ಪಹಲ್ಗಾಮ್ ಉಗ್ರರ ದಾಳಿ ಕುರಿತ ಪಕ್ಷದ ನಾಯಕರ ಹೇಳಿಕೆ; ಅಂತರ ಕಾಯ್ದುಕೊಂಡ ಕಾಂಗ್ರೆಸ್

Date:

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ಬಗ್ಗೆ ಪಕ್ಷದ ಕೆಲ ಹಿರಿಯ ನಾಯಕರು ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ಅಂತರವನ್ನು ಕಾಯ್ದುಕೊಂಡಿದೆ. ಅವರ ಹೇಳಿಕೆಗಳು ʼಪಕ್ಷದ ಅಭಿಪ್ರಾಯವನ್ನು ಪ್ರತಿಬಿಂಬಿಸುವುದಿಲ್ಲʼ ಎಂದು ಹೇಳಿದೆ.

ʼಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪದಾಧಿಕಾರಿಗಳು ವ್ಯಕ್ತಪಡಿಸಿದ ಅಭಿಪ್ರಾಯಗಳು ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯ ಮಾತ್ರ ಪಕ್ಷದ ನಿಲುವನ್ನು ಪ್ರತಿನಿಧಿಸುತ್ತದೆʼ ಎಂದು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಣಿಶಂಕರ್ ಅಯ್ಯರ್, ಶಶಿ ತರೂರ್, ತಾರಿಕ್ ಹಮೀದ್ ಕರ್ರಾ ಮತ್ತು ಮಾಜಿ ಕೇಂದ್ರ ಸಚಿವ ಸೈಫುದ್ದೀನ್ ಅವರು ಪಹಲ್ಗಾಮ್ ಉಗ್ರರ ದಾಳಿ ಬಳಿಕ ಹೇಳಿಕೆಯನ್ನು ನೀಡಿದ್ದರು. ಅವರ ಹೇಳಿಕೆಗಳನ್ನು ಬಿಜೆಪಿ ನಾಯಕರು ಖಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇದು ನಮ್ಮ ಕಾಶ್ಮೀರ, ದ್ವೇಷವು ಪ್ರೀತಿಗೆ ಸೋತಿದೆ; ದಾಳಿಯ ನಂತರ ಪಹಲ್ಗಾಮ್‌ಗೆ ನಟ ಅತುಲ್ ಕುಲಕರ್ಣಿ ಭೇಟಿ

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು 2025ರ ಎಪ್ರಿಲ್ 24ರಂದು ಸಭೆ ಸೇರಿತ್ತು. ಸಭೆಯಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ನಿರ್ಣಯವನ್ನು ಅಂಗೀಕರಿಸಲಾಗಿತ್ತು. ಆ ಬಳಿಕ ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿ ಪಕ್ಷದ ಅಭಿಪ್ರಾಯಗಳನ್ನು ತಿಳಿಸಿದ್ದರು. ಆ ಬಳಿಕ ಕೆಲ ಕಾಂಗ್ರೆಸ್ ನಾಯಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಆದರೆ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರ ಹೇಳಿಕೆಗಳು ಪಕ್ಷದ ಅಭಿಪ್ರಾಯವನ್ನು ಬಿಂಬಿಸುವುದಿಲ್ಲ ಎಂದು ಹೇಳಿದ್ದಾರೆ.

ಪಹಲ್ಗಾಮ್‌ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದು ಹೇಳಿದ್ದರು. ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...