ದೆಹಲಿ – ಉತ್ತರ ಪ್ರದೇಶದಲ್ಲಿ 4.4 ತೀವ್ರತೆಯ ಭೂಕಂಪನ

Date:

ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಈ ಸಮಯದಲ್ಲಿ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದರು. ಗುರುವಾರ ಬೆಳಗ್ಗೆ 9.04ಕ್ಕೆ ಭೂಮಿ ತೀವ್ರವಾಗಿ ಕಂಪಿಸಿತ್ತು. ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ, ಫರಿದಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರ ಬಿಂದು ಹರಿಯಾಣ.

ಎರಡು ನಿಮಿಷಗಳಲ್ಲಿ ಝಜ್ಜರ್‌ನಲ್ಲಿ ಎರಡು ಬಾರಿ ಭೂಕಂಪನ ಉಂಟಾಗಿದೆ. ಬೆಳಗ್ಗೆ 9.07 ಕ್ಕೆ ಹಾಗೂ ನಂತರ ಬೆಳಗ್ಗೆ 9.10 ಕ್ಕೆ ಝಜ್ಜರ್‌ನಲ್ಲಿ ಭೂಕಂಪನ ಸಂಭವಿಸಿದೆ. ಹಠಾತ್ ಕಂಪನದಿಂದಾಗಿ ಜನರು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆದಿವಾಸಿಗಳನ್ನು ಆದಿವಾಸಿಗಳೇ ಕೊಂದರು ಹೌದು… ಆದರೆ ಯಾಕಾಗಿ ಕೊಂದರು?

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಝಜ್ಜರ್‌ನಿಂದ ಉತ್ತರಕ್ಕೆ 10 ಕಿಲೋಮೀಟರ್ ದೂರವಿದ್ದು, ಅದರ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.4 ಎಂದು ಅಳೆಯಲಾಗಿದೆ.

ಝಜ್ಜರ್‌ ಪಕ್ಕದಲ್ಲಿರುವ ಬಹದ್ದೂರ್‌ಗಢದಲ್ಲೂ ಭೂಕಂಪನದ ಅನುಭವವಾಗಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಕಂಪನದ ಅನುಭವವಾದ ನಂತರ ಜನರು ಹೊರಗಡೆ ಆಗಮಿಸಿದ್ದರು ಎಂದು ವರದಿಯಾಗಿದೆ.

ರಾಷ್ಟ್ರೀಯ ವಿಪತ್ತು ಕಾರ್ಯನಿರ್ವಹಣಾ ಪಡೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಭೂಕಂಪನ ಸಂಭವಿಸಿದಾಗ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಮಾಹಿತಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...