ಸೈರನ್ ಗದ್ದಲಕ್ಕೆ ಬ್ರೇಕ್; ಟಿವಿ ಚಾನೆಲ್‌ಗಳಿಗೆ‌ ಕೇಂದ್ರ ಕಟ್ಟುನಿಟ್ಟಿನ ಸೂಚನೆ

Date:

ಆಪರೇಷನ್ ಸಿಂಧೂರದ ನಂತರ ಭಾರತ–ಪಾಕಿಸ್ತಾನ ಗಡಿಯಲ್ಲಿ ಉದ್ರಿಕ್ತತೆ ತೀವ್ರವಾಗುತ್ತಿದೆ. ಇತ್ತ ಟಿವಿ ಚಾನೆಲ್‌ಗಳು ಹಾಗೂ ಕೆಲ ಯೂಟ್ಯೂಬ್ ಮಾಧ್ಯಮಗಳು ಕಾರ್ಯಕ್ರಮಗಳಲ್ಲಿ ಸೈರನ್ ಶಬ್ದ ಬಳಕೆ ಮಾಡುತ್ತಿದ್ದು, ಸದ್ಯ ಇದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ.

ತುರ್ತು ಪರಿಸ್ಥಿತಿಯಲ್ಲಿ ನಾಗರಿಕರ ಎಚ್ಚರಿಕೆಗಾಗಿ ಬಳಸಬೇಕಾದ ಈ ಸೈರನ್‌ಗಳನ್ನು ಇನ್ನು ಮುಂದೆ ಸಮುದಾಯ ಜಾಗೃತಿ ಅಭಿಯಾನ ಹೊರತುಪಡಿಸಿ ಇನ್ನಿತರ ಕಾರ್ಯಕ್ರಮಗಳಲ್ಲಿ ಬಳಕೆ ಮಾಡಕೂಡದು ಎಂದು ಕೇಂದ್ರ ಸರ್ಕಾರ ಎಲ್ಲಾ ಟಿವಿ, ಯೂಟ್ಯೂಬ್ ಚಾನೆಲ್‌ಗಳಿಗೆ ಇಂದು ತಾಕೀತು ಮಾಡಿದೆ.

ಕಾರ್ಯಕ್ರಮಗಳಲ್ಲಿ ಸೈರನ್‌ಗಳ ನಿಯಮಿತ ಬಳಕೆಯು ವಾಯುದಾಳಿ ಸೈರನ್‌ಗಳ ಬಗ್ಗೆ ನಾಗರಿಕರ ಸೂಕ್ಷ್ಮತೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ದಾಳಿ ನಡೆದಾಗ ಸೈರನ್ ಮೊಳಗಿಸಿದರೆ ಮಾಧ್ಯಮಗಳಲ್ಲಿ ಬರುವ ಶಬ್ದ ಎಂದು ನಾಗರಿಕರು ಅಂದುಕೊಳ್ಳುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ಸೇವೆ, ನಾಗರಿಕ ರಕ್ಷಣೆ ಹಾಗೂ ಗೃಹ ರಕ್ಷಕ ದಳದ ಮಹಾನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌, “ಭಾರತ ಹಾಗೂ ಪಾಕಿಸ್ತಾನ ನಡುವಣ ಸೇನಾ ಸಂಘರ್ಷದ ಇಂತಹ ಸಂದರ್ಭದಲ್ಲಿ ವಾಸ್ತವ ವರದಿಗಳನ್ನು ಮಾತ್ರ ಪ್ರಕಟಿಸುವಂತೆ ಹಾಗೂ ಜವಾಬ್ದಾರಿಯುವ ವರದಿಗಾರಿಕೆ ಮಾಡುವಂತೆ ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ: ಯುದ್ಧದ ಭೀಕರತೆಯೂ… ಕುವೆಂಪು ನೀಡಿರುವ ಎಚ್ಚರಿಕೆಯೂ…

ಸಂಘರ್ಷಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸುವುದಕ್ಕೂ ಮುನ್ನ ಮಾಹಿತಿಯನ್ನು ಒಮ್ಮೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದರು. ರಕ್ಷಣಾ ಕಾರ್ಯಾಚರಣೆ ಹಾಗೂ ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಮಾಡುವುದನ್ನು ವಿದ್ಯುನ್ಮಾನ ಮಾಧ್ಯಮಗಳು ನಿಲ್ಲಿಸಬೇಕು. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...