಘೋಷಣೆ ಕೂಗಿದ್ದು ನಾನೇ ಎಂದು ಕಾಂಗ್ರೆಸ್‌ ಸ್ಥಳೀಯ ನಾಯಕಿ ಮಂಜುಲತಾ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...