ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಸರಪಳಿಯಿಂದ ಕಟ್ಟಿಹಾಕಿ ಬಂಧನ; ಭಾರೀ ಆಕ್ರೋಶ

Date:

4ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಹಾಸ್ಟೆಲ್‌ನಲ್ಲಿ ಸರಪಳಿ ಹಾಕಿ ಕಟ್ಟಿಹಾಕಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ನಡೆದಿದೆ. ವಿದ್ಯಾರ್ಥಿಯ ತಂದೆ ಮತ್ತು ಹಾಸ್ಟೆಲ್ ಸಿಬ್ಬಂದಿಗಳು ಆತನನ್ನು ಕಟ್ಟಿಹಾಕಿದ್ದರು ಎಂದು ಹೇಳಲಾಗಿದೆ. ಘಟನೆ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ.

ಜಿಲ್ಲೆಯ ನೀಲಗಿರಿ ಬ್ಲಾಕ್‌ನ ಬೆಗುನಿಯಾದಲ್ಲಿರುವ ಸರ್ಕಾರಿ ಯುಪಿ ಶಾಲೆಯಲ್ಲಿ ಘಟನೆ ನಡೆದಿದೆ. 8 ವರ್ಷದ ಬಾಲಕನನ್ನು ಕಬ್ಬಿಣದ ಸರಪಳಿಯಿಂದ ಮಂಚದ ಕಾಲಿಗೆ ಕಟ್ಟಿಹಾಕಲಾಗಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಹಾಸ್ಟೆಲ್ ಮೇಲ್ವಿಚಾರಕರ ಅನುಮತಿ ಇಲ್ಲದೆ ಬಾಲಕ ಹಾಸ್ಟೆಲ್‌ನಿಂದ ತನ್ನ ಮನೆಗೆ ಓಡಿಹೋಗುತ್ತಿದ್ದ. ಆತನ ಉಪಟಳವನ್ನು ತಡೆಯುವಂತೆ ವಿದ್ಯಾರ್ಥಿಯ ತಂದೆ ಶಿಕ್ಷಕರಲ್ಲಿ ಮನವಿ ಮಾಡಿದ್ದರು. ಅವರ ಮನವಿಯ ಮೇರೆಗೆ ಆತನನ್ನು ಸರಪಳಿಯಿಂದ ಬಂಧಿಸಲಾಗಿತ್ತು. ಆತನನ್ನು ಕಟ್ಟಿಹಾಕಿದ್ದದ್ದು ವಿದ್ಯಾರ್ಥಿಯ ತಂದೆಗೂ ಗೊತ್ತಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕ ಓಡಿಹೋಗದಂತೆ ತಡೆಯಲು ಒಂದು ದಿನದ ಮಟ್ಟಿಗೆ ಆತನನ್ನು ಸರಪಳಿಯಲ್ಲಿ ಬಂಧಿಸಲಾಗಿತ್ತು. ಆದರೆ, ಅದು ಸುಮಾರು 10 ದಿನಗಳವರೆಗೆ ಮುಂದುವರೆದಿದೆ. ಆತನ ತಂದೆಯ ಸಮ್ಮತಿಯ ಮೇರೆಗೆ ಬಾಲಕನನ್ನು ಕಟ್ಟಿಹಾಕಲಾಗಿತ್ತು ಎಂದು ಶಾಲೆಯ ಮುಖ್ಯೋಪಾಧ್ಯಯ ರಘುನಾಥ್ ಬುಗುಡೈ ತಿಳಿಸಿದ್ದಾರೆ.

“ಬಾಲಕ ಪದೇ-ಪದೇ ಮನೆಗೆ ಓಡಿ ಹೋಗುವುದರಿಂದ ಆತನ ತಂದೆ ಕೋಪಗೊಂಡಿದ್ದರು. ಮಗನನ್ನು ಶಾಲೆಗೆ ಕರೆತಂದಿದ್ದ ತಂದೆ, ಆತನನ್ನು ತರಗತಿಗಳಿಗೆ ಹಾಜರಾಗಬೇಕಾದಾಗ ಹೊರತುಪಡಿಸಿ, ಉಳಿದೆಲ್ಲ ಸಮಯದಲ್ಲಿಯೂ ಸರಪಳಿಯಲ್ಲಿ ಕಟ್ಟಿಹಾಕುವಂತೆ ಹಾಸ್ಟೆಲ್ ಪ್ಯೂನ್‌ ಬಳಿ ಮನವಿ ಮಾಡಿದ್ದರು” ಎಂದು ರಘುನಾಥ್ ಬುಗುಡೈ ಹೇಳಿದ್ದಾರೆ.

ಇತ್ತೀಚೆಗೆ, ಹಾಸ್ಟೆಲ್‌ಗೆ ತೆರಳಿದ್ದ ಕೆಲವು ಶಿಕ್ಷಕರು ಬಾಲಕನನ್ನು ಕಟ್ಟಿಹಾಕಿರುವುದನ್ನು ವಿಡಿಯೋ ಮಾಡಿದ್ದರು. ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ನೀಲಗಿರಿ ಉಪ-ಕಲೆಕ್ಟರ್ ಮಧುಸ್ಮಿತಾ ಸಮಂತರಾಯ ಅವರು ಶಾಲೆಗೆ ಭೇಟಿ ನೀಡಿ ಮುಖ್ಯೋಪಾಧ್ಯಾಯ, ಸಿಬ್ಬಂದಿಗಳು ಹಾಗೂ ಬಾಲಕನ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

“ನಾವು ಮತ್ತೊಮ್ಮೆ ಹೇಳಿಕೆಗಳನ್ನು ಪರಿಶೀಲಿಸುತ್ತೇವೆ. ತನಿಖಾ ವರದಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುತ್ತೇವೆ. ಘಟನೆ ಹಾಸ್ಟೆಲ್ ಆವರಣದಲ್ಲಿ ನಡೆದಿರುವುದರಿಂದ, ಇದು ಸಂಸ್ಥೆಯ ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...