ದೆಹಲಿ ವಾಯು ಮಾಲಿನ್ಯ: 4 ರಾಜ್ಯಗಳಲ್ಲಿ ತ್ಯಾಜ್ಯ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರೀಂ ಆದೇಶ

Date:

ನವದೆಹಲಿ-ಎನ್‌ಸಿಆರ್‌ ಭಾಗದಲ್ಲಿ ತೀವ್ರ ಹೆಚ್ಚಾಗಿರುವ ವಾಯುಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್  ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ಅವಶೇಷ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಆದೇಶ ನೀಡಿದೆ.

ಸಂಜಯ್‌ ಕಿಶನ್‌ ಕೌಲ್ ಹಾಗೂ ಸುದಾಂಶು ದುಲಿಯಾ ಅವರಿದ್ದ ಪೀಠ, ವರ್ಷದಿಂದ ವರ್ಷಕ್ಕೆ ದೆಹಲಿಯನ್ನು ಮತ್ತಷ್ಟು ಹದಗೆಡುವುದಕ್ಕೆ ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ದೆಹಲಿ ವಾಯು ಮಾಲಿನ್ಯವನ್ನು ಪ್ರತಿ ಬಾರಿಯೂ ರಾಜಕೀಯ ಚರ್ಚೆಯಾಗಿಸಲು ಸಾಧ್ಯವಿಲ್ಲ. ಈ ವಾಯುಗುಣಮಟ್ಟದ ಕುಸಿತವು ‘ಜನರ ಆರೋಗ್ಯದ ಹತ್ಯೆ” ಎಂದು ಸುಪ್ರೀಂ ಕೋರ್ಟ್ ಹೇಳಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದೇ ಪ್ರತಿ ಚಳಿಗಾಲದಲ್ಲಿ ದೆಹಲಿಯ ವಾಯುಮಾಲಿನ್ಯಕ್ಕೆ ಕಾರಣವಾಗಿದೆ. ಕೃಷಿ ತ್ಯಾಜ್ಯ ಸುಡುವುದು ನಿಲ್ಲಬೇಕು. ನೀವು ಅದನ್ನು ಯಾವ ರೀತಿ ಮಾಡುತ್ತೀರೋ ಗೊತ್ತಿಲ್ಲ. ನಿಲ್ಲಿಸಬೇಕಿರುವುದು ನಿಮ್ಮ ಕೆಲಸ. ಏನಾದರೂ ತಕ್ಷಣ ಮಾಡಬೇಕು”  ಎಂದು ನಾಲ್ಕು ರಾಜ್ಯಗಳ ಸರ್ಕಾರಕ್ಕೆ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳಿಗೆ ಸ್ಥಾನ

ಈ ರೀತಿಯ ಬೆಳೆಗಳನ್ನು ಈ ಅವಧಿಯಲ್ಲಿ ಬೆಳೆಯಬೇಕೇ ಎಂದು ಗಂಭೀರವಾದ ಅವಲೋಕನ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“15 ವರ್ಷಗಳ ಹಿಂದೆ ಈ ಪ್ರಮಾಣದ ಬೆಳೆ ಬೆಳೆಯದ ಕಾರಣ ಈ ಸಮಸ್ಯೆ ಉದ್ಭವಿಸಲಿಲ್ಲ. ಈ ರೀತಿ ಬೆಳೆ ಬೆಳೆಯುವುದು, ಪಂಜಾಬ್‌ನ ನೀರಿನ ಮಟ್ಟವನ್ನು ನಾಶಪಡಿಸಿದೆ ಮತ್ತು ದೆಹಲಿಯ ಸುತ್ತಮುತ್ತಲಿನ ಹವಾಮಾನದ ಮೇಲೆ ಅದು ಪರಿಣಾಮ ಬೀರುತ್ತದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪಂಜಾಬ್​ನ 20 ಸಾವಿರಕ್ಕೂ ಅಧಿಕ ಕಡೆಗಳಲ್ಲಿ ಹುಲ್ಲು ಸುಡುವ ಪ್ರಕರಣಗಳು ವರದಿಯಾಗಿದೆ.  ಇದರಿಂದಾಗಿ ಪಂಜಾಬ್​ ಹಾಗೂ ದೆಹಲಿಯ ಹಲವು ನಗರಗಳ ವಾಯು ಗುಣಮಟ್ಟ ಸೂಚ್ಯಂಕ ತೀರ ಕಳಪೆ ಮಟ್ಟವನ್ನು ತಲುಪಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ದು, ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳನ್ನು ಮತ್ತು ಟ್ರಕ್‌ಗಳು ಹಾಗೂ ವಾಣಿಜ್ಯ ಬಳಕೆ ನಾಲ್ಕು ಚಕ್ರಗಳ ವಾಹನಗಳು ರಾಷ್ಟ್ರ ರಾಜಧಾನಿ ಪ್ರವೇಶಿಸುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವ ವಾಹನಗಳನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಪೀಠವು ದೆಹಲಿ ಸರ್ಕಾರವನ್ನು ಕೇಳಿದೆ. ನಗರದ ಮಾಲಿನ್ಯದ ಪ್ರಮುಖ ಮೂಲಗಳಲ್ಲಿ ವಾಹನ ಮಾಲಿನ್ಯವೂ ಒಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...