ನ್ಯಾಯಾಲಯಗಳಲ್ಲಿ ಪೂಜೆ-ಪುನಸ್ಕಾರ ನಿಲ್ಲಿಸಿ; ಸಂವಿಧಾನಕ್ಕೆ ತಲೆಬಾಗಿ: ನ್ಯಾಯಮೂರ್ತಿ ಅಭಯ್ ಓಕಾ

Date:

ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿದ್ದಾರೆ.

ಮಾರ್ಚ್ 3ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಹೊಸ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಂವಿಧಾನದ ಪೀಠಿಕೆಯಲ್ಲಿನ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಎಂಬ ಪದಗಳು ನನಗೆ ಬಹಳ ಮುಖ್ಯ” ಎಂದು ತಿಳಿಸಿದ್ದಾರೆ.

“ಭಾರತದ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷ ತುಂಬುತ್ತಿದೆ. ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಜಾತ್ಯತೀತತೆಯನ್ನು ಉತ್ತೇಜಿಸಬೇಕು” ಎಂದಿರುವ ನ್ಯಾಯಮೂರ್ತಿ, “ನ್ಯಾಯಾಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಂವಿಧಾನದ ಪೀಠಿಕೆಯ ಪ್ರತಿಗೆ ತಲೆಬಾಗುವ ಮೂಲಕ ಪ್ರಾರಂಭಿಸಬಹುದು” ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನವನ್ನು ಅಳವಡಿಸಿಕೊಂಡು ಈ ವರ್ಷ ನವೆಂಬರ್ 26 ರಂದು 75 ವರ್ಷಗಳು ತುಂಬಲಿದೆ. ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಎರಡು ಪ್ರಮುಖ ಪದಗಳಿವೆ. ಅವುಗಳಲ್ಲಿ ಒಂದು ‘ಜಾತ್ಯತೀತ’ ಮತ್ತು ಎರಡನೆಯದ್ದು ‘ಪ್ರಜಾಪ್ರಭುತ್ವ’. ಜಾತ್ಯತೀತತೆ ಎಂದರೆ ಧರ್ಮ ನಿರಪೇಕ್ಷ ಅಥವಾ ಸರ್ವ ಧರ್ಮ ಸಮಭಾವ. ನಾನು ಯಾವಾಗಲೂ ನ್ಯಾಯಾಂಗ ವ್ಯವಸ್ಥೆಯ ತಿರುಳು ಸಂವಿಧಾನ ಎಂದು ಭಾವಿಸುತ್ತೇನೆ” ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ತಿಳಿಸಿದ್ದಾರೆ.

“ಕೆಲವೊಮ್ಮೆ ನ್ಯಾಯಾಧೀಶರು ಸ್ಪಷ್ಟ ನಿಲುವನ್ನು ತೆಗೆದುಕೊಂಡು ಕೆಲವು ಮಾತುಗಳನ್ನು ಹೇಳಬೇಕಾಗುತ್ತದೆ. ನಾನು ಅಂಥದ್ದೇ ನಿಲುವು ತೆಗೆದುಕೊಂಡು ಹೇಳಲಿದ್ದೇನೆ. ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಪೂಜೆ-ಅರ್ಚನೆಯನ್ನು ನಿಲ್ಲಿಸಬೇಕು ಎಂದು ನಾನು ಭಾವಿಸುತ್ತೇನೆ. ಬದಲಿಗೆ, ನಾವು ಸಂವಿಧಾನದ ಪೀಠಿಕೆಯ ಪ್ರತಿಯನ್ನು ಇಟ್ಟುಕೊಂಡು ಅದಕ್ಕೆ ನಮಸ್ಕರಿಸಬೇಕಾಗಿದೆ. ಸಂವಿಧಾನವು ಜಾರಿಯಾಗಿ 75 ವರ್ಷಗಳನ್ನು ಪೂರೈಸಿದಾಗ, ಅದರ ಘನತೆಯನ್ನು ಕಾಪಾಡಿಕೊಳ್ಳಲು, ನಾವು ಈ ಹೊಸ ಪದ್ಧತಿಯನ್ನು ಪ್ರಾರಂಭಿಸಬೇಕು” ಎಂದು ನ್ಯಾಯಮೂರ್ತಿ ಓಕಾ ತಿಳಿಸಿದ್ದಾರೆ.

“ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅವಧಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ಧಾರ್ಮಿಕ ಆಚರಣೆಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದೆ. ಆದರೆ ಅವುಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಲಿಲ್ಲ” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾಷಣಗಳಲ್ಲಿ ‘ಪನೌತಿ, ಕಿಸೆಗಳ್ಳ’ ಎಂದು ಬಳಸಬೇಡಿ: ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ಸೂಚನೆ

ದೇಶದ ಸಂವಿಧಾನ ಅಂಗೀಕಾರವಾಗಿ 75 ವರ್ಷಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಕರೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...